ಕಾಂಗ್ರೆಸ್ ಸೋಲಿಗೆ ಮುಖ್ಯಮಂತ್ರಿ ಆಡಳಿತ ಕಾರಣ ಎಂದು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ, ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಹರಿಹಾಯ್ದರು. ಬಿಜೆಪಿಗೆ ಮೊದಲನೆಯದಾಗಿ ಅಭಿನಂದನೆಯನ್ನು ಸಲ್ಲಿಸುತ್ತಾ ಮಾತು ಆರಂಬಿಸಿದ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನಕ್ಕಿಳಿದಿದೆ ಹಾಗಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದರು. ಸರ್ಕಾರದ ಆಡಳಿತದಲ್ಲಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿರವರು ಸರಿಯಾಗಿ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ ಹಾಗಾಗಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಮುಖ್ಯಮಂತ್ರಿಗಳು ಎಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದರೆಂದರೆ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಕಾಲಕಳೆಯುತ್ತಿದ್ದಾರೆ. ದೇವೇಗೌಡರು ಸೋಲು ಅನುಭವಿಸಲು ಮೂಲ ಕಾರಣ ಒಬ್ಬ ವ್ಯಕ್ತಿ. ಕೆಎನ್ ರಾಜಣ್ಣ ಮತ್ತು ಮುದ್ದಹನುಮೇಗೌಡರ ವಿರುದ್ಧ ಹಣದ ವಿಚಾರವಾಗಿ ಆಪಾದಿಸಿದ ಹಿನ್ನೆಲೆಯಲ್ಲಿ ಸೋಲನ್ನು…
ಮುಂದೆ ಓದಿ...