ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾಗಿ ಟಿ.ಭೂಬಾಲನ್ ಅಧಿಕಾರ ಸ್ವೀಕಾರ

 ತುಮಕೂರು :

      ಮಹಾನಗರ ಪಾಲಿಕೆ ಆಯುಕ್ತ ಟಿ.ಭೂಬಾಲನ್ ಭಾ.ಆ.ಸೇ ಅವರು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಡಿಸೆಂಬರ್ 19ರಂದು ಅಧಿಕಾರ ಸ್ವೀಕರಿಸಿದರು.

      ಅನಂತರ ಮಾತನಾಡಿದ ಅವರು, ಸ್ಮಾರ್ಟ್‍ಸಿಟಿ ಕಾಮಗಾರಿಗಳನ್ನು ಒಂದು ದಿನದಲ್ಲಿ ಪೂರ್ಣಗೊಳಿಸಲು ಸಾಧ್ಯವಿಲ್ಲ 3-4 ತಿಂಗಳಾದರೂ ಬೇಕು ಅಲ್ಲಿಯವರೆಗೂ ಸಾರ್ವಜನಿಕರು, ಜನಪ್ರತಿನಿಧಿಗಳು ತಾಳ್ಮೆಯಿಂದ ಇದ್ದು ನಮಗೆ ಸಹಕಾರ ಕೊಡಬೇಕು ಎಂದು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ಹೆಚ್ಚುವರಿ ಪ್ರಭಾರ ವ್ಯವಸ್ಥಾಪಕ ನಿರ್ದೆಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಭೂಬಾಲನ್ ಮನವಿ ಮಾಡಿದರು.

      ಸ್ಮಾರ್ಟ್‍ಸಿಟಿ ಲಿಮಿಟೆಡ್ ನಗರದಲ್ಲಿ ಬಹಳಷ್ಟು ಕಾಮಗಾರಿ ನಡೆಸುತ್ತಿದ್ದು, ಅದರಲ್ಲಿ ಕೆಲವು ಸಮಸ್ಯೆಗಳು ಕಂಡು ಬಂದಿವೆ. ಅದರಲ್ಲೂ ಮುಖ್ಯವಾಗಿ ರಸ್ತೆ ಕಾಮಗಾರಿಯಿಂದ ಜನರಿಗೆ ತೊಂದರೆಯಾಗುತ್ತಿರುವ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ಯಾವ ಸಮಸ್ಯೆಗೆ ಹೇಗೆ ಪರಿಹಾರಕಂಡುಕೊಳ್ಳುವುದು ಎಂಬುದನ್ನು ಆಲೋಚಿಸಿ ಸಾರ್ವಜನಿಕರಿಗೆ ಒಂದು ಒಳ್ಳೆಯ ವ್ಯವಸ್ಥೆಯನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು.

(Visited 5 times, 1 visits today)

Related posts