ಏ.23: ಜಗಜೀವನ್ ರಾಮ್ – ಅಂಬೇಡ್ಕರ್ ಜಯಂತಿ

ಚಿಕ್ಕನಾಯಕನಹಳ್ಳಿ: ಬಾಬು ಜಗಜೀವನ್ ರಾಮ್ ಹಾಗೂ ಅಂಬೇಡ್ಕರ್ ಅವರ ಜಯಂತಿ ಏಪ್ರಿಲ್ 23ರಂದು ನಡೆಯುವ ಕಾರ್ಯಕ್ರಮಕ್ಕೆ ಕನಿಷ್ಠ ಐದು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಬೇಕು ಕಾರ್ಯಕ್ರಮದ ಬಗ್ಗೆ ತಾಲೂಕಿನಾದ್ಯಂತ ಹೆಚ್ಚು ಪ್ರಚಾರ ಮಾಡುವ ಮೂಲಕ ಸರ್ವ ಜನಾಂಗವನ್ನು ಈ ಜಯಂತಿಗೆ ಕರೆತರುವ ಪ್ರಯತ್ನ ಆಗಬೇಕು ಎಂದು ತಹಸಿಲ್ದಾರ್ ತೇಜಸ್ವಿನಿ ಹೇಳಿದರು ಇಂದು ತಾಲೂಕು ಕಚೇರಿಯ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಮ್ ಹಾಗೂ ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಅಂಗವಾಗಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಏಪ್ರಿಲ್ 23ರಂದು ಶೆಟ್ಟಿಕೆರೆ ಹೋಬಳಿ ಜೆಸಿಪುರ ಗ್ರಾಮದಲ್ಲಿ ಜಯಂತೋತ್ಸವ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಅಂದು ನಡೆಯುವ ಸಭೆಗೆ ಕೇಂದ್ರ ಸಚಿವ ಶ್ರೀ ನಾರಾಯಣ ಸ್ವಾಮಿಯವರು ಸೇರಿದಂತೆ ಜಿಲ್ಲೆಯ ಶಾಸಕರುಗಳು ಸಚಿವರುಗಳು ಮತ್ತು ಸಮಾಜದ ಮುಖಂಡರುಗಳು ಇನ್ನೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಪಟ್ಟಣದ ಪುರಸಭೆ…

ಮುಂದೆ ಓದಿ...

ಅಂಬೇಡ್ಕರ್ – ಜಗಜೀವನ್ ರಾಮ್ ತತ್ವಾದರ್ಶ ಪಾಲನೆಗೆ ಕರೆ

ತುಮಕೂರು: ನಗರದ ಹೊರವಲಯದ ಹೆಗ್ಗೆರೆಯ ಹೊಸ ಬಡಾವಣೆ ನಾಗರಿಕರ ಹಿತರಕ್ಷಣಾ ವೇದಿಕೆ (ರಿ) ಕಚೇರಿಯಲ್ಲಿಂದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತ್ಯೋತ್ಸವ ಮತ್ತು ಡಾ. ಬಾಬು ಜಗಜೀವನ್ ರಾಮ್ ರವರ 115ನೇ ಜನ್ಮ ದಿನೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಗ್ಗೆರೆ ಹೊಸ ಬಡಾವಣೆ ನಾಗರಿಕರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಕೃಷ್ಣಯ್ಯ ಎಂ. ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರ ತತ್ವ-ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸುವುದರ ಮೂಲಕ ಸಮಾಜಕ್ಕೆ ಮಾದರಿಯಾಗುವ ಅವಶ್ಯಕತೆ ಇದೆ. ಪ್ರತಿವರ್ಷ ಅವರ ಜನ್ಮದಿನೋತ್ಸವವನ್ನು ಆಚರಣೆ ಮಾಡುವುದರ ಮೂಲಕ ಅವರ ಕಾರ್ಯಚಟುವಟಿಕೆಗಳನ್ನು ನೆನೆಯುವ ಕೆಲಸವನ್ನು ಮಾಡಬೇಕಾಗಿದೆ ಎಂದರು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮತ್ತು ಡಾ. ಬಾಬು ಜಗಜೀವನರಾಮ್ ಅವರು ಎಲ್ಲ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ, ಎಲ್ಲ ಸಮುದಾಯಗಳ…

ಮುಂದೆ ಓದಿ...

ಅಂಬೇಡ್ಕರ್ ಅಂದರೆ ಎಸ್ಸಿಎಸ್ಟಿ ಎನ್ನುವ ಮನೋಭಾವನೆ ಜನರಲ್ಲಿದೆ: ಡಾ.ಜಿ.ಪರಮೇಶ್ವರ

ತುಮಕೂರು: ದೇಶದಲ್ಲಿ ಸಮಾನತೆ, ಭಾತೃತ್ವದ ಚಿಂತನೆ ನೀಡದೆ ಅಂಬೇಡ್ಕರ್ ಅವರ ಆಶಯಗಳಿಗೆ ವಿರುದ್ಧವಾಗಿ ಭಾವನಾತ್ಮಕ ವಿಚಾರಗಳೇ ಮುಖ್ಯವಾಗಿವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್, ಬಾಬುಜಗಜೀವನ್ ರಾಂ ಜಯಂತಿಯಲ್ಲಿ ಅವರು ಮಾತನಾಡಿದ ಅವರು, ಸಂವಿಧಾನ ರಚನೆಯ ವೇಳೆಯಲ್ಲಿಯೇ ಸಮಾನತೆ, ಭಾತೃತ್ವವನ್ನು ಒಪ್ಪಿಕೊಂಡಿದ್ದೆವು, ಆದರೆ ಇಂದು ನಾವು ಬೇರೆ ನೀವು ಬೇರೆ ಎಂದು ಹೇಳಿದರೆ ಒಪ್ಪಿಕೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು. ಅಂಬೇಡ್ಕರ್ ಅಂದರೆ ಎಸ್ಸಿಎಸ್ಟಿ ಎನ್ನುವಂತಹ ಮನೋಭಾವನೆ ಜನರಲ್ಲಿದೆ, ಅಂಬೇಡ್ಕರ್ ಭಾರತ ದೇಶದಲ್ಲಿರುವ ಪ್ರತಿಯೊಂದು ಜೀವಿಗೂ ಸಂವಿಧಾನವನ್ನು ನೀಡಿದ್ದಾರೆ, ದೇಶದ ಆರ್ಥಿಕತೆ ಇಂದು ಸದೃಢವಾಗಿದೆ ಅದಕ್ಕೆ ಕಾರಣ ಅಂಬೇಡ್ಕರ್ ಅವರು, ಕರೆನ್ಸಿಯೇ ಇಲ್ಲದ ದೇಶಕ್ಕೆ ಸಾಮಾನ್ಯ ಕರೆನ್ಸಿಯನ್ನು ನೀಡಿ, ಆರ್ ಬಿಐ ಸ್ಥಾಪಿಸಲು ಅವರ ಮುಂದಾಲೋಚನೆಯೇ ಕಾರಣ ಎಂದರು. ಅಂಬೇಡ್ಕರ್ ಎಂದರೆ ಬರೀ ಮೀಸಲಾತಿ ಎನ್ನುತ್ತಿದ್ದಾರೆ,ಈ ದೇಶಕ್ಕಾಗಿ ಅಂಬೇಡ್ಕರ್ ನೀಡಿರುವ…

ಮುಂದೆ ಓದಿ...

