ಪರಿಶಿಷ್ಟ ಜಾತಿ ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಧರಣಿ

ತುಮಕೂರು: ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ರಾಜನಹಳ್ಳಿಯ ಶ್ರೀವಾಲ್ಮೀಕಿ ಮಹರ್ಷಿಗಳು ನಡೆಸುತ್ತಿರುವ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಇಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್‍ಹಾಲ್ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮುಖಂಡರುಗಳು ಸರಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಅಶೋಕ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಮಾವೇಶಗೊಂಡ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯೆ ಹಾಗೂ ಶಬರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಶ್ರೀಮತಿ ಶಾಂತಲಾ ರಾಜಣ್ಣ,ಮೀಸಲಾತಿ ಹೆಚ್ಚಳ ಮಾಡಿ ಎಂದು ನಮ್ಮ ಸಂವಿಧಾನ ಬದ್ದವಾದ ಹಕ್ಕನ್ನು ಕೇಳುತ್ತಿದ್ದೆವೆಯೇ ಹೊರತು ಭೀಕ್ಷೆಯನ್ನಲ್ಲ.ಸಂವಿಧಾನದ ಪ್ರಕಾರ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಪ್ರಮಾಣ…

ಮುಂದೆ ಓದಿ...

ಗುತ್ತಿಗೆ ಪದ್ದತಿ ರದ್ದು ಪಡಿಸುವಂತೆ ಒತ್ತಾಯಿಸಿ ನೀರು ಸರಬರಾಜು ನೌಕರರ ