ಜನಪರ ಕಲ್ಯಾಣ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಲಿ: ಅಗರ ಜ್ಞಾನೇಂದ್ರ

ತುಮಕೂರು : ಸರ್ಕಾರದ ಬಗ್ಗೆ ಜನಸಾಮಾನ್ಯರ ಮನದಲ್ಲಿ ಗೌರವ ಮೂಡಬೇಕಾದರೆ, ಜನಪರ ಕಲ್ಯಾಣ ಕಾರ್ಯಕ್ರಮಗಳು ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ದಕ್ಷತೆಯಿಂದ ಮತ್ತು ಬದ್ಧತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ಪರಿಸ್ಥಿತಿ, ಪೂರ್ವ ಮುಂಗಾರು ಮಳೆ, ಬಿತ್ತನೆ ಬೀಜ, ಗೊಬ್ಬರ ದಾಸ್ತಾನು, ಮತ್ತಿತರ ವಿಷಯಗಳ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ. ಸಿಇಓ ಮತ್ತು ಜಿಲ್ಲಾ ಮಟ್ಟದ ಪ್ರಮುಖ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ರೈತರಿಗೆ ತೊಂದರೆಯಾಗದಂತೆ ಸಕಾಲದಲ್ಲಿ ಬಿತ್ತನೆ ಬೀಜ, ಗೊಬ್ಬರ ಪೂರೈಕೆಯಾಗಬೇಕು ಮತ್ತು ಬಿತ್ತನೆ ಬೀಜ, ಗೊಬ್ಬರ ದಾಸ್ತಾನಿಗೆ ಒತ್ತುಕೊಡಬೇಕು ಎಂದರು. ಜಿಲ್ಲೆಯಲ್ಲಿ ಶೇಂಗಾ ಬಿತ್ತನೆ ಬೀಜದ ಕೊರತೆಯಾಗದಂತೆ ಸಾಕಾಗುವಷ್ಟು ಗುಣಮಟ್ಟದ ಬಿತ್ತನೆ ಬೀಜವನ್ನು ಸರಬರಾಜುದಾರರಿಂದ ಖರೀದಿಸಬೇಕು ಎಂದು…

ಮುಂದೆ ಓದಿ...

200 ಕೋಟಿ ವೆಚ್ಚದಲ್ಲಿ 100 ಪೊಲೀಸ್ ಠಾಣೆ ನಿರ್ಮಾಣ: ಅರಗ ಜ್ಞಾನೇಂದ್ರ

ತುಮಕೂರು: ಪೊಲೀಸರು ನೆಮ್ಮದಿಯಿಂದ ಕರ್ತವ್ಯ ನಿರ್ವಹಿಸಬೇಕಾದರೆ ಅವರು ಕೆಲಸ ಮಾಡುವ ಪೊಲೀಸ್ ಠಾಣೆ ಹಾಗೂ ವಾಸಿಸುವ ಮನೆ ಸುಸಜ್ಜಿತವಾಗಿರಬೇಕು, ಈ ನಿಟ್ಟಿನಲ್ಲಿ 200 ಕೋಟಿ ವೆಚ್ಚದಲ್ಲಿ 100 ಹೊಸ ಪೊಲೀಸ್ ಠಾಣೆ ಮತ್ತು 20 ಸಾವಿರ ಪೊಲೀಸರಿಗೆ ಎರಡು ಕೊಠಡಿಗಳುಳ್ಳ ನೂತನ ವಸತಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದರು. ಅವರಿಂದು ಸುಮಾರು 2.64 ಕೋಟಿ ರೂ.ಗಳ ವೆಚ್ಚದಲ್ಲಿ ಪೊಲೀಸ್ ಗೃಹ ನಿರ್ಮಾಣ ಮಂಡಳಿ ವತಿಯಿಂದ ನಿರ್ಮಿಸಲಾಗುತ್ತಿರುವ ಶಿರಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿ, ಶಿರಾ ಸಿಪಿಐ ಹಾಗೂ ಪೊಲೀಸ್ ಠಾಣೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಎಫ್‍ಎಸ್‍ಎಲ್ ಲ್ಯಾಬ್‍ಗಳನ್ನು ಬಲಗೊಳಿಸುವ ನಿಟ್ಟಿನಲ್ಲಿ ವಿಧಿ-ವಿಜ್ಞಾನ ಪ್ರಯೋಗಾಲಯಗಳನ್ನು ಹೆಚ್ಚಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಈ ವರ್ಷವೇ ಬಳ್ಳಾರಿ, ಹುಬ್ಬಳ್ಳಿ ಜಿಲ್ಲೆಯಲ್ಲಿ ಎಫ್‍ಎಸ್‍ಎಲ್ ಪ್ರಯೋಗಾಲಯ…

ಮುಂದೆ ಓದಿ...