ಗ್ರಾಮ ಒನ್ ಗಳಲ್ಲಿ ಆರೋಗ್ಯ ಕಾರ್ಡ್ ವಿತರಿಸಲು ಜಿಲ್ಲಾಧಿಕಾರಿ ಸೂಚನೆ

ತುಮಕೂರು : ಜಿಲ್ಲೆಯಲ್ಲಿ ಕಾರ್ಯಾರಂಭ ಮಾಡಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಬಿಪಿಎಲ್, ಎಪಿಎಲ್ ಕಾರ್ಡುದಾರರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (ಎಬಿಎಆರ್‍ಕೆ) ಕಾರ್ಡುಗಳನ್ನು ಮೊದಲಾದ್ಯತೆ ಮೇರೆಗೆ ವಿತರಿಸುವ ನಿಟ್ಟಿನಲ್ಲಿ ಆಯಾ ತಹಶೀಲ್ದಾರರು ಹಾಗೂ ತಾಲ್ಲೂಕ್ ಆರೋಗ್ಯಾಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ತಾಲ್ಲೂಕ್ ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು 15 ರಿಂದ 17 ವಯಸ್ಸಿನೊಳಗಿನವರ ಲಸಿಕಾಕರಣವು ಮುಂದುವರೆದಿದ್ದು, ಮೊದಲ ಡೋಸ್ ಶೇ.77 ಹಾಗೂ ಎರಡನೇ ಡೋಸ್ ಶೇ.66 ಪೂರ್ಣಗೊಂಡಿದೆ ಎಂದರಲ್ಲದೇ ಲಸಿಕಾಕರಣವನ್ನು ತೀವ್ರಗತಿಯಲ್ಲಿ ಹೆಚ್ಚಿಸಿ ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ ತಡೆಗಟ್ಟುವುದಕ್ಕಾಗಿ 12 ರಿಂದ 14 ವಯೋಮಾನದ ಮಕ್ಕಳಿಗೆ ಲಸಿಕೆಯನ್ನು ನೀಡಲಾಗುತ್ತಿದ್ದು ಮೊದಲ ಡೋಸ್ ಶೇ.58ರಷ್ಟು ಪೂರ್ಣಗೊಂಡಿದೆ ಎಂದ ಅವರು ತಾಲ್ಲೂಕ್ ವೈದ್ಯಾಧಿಕಾರಿಗಳು ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚು ಮಕ್ಕಳಿರುವ ಕಡೆ ಲಸಿಕಾ…

ಮುಂದೆ ಓದಿ...

ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಸೂಚನೆ

ತುಮಕೂರು: ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ವಿಶೇಷ ಮುತುವರ್ಜಿವಹಿಸಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು ಹಾಗೂ ಮನೆಗಳಿಗೆ ಸರಬರಾಜು ಮಾಡುವ ನೀರು ಗುಣಮಟ್ಟದಿಂದ ಕೂಡಿರುವ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೂಚಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ನೀರಿನ ಮೂಲಗಳನ್ನು ಪರಿಶೀಲಿಸಿ ನೀರು ಸರಿಯಾಗಿ ಶುದ್ಧೀಕರಣವಾಗುತ್ತಿರುವ ಬಗ್ಗೆ ಹೆಚ್ಚು ಮುತುವರ್ಜಿವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ತೆರಿಗೆ ವಸೂಲಾತಿಯ ಬಗ್ಗೆ ಹೆಚ್ಚು ಗಮನ ನೀಡಬೇಕೆಂದರಲ್ಲದೇ ನಿಯಮಾವಳಿಯನ್ವಯ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ತೆರಿಗೆಯನ್ನು ವಸೂಲು ಮಾಡಲು ಕ್ರಮವಹಿಸಬೇಕೆಂದರು. ಆಶ್ರಯ, ವಾಜಪೇಯಿ ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ವಸತಿ ಮಂಜೂರಾತಿಗಾಗಿ ಪ್ರಸ್ತಾವನೆ ಕಳುಹಿಸಿಕೊಡಲು ನಗರ ಸ್ಥಳೀಯ…

ಮುಂದೆ ಓದಿ...

ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಿ: ಜಿಲ್ಲಾಧಿಕಾರಿ

ತುಮಕೂರು: ಅಧಿಕಾರಿಗಳು ರೈತಸ್ನೇಹಿಯಾಗಿ ವರ್ತಿಸಬೇಕು. ಅವರ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರವನ್ನು ಒದಗಿಸುವತ್ತ ಕಾರ್ಯಪ್ರವೃತ್ತರಾಗಬೇಕು, ಜನರ ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸಿ ಅವರಿಗೆ ಹತ್ತಿರವಾಗಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು. ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ದೊಡ್ಡ ಪಾಲನಹಳ್ಳಿಯಲ್ಲಿಂದು ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ಹತ್ತಿರದಿಂದ ಸ್ಪಂದಿಸುವ ಉದ್ದೇಶದಿಂದ ಸರ್ಕಾರವು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ರೂಪಿಸಿದೆ ಎಂದರು. ಜನಸಾಮಾನ್ಯರು ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದಾಗ ಆಯಾ ಇಲಾಖಾ ಮುಖ್ಯಸ್ಥರು ಶೀಘ್ರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ದೊಡ್ಡ ಪಾಲನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬೆಳಧರ-ಹೊಸಹಳ್ಳಿ ರಸ್ತೆಯು ಹದಗೆಟ್ಟಿರುವ ಬಗ್ಗೆ ಗ್ರಾಮಸ್ಥರು ಈ ಸಂದರ್ಭ ಮನವಿ ಸಲ್ಲಿಸಿದಾಗ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್‍ಗಳ…

ಮುಂದೆ ಓದಿ...

ಏ.22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ದೋಷರಹಿತವಾಗಿ ನಡೆಸಲು ಸೂಚನೆ

ತುಮಕೂರು : ಜಿಲ್ಲೆಯಲ್ಲಿ ಏಪ್ರಿಲ್ 22 ರಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ದೋಷರಹಿತವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಪರೀಕ್ಷಾ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿ ಹಾಗೂ ಸಿಬ್ಬಂದಿಗಳ ಪೂರ್ವಾಪರಗಳನ್ನು ಪರಿಶೀಲಿಸಿದ ಬಳಿಕ ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಬೇಕು. ಪರೀಕ್ಷಾ ನಿರ್ವಹಣೆಗಾಗಿ ನಿಯೋಜಿಸಿದವರು ಜಿಲ್ಲಾ ಖಜಾನೆ ಹಾಗೂ ಮಧುಗಿರಿ ತಾಲೂಕು ಖಾಜಾನಾಧಿಕಾರಿಗಳ ಕಚೇರಿಯಲ್ಲಿ ಕಡ್ಡಾಯವಾಗಿ ಏಪ್ರಿಲ್ 18ರೊಳಗಾಗಿ ಬಯೋಮೆಟ್ರಿಕ್ ನೋಂದಣಿ ಮಾಡಿಸಿ ಗುರುತಿನ ಚೀಟಿ ಪಡೆಯಬೇಕು ಎಂದು ನಿರ್ದೇಶನ ನೀಡಿದರು. ಪರೀಕ್ಷಾ ಗೌಪ್ಯ ವಸ್ತುಗಳ ಲೋಡಿಂಗ್, ಅನ್‍ಲೋಡಿಂಗ್, ಠೇವಣಿಸುವ, ವಿತರಿಸುವ ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಬಂಡಲ್‍ಗಳನ್ನು ತೆರೆಯುವ ಮತ್ತು ಉತ್ತರ ಪತ್ರಿಕೆಗಳನ್ನು ಸ್ವೀಕರಿಸಿ ಬಂಡಲ್ ಮಾಡುವ ಕಾರ್ಯಗಳನ್ನು…

ಮುಂದೆ ಓದಿ...

ಪ್ರಧಾನ ಮಂತ್ರಿಗಳ 15 ಅಂಶಗಳ ಪ್ರಗತಿ ಪರಿಶೀಲನೆ

ತುಮಕೂರು : ಮಾನ್ಯ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆ ಇಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿಗಳು, 2021-22 ನೇ ಸಾಲಿನ ಅವಧಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಕುರಿತ ಮತ್ತು ಅಲ್ಪಸಂಖ್ಯಾತ ವರ್ಗದವರಿಗೆ ಸಂಬಂಧಿಸಿ, ವಿವಿಧ ಇಲಾಖೆಗಳು ಮಾರ್ಚ್-22ರ ಅಂತ್ಯದವರೆಗೆ ಸಾಧಿಸಿರುವ ಪ್ರಗತಿಯನ್ನು ಕೂಲಂಕುಶವಾಗಿ ಪರಿಶೀಲಿಸಿದರು. ಕೆಎಸ್‍ಡಿಬಿ ತುಮಕೂರು ವಿಭಾಗೀಯ ಕಚೇರಿ ವತಿಯಿಂದ, ಜಿಲ್ಲೆಯ ತುಮಕೂರು ನಗರ, ಚಿ.ನಾ ಹಳ್ಳಿ, ಗುಬ್ಬಿ, ತಿಪಟೂರು, ಕೊರಟಗೆರೆ ತಾಲ್ಲೂಕಿನಲ್ಲಿ ನಿರ್ಮಿಸಲಾಗುತ್ತಿರುವ ವಸತಿ ಯೋಜನೆಗಳು, ಅಲ್ಪಸಂಖ್ಯಾತರನ್ನು ವಿವಿಧ ಸಹಕಾರ ಸಂಘಗಳಲ್ಲಿ ಸದಸ್ಯರಾಗಿ ನೋಂದಾಯಿಸಲು ಸಹಾಯಧನ ನೀಡುವ ಯೋಜನೆಯಡಿ, ರಾಜ್ಯ ವಲಯ ಯೋಜನೆಯಡಿ ಅಲ್ಪಸಂಖ್ಯಾತ ವರ್ಗದವರಿಗೆ ಮೀನುಗಾರಿಕೆ ಸಲಕರಣೆ ಕಿಟ್ಟು ವಿತರಣೆ ಮತ್ತು ಮೀನುಮರಿ ಖರೀದಿಗೆ ಸಹಾಯ ಯೋಜನೆ ಮತ್ತು…

