ಇದು ನನ್ನ ಕೊನೆಯ ಚುನಾವಣೆ ಒಗ್ಗಟ್ಟಿನಿಂದ ಗೆಲ್ಲಿಸಿ: ಕೆ.ಎನ್ ರಾಜಣ್ಣ

ಮಧುಗಿರಿ: ಇದು ನನ್ನ ಕೊನೆಯ ಚುನಾವಣೆ ಮುಖಂಡರುಗಳು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಮಾಜಿ ಶಾಸಕ .ಕೆ ಎನ್ ರಾಜಣ್ಣ ತಿಳಿಸಿದ್ದಾರೆ. ತಾಲ್ಲೊಕಿನ ಮಿಡಿಗೇಶಿ ಹೋಬಳಿಯ ಬಿದರೆಕೆರೆ ಗ್ರಾಮದ ಬಯಲಾಂಜನೇಯ ಸ್ವಾಮಿ ದೇವಾಲಯದ ಅವರಣದಲ್ಲಿ ಬೇಡತ್ತೂರು ಪಂಚಾಯಿತಿಯ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ಮಧುಗಿರಿ ಕ್ಷೇತ್ರದಲ್ಲಿ ಈಗಾಗಲೆ ಕೆಲವು ಮಂದಿ ಅಭ್ಯರ್ಥಿಗಳಾಗಲು ಓಡಾಡುತ್ತಿದ್ದಾರೆ ಅವರುಗಳು ನಮ್ಮ ಆಸ್ತಿ ಉಳಿಸಿಕೊಳ್ಳಲು ರಾಜಕಾರಣಕ್ಕೆ ಬರುತ್ತಿದ್ದಾರೆ ಅವರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ.ಮನವಿ ಮಾಡಿದ ಅವರು ಕಳೆದ ಬಾರಿ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೆಎನ್‍ಆರ್ ಗಿಂತ ಹತ್ತು ಪಟ್ಟು ಕೆಲಸ ಮಾಡುತ್ತೇನೆ ಎಂದು ಹೇಳಿ ಸೀರೆ ಹಂಚಿ ಗೆಲುವು ಸಾಧಿಸಿದ ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ನನ್ನ ಅವಧಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಾರ್ಯಕರ್ತರು ಮತದಾರರು ಆತ್ಮಾವಲೋಕನೆ ಮಾಡಿಕೊಳ್ಳಿ ನನ್ನ ಕಾರ್ಯಗಳ ಬಗ್ಗೆ ಹೇಳಿಕೊಳ್ಳುವುದು ಏನಿಲ್ಲ…

ಮುಂದೆ ಓದಿ...

ಮಾಜಿ ಶಾಸಕ ಕೆ.ಎನ್ ರಾಜಣ್ಣ ಹುಟ್ಟುಹಬ್ಬ: ಸಾರ್ವಜನಿಕರಿಗೆ ಬೃಹತ್ ಆರೋಗ್ಯ ಮೇಳ

ತುಮಕೂರು: ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರ ಹುಟ್ಟು ಹಬ್ಬದ ಕಾರ್ಯಕ್ರಮದ ಅಂಗವಾಗಿ ಬುಧವಾರ ಕ್ಯಾತ್ಸಂದ್ರದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಪೌರಕಾರ್ಮಿಕರು, ಸಾರ್ವಜನಿಕರಿಗಾಗಿ ಬೃಹತ್ ಆರೋಗ್ಯ ಮೇಳ ಏರ್ಪಡಿಸಲಾಗಿತ್ತು. ರಾಜಣ್ಣ ಅವರ ಹುಟ್ಟು ಹಬ್ಬದ ಅಂಗವಾಗಿ ಬೆಳಗ್ಗೆ 6 ಗಂಟೆಯಿಂದ ಅವರ ಅಭಿಮಾನಿಗಳು, ಸಾರ್ವಜನಿಕರು ಕ್ಯಾತ್ಸಂದ್ರದ ಅವರ ಮನೆಗೆ ತೆರಳಿ ಹಾರ, ತುರಾಯಿ ತೊಡಿಸಿ, ತಮ್ಮ ಅಭಿನಂದನೆ ಸಲ್ಲಿಸಿದರು.ಬಂದವರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಮಾತನಾಡಿದ ಕೆ.ಎನ್.ರಾಜಣ್ಣ ಅವರು,ಕಳೆದ ಎರಡು ವರ್ಷಗಳ ಕಾಲ ಕೋರೋನದಿಂದಾಗಿ ಅಭಿಮಾನಿಗಳ ಒತ್ತಡವಿದ್ದರೂ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಅವಕಾಶ ನೀಡಿರಲಿಲ್ಲ. ಆದರೆ ಈ ಬಾರಿ ಜನರ ಒತ್ತಡ ಮಣಿದು ಹುಟ್ಟು ಹಬ್ಬ ಆಚರಿಸಿಕೊಳ್ಳುತಿದ್ದೇನೆ. ಇಡೀ ಜಿಲ್ಲೆಯ ಜನರು ಬಂದು ತಮ್ಮ ಅಭಿಮಾನ ತೋರಿಸುತ್ತಿದ್ದಾರೆ. ಇದಕ್ಕಿಂತ ಸೌಭಾಗ್ಯ ಮತ್ತೊಂದು ಇಲ್ಲ ಎಂದರು. ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸÀಂತೋಷ್…

ಮುಂದೆ ಓದಿ...