ತುಮಕೂರು: SSLC ಹಿಂದಿ ಪರೀಕ್ಷೆಗೆ 695 ವಿದ್ಯಾರ್ಥಿಗಳು ಗೈರು!!

 ತುಮಕೂರು:

      ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಇಂದು ನಡೆದ ಎಸ್‍ಎಸ್‍ಎಲ್‍ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಗೆ ನೋಂದಣಿಯಾಗಿದ್ದ 33608 ವಿದ್ಯಾರ್ಥಿಗಳ ಪೈಕಿ 32922 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 695 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

      ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆಯನ್ನು ಶಾಂತಿಯುತವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲಾಗಿದೆ. ಇಂದು ನಡೆದ ಪರೀಕ್ಷೆಯಲ್ಲಿ 165 ವಿದ್ಯಾರ್ಥಿಗಳು ಕಂಟೈನ್‍ಮೆಂಟ್ ಪ್ರದೇಶದಿಂದ ಬಂದು ಪರೀಕ್ಷೆ ಬರೆದಿದ್ದು, 16 ವಿದ್ಯಾರ್ಥಿಗಳು ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ.

        ಹಿಂದಿ ಭಾಷಾ ಪರೀಕ್ಷೆಗೆ ಖಾಸಗಿಯಾಗಿ ನೋಂದಣಿಯಾಗಿದ್ದ 585 ವಿದ್ಯಾರ್ಥಿಗಳ ಪೈಕಿ 448 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದಂತೆ 137 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ತುಮಕೂರು ಡಿಡಿಪಿಐ ಎಂ.ಆರ್. ಕಾಮಾಕ್ಷಿ ಹಾಗೂ ಮಧುಗಿರಿ ಡಿಡಿಪಿಐ ರೇವಣಸಿದ್ದಪ್ಪ ತಿಳಿಸಿದ್ದಾರೆ.

(Visited 4 times, 1 visits today)

Related posts

Leave a Comment