ಮುಂದೆ ಓದಿ...

ಕೋವಿಡ್ ಪರಿಹಾರ: ಸುಪ್ರೀಂಕೋರ್ಟ್ ನಿರ್ದೇಶನ ಪಾಲಿಸಲು ಸೂಚನೆ

ತುಮಕೂರು : ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ದ ವಾರಸುದಾರರಿಗೆ ಪರಿಹಾರ ನೀಡಲು ಅರ್ಜಿ ಸ್ವೀಕಾರ ಹಾಗೂ ಅರ್ಹ ವ್ಯಕ್ತಿಗಳಿಗೆ ಪರಿಹಾರ ಪಾವತಿಸುವ ಕುರಿತು ಸುಪ್ರೀಂಕೋರ್ಟ್ ನೀಡಲಾಗಿರುವ ನಿರ್ದೇಶನಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಕೋವಿಡ್-19 ವೈರಾಣುವಿನಿಂದ ಮೃತಪಟ್ಟ ಕುಟುಂಬದವರಿಗೆ ಕೇಂದ್ರ ಸರ್ಕಾರ Sಆಖಈ ಮಾರ್ಗಸೂಚಿಯನ್ವಯ ತಲಾ 50,000 ರೂ.ಗಳ ಪರಿಹಾರ ಧನ ವಿತರಿಸಲಾಗುತ್ತಿದೆ ಎಂದ ಅವರು ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಮಾರ್ಚ್ 20, 2022ಕ್ಕೂ ಮೊದಲು ಕೋವಿಡ್ -19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪ್ರಕರಣಗಳಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಮಾರ್ಚ್ 20 2022 ರಿಂದ 60 ದಿನಗಳ ಕಾಲಮಿತಿಯನ್ನು ನಿಗದಿಗೊಳಿಸಿದೆ ಎಂದರು. ದಿನಾಂಕ 2022 ಮಾರ್ಚ್ 20ರ ನಂತರ ಕೋವಿಡ್ ನಿಂದ ಮೃತಪಟ್ಟ ವಾರಸುದಾರರು ಅರ್ಜಿ ಸಲ್ಲಿಸಲು…

ಮುಂದೆ ಓದಿ...

ಅಲೆಮಾರಿ ಜನಾಂಗದವರಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಸೂಚನೆ

ತುಮಕೂರು : ಅಲೆಮಾರಿ, ಅರೆ ಅಲೆಮಾರಿಗಳಿಗೆ ನಿವೇಶನ ನೀಡುವುದು ಸೇರಿದಂತೆ ಅವರ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಎಲ್ಲಾ ತಹಶೀಲ್ದಾರ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಅಲೆಮಾರಿ, ಅರೆ ಅಲೆಮಾರಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವುದು ಗಮನಕ್ಕೆ ಬಂದಿದ್ದು, ಜಿಲ್ಲೆಯಲ್ಲಿ ನಿವೇಶನ ರಹಿತ ಅಲೆಮಾರಿ/ಅರೆ ಅಲೆಮಾರಿಗಳಿಗೆ ನಿವೇಶನ ನೀಡುವುದು ಸೇರಿದಂತೆ ಅವರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ಮಧುಗಿರಿ ಹಾಗೂ ಕೊರಟಗೆರೆ ತಾಲ್ಲೂಕುಗಳಲ್ಲಿ ಅಲೆಮಾರಿ/ಅರೆ ಅಲೆಮಾರಿ ಸಮುದಾಯದವರು ಹೆಚ್ಚಿನ ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ವರದಿಯಾಗಿದ್ದು, ತ್ವರಿತವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಳೆದ ಶುಕ್ರವಾರ ಪರಿಶಿಷ್ಟರ ಅನುದಾನ ಬಳಕೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ವಿಶೇಷ ಘಟಕ ಯೋಜನೆ, ಗಿರಿಜನ…

ಮುಂದೆ ಓದಿ...