ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ ಟಿ.ಬಿ.ಜಯಚಂದ್ರ

 ಸಿರಾ :

      ಸಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನಕ್ಕೆ ಬಳಸಲಾಗಿರುವ ಇವಿಎಂ ಯಂತ್ರಗಳ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ.

      ಈ ಚುನಾವಣೆ ನನಗೆ 10ನೇ ಚುನಾವಣೆಯಾಗಿದೆ. ಆದರೆ ಹಿಂದೆಂದೂ ಕಾಣದಂತಹ ಭ್ರಷ್ಟಾಚಾರ ಈ ಚುನಾವಣೆಯಲ್ಲಿ ನಡೆಯುತ್ತಿದೆ. ಅಧಿಕಾರಿಗಳು ಪಕ್ಷವೊಂದರ ಏಜೆಂಟರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಇದು ಅತ್ಯಂತ ಹೇಯ ಕೃತ್ಯವಾಗಿದೆ ಎಂದು ಆಕ್ರೋಶ ಹೊರ ಹಾಕಿದರು.
ಸಿರಾದಲ್ಲಿ ಮತದಾನದ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾನು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದೇನೆ. ಆದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ದೂರಿದರು.

      ನಿನ್ನೆ ಬೆಳಿಗ್ಗೆಯಿಂದ ಸಂಜೆವರೆಗೆ ಸುಮಾರು ನೂರಕ್ಕೂ ಹೆಚ್ಚು ಮಂದಿ ಹಾಸನ ಮೂಲದವರು ಮತದಾರರಿಗೆ ಹಣ ಹಂಚುವಾಗ ಸಿಕ್ಕಿ ಬಿದ್ದಿದ್ದಾರೆ. ಜನರು ಅವರನ್ನು ಕೂಡಿ ಹಾಕಿದ್ದರು. ಆದರೆ ಮಾನವೀಯತೆ ದೃಷ್ಟಿಯಿಂದ ಅವರನ್ನು ಬಿಟ್ಟು ಕಳುಹಿಸಲಾಗಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದರು.
ಪೆÇಲೀಸರು ಏಜೆಂಟರಂತೆ ವರ್ತಿಸುತ್ತಿದ್ದಾರೆ. ಇಂತಹ ಚುನಾವಣೆಯನ್ನು ನನ್ನ ಜೀವಮಾನದಲ್ಲಿ ನೋಡಿಲ್ಲ ಎಂದು ಅವರು ಹೇಳಿದರು.

      ನಿರ್ಮಲ ಜಯಚಂದ್ರ ಮಾತನಾಡಿ, ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಪತಿಯವರು ಸುಮಾರು 40 ವರ್ಷಗಳಿಂದ ದುಡಿದಿದ್ದಾರೆ. ಅವರು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದಾರೆ. ಜನಸಾಮಾನ್ಯರ ಬಗ್ಗೆ ಅತ್ಯಂತ ಕಾಳಜಿ ಹೊಂದಿರುವ ವ್ಯಕ್ತಿ ಟಿ.ಬಿ. ಜಯಚಂದ್ರ ಅವರ ಗೆಲುವು ಖಚಿತ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

(Visited 3 times, 1 visits today)

Related posts