ಶಿರಾ : ಬಾಲಕನಿಗೆ ಸೋಂಕು, ಮತ್ತೊಂದು ಕೊರೊನಾ ಪಾಸಿಟಿವ್!!

ಶಿರಾ :

      ಜಿಲ್ಲೆಯಲ್ಲಿ ಗುರುವಾರ ಮತ್ತೊಂದು ಕೋವಿಡ್ 19 ಪಾಸಿಟಿವ್ ಕಂಡು ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 58ಕ್ಕೆ ಏರಿದೆ.
ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ 15 ವರ್ಷದ ಬಾಲಕನಿಗೆ (ಟಿಎಂಕೆ 58) ಸೋಂಕು ಕಂಡು ಬಂದಿದೆ.

       ಈತ ಜೂನ್ 24 ರಂದು ಶಿರಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ನೀಡಿದ್ದನ್ನು, ಅದನ್ನು ತುಮಕೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇಂದು ಸೋಂಕು ದೃಢಪಟ್ಟಿದೆ. ಈತನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

      ಈತನ ತಾಯಿ ಆಂಧ್ರಪ್ರದೇಶದ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡಿದ್ದು, ಅವರಿಗೂ ಕೋವಿಡ್ 19 ಪಾಸಿಟಿವ್ ಬಂದಿದೆ. ಆಕೆ ಆಂಧ್ರಪ್ರದೇಶದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

      ಸೋಂಕಿತ ಬಾಲಕನು ಜೂನ್ 22 ರಂದು ತಂದೆಯೊಂದಿಗೆ ಆಂಧ್ರಪ್ರದೇಶದ ರಾಯದುರ್ಗ ತಾಲೂಕಿನಿಂದ ಬಸ್ ನಲ್ಲಿ ಶಿರಾಗೆ ಬಂದಿದ್ದನು. ಈತನ ತಂದೆಯನ್ನು ಕ್ವಾರಂಟೈನ್ ಮಾಡಲಾಗಿದ್ದು, ಪ್ರಥಮ ಸಂಪರ್ಕದಲ್ಲಿದ್ದ 5 ಜನರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಿದ್ದು, ಎರಡನೇ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 16 ಮಂದಿಗೆ ಸದ್ಯ ಸೋಂಕು ಇದೆ.

(Visited 8 times, 1 visits today)

Related posts