ಪ್ರಜಾರಾಜ್ಯ ಅವಶ್ಯಕತೆ ಎತ್ತಿ ಹಿಡಿದ ಅಂಬೇಡ್ಕರ್

ತುಮಕೂರು : ಸ್ವರಾಜ್ಯದ ಜೊತೆಗೆ ಪ್ರಜಾ ರಾಜ್ಯದ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿ, ಪ್ರಜಾರಾಜ್ಯಕ್ಕಾಗಿ ಮೊಟ್ಟ ಮೊದಲಿಗನಾಗಿ ಧ್ವನಿ ಎತ್ತಿದ ಮಹಾನಾಯಕ ಡಾ|| ಬಿ.ಆರ್. ಅಂಬೇಡ್ಕರ್ ಅವರು, ಮಹಾನ್ ರಾಷ್ಟ್ರ ಭಕ್ತರು ಕೂಡ ಆಗಿದ್ದರು ಎಂದು ಪ್ರೊ. ಶ್ರೀ ಹರಿ ರಾಂ ಅವರು ತಿಳಿಸಿದರು. ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬು ಜಗಜೀವನರಾಂ ಅವರ 115ನೇ ಜನ್ಮದಿನಾಚರಣೆಯಲ್ಲಿ ಮುಖ್ಯ ಭಾಷಣಾಕಾರರಾಗಿ ಭಾಗವಹಿಸಿ ಮಾತನಾಡುತ್ತಾ, ಜಗತ್ತಿನಾದ್ಯಂತ ಜನಸಾಮಾನ್ಯರು ಹಬ್ಬದ ರೀತಿ ಆಚರಿಸಿ ಸಂಭ್ರಮಿಸುವ ಏಕೈಕ ಹಬ್ಬ ಅದುವೇ ಮಹಾನಾಯಕ ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಎಂದರು. ಮಹಾನಾಯಕ ಅಂಬೇಡ್ಕರ್ ಅವರನ್ನು ಒಂದು ಜಾತಿಗೆ ಸೀಮಿತವಾಗಿಸುವ ಪ್ರಯತ್ನ ನಿರಂತರವಾಗಿ ನಡೆದಿದೆ. ಅವರು ಕೇವಲ ಒಂದು ದೇಶ, ಒಂದು ರಾಜ್ಯ, ಒಂದು ಜಾತಿಗೆ ಸೀಮಿತವಲ್ಲ, ಅವರು ವಿಶ್ವ…

ಮುಂದೆ ಓದಿ...

ಅಂಬೇಡ್ಕರ್ ಸಂವಿಧಾನ ಪ್ರಪಂಚಕ್ಕೆ ಮಾದರಿ

ತುಮಕೂರು: ಅಂಬೇಡ್ಕರ್ ಕೊಟ್ಟ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ. ಪರಮೇಶ್ ಅಭಿಪ್ರಾಯಪಟ್ಟರು. ಅವರು ತುಮಕೂರಿನ ಕನ್ನಡ ಭವನದಲ್ಲಿ ಝೆನ್ ಟೀಮ್ ವತಿಯಿಂದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಕಾರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಡೆದ ಶಿವಮೊಗ್ಗ ರಂಗಾಯಣದವರು ಪ್ರಸ್ತುತಪಡಿಸಿದ ವಿ ದ ಪೀಪಲ್ ಆಫ್ ಇಂಡಿಯಾ ನಾಟಕ ಪ್ರದರ್ಶನಕ್ಕೆ ನಗಾರಿ ಬಾರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಬಾಬಾ ಸಾಹೇಬ್ ಅವರ 125ನೇ ಜಯಂತಿಯನ್ನು ಪ್ರಪಂಚದ 100 ಕ್ಕೂ ಹೆಚ್ಚು ರಾಷ್ಟ್ರಗಳು ಆಚರಣೆ ಮಾಡಿದ್ದನ್ನು ಗಮನಿಸಿದರೆ ಅವರ ಆದರ್ಶ, ವ್ಯಕ್ತಿತ್ವ ಇಡೀ ಪ್ರಪಂಚಕ್ಕೆ ಪಸರಿಸಿದೆ ಎಂಬುದು ತಿಳಿಯುತ್ತದೆ ಎಂದರು. ಅವರು ಮಾಡಿರುವ ಕಾರ್ಯಗಳನ್ನು ನಾವು ಪಾಲಿಸಬೇಕು. ಲೇಬರ್ ಮಂತ್ರಿಯಾಗಿದ್ದಾಗ ಬಹಳಷ್ಟು ಬದಲಾವಣೆ ಮಾಡಿದರು. ಅವರ ಆದರ್ಶ, ಜೀವನ ಪ್ರತಿಯೊಬ್ಬರಿಗೂ ಮಾದರಿ. ಬುದ್ದ, ಬಸವ, ಗಾಂಧಿ ಹಾಗೂ ಅಂಬೇಡ್ಕರ್…

ಮುಂದೆ ಓದಿ...