ಮಲೇರಿಯಾ ಜಾಗೃತಿ ಜಾಥಾಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ

ತುಮಕೂರು: ವಿಶ್ವ ಮಲೇರಿಯಾ ದಿನದ ಅಂಗವಾಗಿ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರ ಯದಲ್ಲಿ ಜನಸಾಮಾನ್ಯರಲ್ಲಿ ಮಲೇರಿಯಾ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಮಲೇರಿಯಾ ದಿನದ ಜಾಗೃತಿ ಜಾಥಾವನ್ನು ನಡೆಸಲಾಯಿತು. ನಗರದ ಟೌನ್‍ಹಾಲ್ ವೃತ್ತದಲ್ಲಿ ಜಮಾಯಿಸಿದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ನಡೆದ ಮಲೇರಿಯಾ ಜಾಗೃತಿ ಜಾಥಾಕ್ಕೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಜಿ.ಪಂ. ಸಿಇಓ ಡಾ. ಕೆ. ವಿದ್ಯಾಕುಮಾರಿ ಅವರು, ಮಲೇರಿಯಾ ಜ್ವರದ ರೂಪದಲ್ಲಿ ಕಾಣಿಸಿಕೊಳ್ಳುತ್ತಿದೆ. ಒಂದು ಸೊಳ್ಳೆಯಿಂದ ಬರುವಂತಹ ಕಾಯಿಲೆ ಇದಾಗಿದೆ. ಈ ಹಿಂದೆ ಈ ಕಾಯಿಲೆಯಿಂದ ಅನೇಕ ಜನ ಸಾವನ್ನಪ್ಪಿದ್ದಾರೆ. ಆದರೆ ಇಂದು ಚಿಕಿತ್ಸೆಯಿಂದಾಗಿ ಸಾವು ಸಂಭವಿಸುತ್ತಿಲ್ಲ. ಇದನ್ನು…

ಮುಂದೆ ಓದಿ...

ಅಮಾನಿಕೆರೆಯಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ

ತುಮಕೂರು: ನಗರದ ಅಮಾನಿಕೆರೆಗೆ ಅಣೆತೋಟದ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಮಳೆ ನೀರು ಹರಿಯುತ್ತಿರುವ ಕಾಲುವೆಗೆ ತಡೆಗೋಡೆ ನಿರ್ಮಾಣ ಮಾಡುವ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಇಂದು ಚಾಲನೆ ನೀಡಿದರು. ಅಣೆತೋಟದ ಮೂಲಕ ಹಾದು ಹೋಗಿರುವ ಮುಖ್ಯ ಕಾಲುವೆಗೆ ತಡೆಗೋಡೆ ಹಾಗೂ ಅಮಾನಿಕೆರೆಗೆ ಈ ಕಾಲುವೆ ಸೇರಿಕೊಳ್ಳುವ ಜಾಗದಲ್ಲಿ ಚೆಕ್ ಡ್ಯಾಂ ನಿರ್ಮಾಣ ಕಾರ್ಯಕ್ಕೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ನಗರದ ಸತ್ಯಮಂಗಲ ಸೇರಿದಂತೆ ವಿವಿಧೆಡೆಗಳಿಂದ ಮಳೆ ನೀರು ಅಣೆತೋಟದಲ್ಲಿ ಹಾದು ಹೋಗಿರುವ ಮುಖ್ಯ ಕಾಲುವೆ ಮೂಲಕ ಹರಿದು ಅಮಾನಿಕೆರೆಗೆ ಸೇರುತ್ತಿದ್ದು, ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದ ಸಂದರ್ಭದಲ್ಲಿ ಜನತೆಗೆ ತೀವ್ರ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಈ ಭಾಗದ ಪಾಲಿಕೆ ಸದಸ್ಯರುಗಳು, ಸಾರ್ವಜನಿಕರ ಮನವಿ ಮೇರೆಗೆ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ. ಮಾಧುಸ್ವಾಮಿ ಅವರಿಗೆ ಈ ಕಾಲುವೆಗೆ ತಡೆಗೋಡೆ ನಿರ್ಮಿಸಲು ಅನುದಾನ ನೀಡುವಂತೆ…

ಮುಂದೆ ಓದಿ...