ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

ತುಮಕೂರು: ರಾಜ್ಯ ಬಿಜೆಪಿ ಸರ್ಕಾರದ 40 ಪರ್ಸಂಟೇಜ್ ಕಮೀಷನ್ ದಂಧೆ ಖಂಡಿಸಿ ಹಾಗೂ ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಟೌನ್‍ಹಾಲ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ಸರ್ಕಾರ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರು, ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಎಫ್‍ಐಆರ್‍ನಲ್ಲಿ ಸೇರ್ಪಡೆ ಮಾಡಿ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಪಕ್ಷದ ಮುಖಂಡನಾಗಿದ್ದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವಂತಹ ದಯನೀಯ ಸ್ಥಿತಿ ಬಿಜೆಪಿ ಸರ್ಕಾರದಲ್ಲಿದೆ. ಇದು ಆ ಪಕ್ಷ ಹಾಗೂ ಸರ್ಕಾರಕ್ಕೆ ಗೌರವ ತರುವುದಿಲ್ಲ ಎಂದು ಕಿಡಿಕಾರಿದರು. ಭ್ರಷ್ಟಾಚಾರದ ಆರೋಪ…

ಮುಂದೆ ಓದಿ...

ಮಾಜಿ ಶಾಸಕ ಕೆ.ಎನ್ ರಾಜಣ್ಣ ಹುಟ್ಟುಹಬ್ಬ: ಸಾರ್ವಜನಿಕರಿಗೆ ಬೃಹತ್ ಆರೋಗ್ಯ ಮೇಳ

ತುಮಕೂರು: ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರ ಹುಟ್ಟು ಹಬ್ಬದ ಕಾರ್ಯಕ್ರಮದ ಅಂಗವಾಗಿ ಬುಧವಾರ ಕ್ಯಾತ್ಸಂದ್ರದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಪೌರಕಾರ್ಮಿಕರು, ಸಾರ್ವಜನಿಕರಿಗಾಗಿ ಬೃಹತ್ ಆರೋಗ್ಯ ಮೇಳ ಏರ್ಪಡಿಸಲಾಗಿತ್ತು. ರಾಜಣ್ಣ ಅವರ ಹುಟ್ಟು ಹಬ್ಬದ ಅಂಗವಾಗಿ ಬೆಳಗ್ಗೆ 6 ಗಂಟೆಯಿಂದ ಅವರ ಅಭಿಮಾನಿಗಳು, ಸಾರ್ವಜನಿಕರು ಕ್ಯಾತ್ಸಂದ್ರದ ಅವರ ಮನೆಗೆ ತೆರಳಿ ಹಾರ, ತುರಾಯಿ ತೊಡಿಸಿ, ತಮ್ಮ ಅಭಿನಂದನೆ ಸಲ್ಲಿಸಿದರು.ಬಂದವರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಮಾತನಾಡಿದ ಕೆ.ಎನ್.ರಾಜಣ್ಣ ಅವರು,ಕಳೆದ ಎರಡು ವರ್ಷಗಳ ಕಾಲ ಕೋರೋನದಿಂದಾಗಿ ಅಭಿಮಾನಿಗಳ ಒತ್ತಡವಿದ್ದರೂ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಅವಕಾಶ ನೀಡಿರಲಿಲ್ಲ. ಆದರೆ ಈ ಬಾರಿ ಜನರ ಒತ್ತಡ ಮಣಿದು ಹುಟ್ಟು ಹಬ್ಬ ಆಚರಿಸಿಕೊಳ್ಳುತಿದ್ದೇನೆ. ಇಡೀ ಜಿಲ್ಲೆಯ ಜನರು ಬಂದು ತಮ್ಮ ಅಭಿಮಾನ ತೋರಿಸುತ್ತಿದ್ದಾರೆ. ಇದಕ್ಕಿಂತ ಸೌಭಾಗ್ಯ ಮತ್ತೊಂದು ಇಲ್ಲ ಎಂದರು. ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸÀಂತೋಷ್…

ಮುಂದೆ ಓದಿ...

ಹಿಂದುಳಿದ ವರ್ಗದ ಏಳ್ಗೆಗಾಗಿ ಶ್ರಮಿಸುವೆ: ಎಂಎಲ್ಸಿ ಆರ್.ರಾಜೇಂದ್ರ

ತುಮಕೂರು: ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ 1043ನೇ ಜಯಂತಿ ಅಂಗವಾಗಿ ದೇವರದಾಸಿಮಯ್ಯನವರ ಭಾವಚಿತ್ರ ಮೆರವಣಿಗೆಯು ನಗರದಲ್ಲಿ ಅದ್ದೂರಿಯಾಗಿ ನಡೆಯಿತು. ನಗರದ ಟೌನ್‍ಹಾಲ್ ವೃತ್ತದಲ್ಲಿ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಆರಂಭವಾದ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಆರ್. ರಾಜೇಂದ್ರ ಅವರು, 2015 ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅವಧಿಯಲ್ಲಿ ದೇವರ ದಾಸಿಮಯ್ಯನವರ ಜಯಂತಿಯನ್ನು ಪ್ರಾರಂಭಿಸಲಾಯಿತು. ಅಂದಿನಿಂದ ಈ ಜಯಂತಿಯನ್ನು ಆಚರಿಸುತ್ತಾ ಬರಲಾಗುತ್ತಿದೆ.ಹಿಂದುಳಿದ ವರ್ಗಗಳಲ್ಲಿ ಒಂದಾದ ನೇಕಾರರ ಸಮುದಾಯ ರಾಜಕೀಯ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಮುಂದೆ ಬರಬೇಕು. ಈ ಸಮುದಾಯದ ಏಳ್ಗೆಗೆ ತಾವು ಸದಾ ಶ್ರಮಿಸುವುದಾಗಿ ಹೇಳಿದರು. ರಾಜಕೀಯವಾಗಿ ಈ ಜನಾಂಗ ಅತ್ಯಂತ ಹಿಂದುಳಿದಿದೆ. ಇತ್ತೀಚೆಗೆ ನಡೆದ ಗ್ರಾ.ಪಂ. ಚುನಾವಣೆಯಲ್ಲಿ ಬೆರಳೆಣಿಕೆಯಷ್ಟು ಮಂದಿ ಮಾತ್ರ ಸ್ಪರ್ಧಿಸಿ ಗೆದ್ದಿದ್ದಾರೆ. ಆದ್ದರಿಂದ ನಾವೆಲ್ಲರೂ ಪಕ್ಷಾತೀತಾಗಿ ಈ ಹಿಂದುಳಿದ ಜನಾಂಗದ…

ಮುಂದೆ ಓದಿ...

ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ತುಮಕೂರು: ಇಂಧನ ಬೆಲೆಗಳ ಹೆಚ್ಚಳ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ,ಪಂಚ ರಾಜ್ಯಗಳ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಇಂಧನ ಬೆಲೆಗಳ ಹೆಚ್ಚಳವನ್ನು ಐದು ತಿಂಗಳ ಕಾಲ ಸ್ಥಗಿತ ಮಾಡಿದ್ದ ಬಿಜೆಪಿ, ಫಲಿತಾಂಶ ಪ್ರಕಟವಾದ ನಂತರ, ನಿರಂತರವಾಗಿ ಇಂಧ ಬೆಲೆಗಳನ್ನು ಹೆಚ್ಚಳ ಮಾಡಿ,ಜನಸಾಮಾನ್ಯರ ಕೈಗೆ ಎಟುಕದಂತೆ ಮಾಡಿವೆ.ಅಡುಗೆ ಅನಿಲ 1100ರ ಗಡಿ ದಾಟಿದೆ.ಇದಕ್ಕೆ ಪೂರಕವೆಂಬಂತೆ ಅಡುಗೆ ಎಣ್ಣೆ,ಅಕ್ಕಿ,ಬೆಳೆ ಬೆಲೆಗಳು ಹೆಚ್ಚಳವಾಗಿ ಜನಸಾಮಾನ್ಯರು ಬದುಕು ಕಷ್ಟಕರವಾಗಿದೆ.ಇದರಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಹಿಜಾಬ್,ಹಲಾಲ್ ಕಟ್,ಆಝಾನ್ ನಂತಹ ಧಾರ್ಮಿಕ ವಿಚಾರಗಳನ್ನು ಜನರ ಮದ್ಯೆ ತಂದು,ದೇಶದ ಕೋಮು ಸೌಹಾರ್ಧತೆಯನ್ನು ಕದಡುತ್ತಿದೆ.ಇದರ ವಿರುದ್ದ ಕಾಂಗ್ರೆಸ್ ಹೋರಾಟ ಆರಂಭಿಸಿದೆ.ಮುಂದಿನ ದಿನಗಳಲ್ಲಿ ಮತ್ತಷ್ಟು ಹೋರಾಟ…

ಮುಂದೆ ಓದಿ...

ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ತುಮಕೂರು: ಹಿಜಾಬ್, ಹಲಾಲ್ ಕಟ್, ವ್ಯಾಪಾರ ಬಂದ್ ನಂತಹ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು, ಸದ್ದುಗದ್ದಲವಿಲ್ಲದೆ ತೈಲ ಬೆಲೆ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿ, ಜನ ಸಾಮಾನ್ಯರ ಜೇಬಿಗೆ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರ ಕತ್ತರಿ ಹಾಕುತ್ತಿದೆ ಎಂದು ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಮಠ್ ಆರೋಪಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಯುವ ಕಾಂಗ್ರೆಸ್ ವತಿಯಿಂದ ಅಗತ್ಯವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡುತಿದ್ದ ಅವರು, ಜನಸಾಮಾನ್ಯರನ್ನು ಕಿತ್ತು ತಿನ್ನುತ್ತಿರುವ ಬೆಲೆ ಹೆಚ್ಚಳದ ಬಗ್ಗೆ ಮಾತನಾಡದ ಬಿಜೆಪಿ ನಾಯಕರು, ಸಂಘಪರಿವಾರ ಮತ್ತು ಅದರ ಮಿತ್ರಮಂಡಳಿಗಳು ಹೂಡುತ್ತಿರುವ ಷಡ್ಯಂತ್ರಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಾ,ದೇಶವನ್ನು ಅದೋಗತಿಗೆ ತಳ್ಳುತ್ತಿದೆ ಎಂದರು. ಭಾರತ ಒಂದು ಜಾತ್ಯಾತೀತ ರಾಷ್ಟ್ರ.ಇಲ್ಲಿ ಎಲ್ಲ ಧರ್ಮಿಯರು ನೆಮ್ಮದಿಯಿಂದ ವ್ಯಾಪಾರ, ವಹಿವಾಟು ನಡೆಸಿಕೊಂಡು ಹೋಗಲು ಮುಕ್ತ ಅವಕಾಶವಿದೆ.ಆದರೆ ಇತ್ತೀಚಿನ…

ಮುಂದೆ ಓದಿ...