ಶಂಕರಮಠದ ಬೀಗ ಮುರಿದು ಹುಂಡಿ ಕಳ್ಳತನ

ತುಮಕೂರು: ನಗರದ ಬಿ.ಹೆಚ್. ರಸ್ತೆಯಲ್ಲಿರುವ ಶಂಕರಮಠದ ಬೀಗ ಒಡೆದು ಒಳನುಗ್ಗಿರುವ ಕಳ್ಳರು ಹುಂಡಿ ಒಡೆದು ಅದರಲ್ಲಿದ್ದ ಕಾಣಿಕೆ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ. ನಗರದ ಭದ್ರಮ್ಮ ವೃತ್ತದಲ್ಲಿರುವ ಶಂಕರಮಠದಲ್ಲಿರುವ ಶ್ರೀ ಶಂಕರಾಚಾರ್ಯ ಮತ್ತು ಅಮ್ಮನವರ ದೇವಾಲಯದ ಬಾಗಿಲು ಬೀಗ ಒಡೆಯುವ ಮುನ್ನ ಪಕ್ಕದಲ್ಲೇ ಇದ್ದ ಅರ್ಚಕರ ಮನೆಗೆ ಬಾಗಿಲಿಗೆ ಹೊರಗಡೆಯಿಂದ ಬೀಗ ಜಡಿದಿರುವ ಕಳ್ಳರು ಮನೆಯ ಮುಂಭಾಗದಲ್ಲಿ ಬಲ್ಬ್‍ನ್ನು ತೆಗೆದು ದೇವಾಲಯದ ಬೀಗ ಒಡೆದು ಹುಂಡಿಯನ್ನು ದೇವಾಲಯದ ಹೊರಗೆ ತೆಗೆದುಕೊಂಡು ಹೋಗಿ ಕಾಂಪೌಂಡ್ ಪಕ್ಕದಲ್ಲಿ ಅದನ್ನು ಒಡೆದು ಅದರೊಳಗಿದ್ದ ಕಾಣಿಕೆ ಹಣವನ್ನು ದೋಚಿಕೊಂಡು ಹುಂಡಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಪ್ರತಿನಿತ್ಯ ಶಂಕರಮಠದ ಅರ್ಚಕರು ಬೆಳಗಿನ ಜಾವ 5 ಗಂಟೆಗೆ ಎದ್ದು ಪೂಜೆಗೆ ತೆರಳುವುದು ರೂಢಿ. ಅದರಂತೆ ಇಂದು ಬೆಳಗಿನ ಜಾವ 5 ಗಂಟೆಗೆ ಎದ್ದಿರುವ ಅರ್ಚಕರು ಮನೆಯ ಬಾಗಿಲನ್ನು ತೆರೆಯಲು ಪ್ರಯತ್ನಿಸಿದಾಗ ಬಾಗಿಲು…

ಮುಂದೆ ಓದಿ...

ದಲಿತ ಯುವಕರ ಹತ್ಯೆಗೆ ಖಂಡನೆ: ಆರೋಪಿಗಳ ಬಂಧನಕ್ಕೆ ಒತ್ತಾಯ

ತುಮಕೂರು: ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ ತುಮಕೂರು ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದ ಇಬ್ಬರು ಪರಿಷ್ಟ ಜಾತಿ ಮತ್ತು ಪಂಗಡದ ಯುವಕರ ಅಮಾನವೀಯ ಹತ್ಯೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಎ.ಎಸ್.ಪಿ ಉದೇಶ್ ಮುಖಾಂತರ ಘಟನೆಗೆ ಸಂಬಂಧಿಸಿದವರನ್ನು ಬಂಧಿಸಿ ಸೂಕ್ತ ತನಿಖೆ ಮತ್ತು ಕಾನೂನು ಕ್ರಮಕ್ಕೆ ಒತ್ತಾಯಿಸಿ ಹಾಗೂ ಗ್ರಾಮಗಳಲ್ಲಿ ಬಲಿಷ್ಠರು ಗುಂಪುಗೂಡಿ ಕಾನೂನನ್ನು ಕೈಗೆತ್ತುಗೊಂಡು ದುರ್ಬಲರ ಜೀವ ಹತ್ಯೆ ಮಾಡುವ ಇಂತಹ ಘಟನೆಗಳು ಜಿಲ್ಲೆಯಲ್ಲಿ ಮತ್ತೆ ಮರುಕಳಿಸದಂತೆ ಪೊಲೀಸ್ ಇಲಾಖೆಯಿಂದ ನಾಗರೀಕರಿಗೆ ಕಾನೂನಿನ ಅರಿವನ್ನು ನೀಡಬೇಕೆಂದು ಆಗ್ರಹಿಸಲಾಯಿತು. ಇತ್ತಿಚ್ಛೆಗೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರನ್ನು ಬಲಿಷ್ಠ ಸಮುದಾಯಗಳು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆಯು ನಾಗರೀಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಈ ಘಟನೆಯಿಂದ ಗ್ರಾಮದಲ್ಲಿ ಭಯದ ವಾತವರಣ ಸೃಷ್ಠಿಯಾಗಿದ್ದು…

ಮುಂದೆ ಓದಿ...

ಎಸ್ಪಿ ರಾಹುಲ್ ಕುಮಾರ್ ಗೆ ವಂಚಕನಿಂದ ಆತ್ಮಹತ್ಯೆ ಬೆದರಿಕೆ!?

ತುಮಕೂರು: ನಗರದ ವಾಸಿ ಲಕ್ಷ್ಮೀಕಾಂತ ಅಲಿಯಾಸ್ ಚಂದು ಪೊಲೀಸ್ ಇಲಾಖೆಗೆ ಆತ್ಮಹತ್ಯೆ ಬೆದರಿಕೆ ಹಾಕುವ ಮುಖೇನ ಇಡೀ ಇಲಾಖೆಯನ್ನೇ ಬೆದರಿಸಲು ಹೊರಟಿರುವ ಅಪರೂಪದ ಘಟನೆ ವರದಿಯಾಗಿದೆ. ಸುಮಯ್ಯ ಭಾನು ಎಂಬ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ಮತ್ತು ಆಕೆಯ ಮಗಳಿಗೂ ತೊಂದರೆ ಕೊಡುವ ಬೆದರಿಕೆಯ ಆರೋಪದ ಮೇಲೆ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ 13.04.2022ರಂದು ದೂರು ದಾಖಲಾಗಿದೆ. ದೂರು ದಾಖಲಾಗಿದ್ದರೂ ಸಹ ಲಕ್ಷ್ಮೀಕಾಂತ ಅಲಿಯಾಸ್ ಚಂದು ಎಂಬ ವಂಚಕನನ್ನು ಪೊಲೀಸರು ಬಂಧಿಸದೆ ಮೀನಾಮೇಷ ಎಣಿಸುತ್ತಿದ್ದಾರೆ. ದೂರು ದಾಖಲಾದ ನಂತರ ತನ್ನ ವಾಟ್ಸಪ್‍ನಿಂದ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಪೂರ್ ವಾಡ್ ಮತ್ತು ಅವರ ಅಧೀನ ಅಧಿಕಾರಿಗಳ ವಿರುದ್ಧ ಪ್ರಾಣ ಬೆದರಿಕೆ ಹಾಕಿದ್ದಾನೆ. ಹಿನ್ನೆಲೆ ಲಕ್ಷ್ಮೀಕಾಂತ ಅಲಿಯಾಸ್ ಚಂದು ತುಮಕೂರು ನಗರದ ವಾಸಿಯಾಗಿದ್ದು, ಮಾಜಿ ಉಪಮುಖ್ಯಮಂತ್ರಿ ಹಾಲಿ ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಅವರ ಸೋದರ ಅಳಿಯನೆಂದು ಬೊಗಳೆ…

ಮುಂದೆ ಓದಿ...

ಮದುವೆ ಮಾಡದಕ್ಕೆ ತಂದೆಯನ್ನೇ ಕೊಂದ ಮಗ

ಮದುವೆ ಮಾಡುತ್ತಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಜನ್ಮ ನೀಡಿದ ತಂದೆಯನ್ನೇ ಕೊಲೆಗೈದ ಘಟನೆ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಇಂದು ಮೃತ ವ್ಯಕ್ತಿ ಸಣ್ಣಯ್ಯ ‌ {65) ವರ್ಷ ಎಂದು ತಿಳಿಯಲಾಗಿದೆ ಮೃತನ ಮಗ 30 ವರ್ಷಗಳಾದರೂ ನನಗೆ ಮದುವೆ ಮಾಡುತ್ತಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಕುಡಿದು ಬಂದು ಮನೆಯಲ್ಲಿ ಮಲಗಿದ್ದ ತನ್ನ ತಂದೆಗೆ ಹಿಗ್ಗಾಮುಗ್ಗಾ ಬೈದು ಮನೆಯಲ್ಲಿ ಇದ್ದ ದೊಣ್ಣೆಯಿಂದ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ತಾಯಮ್ಮ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಾಯಮ್ಮನಿಗೆ ಎರಡನೇಯ ಗಂಡ ಎಂದು ತಿಳಿದು ಬಂದಿದೆ ಸ್ಥಳಕ್ಕೆ ತಿಪಟೂರು ಡಿ ವೈ ಎಸ್ ಪಿ ಚಂದನ್ ಕುಮಾರ್ ಹಾಗೂ ಆರಕ್ಷಕ ವೃತ್ತ ನಿರೀಕ್ಷಕ ವೀಣಾ ಬೇಟೆ ನೀಡಿ ಪರಿಶೀಲಿಸಿದರು ಆರೋಪಿ ವೆಂಕಟೇಶ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ

ಮುಂದೆ ಓದಿ...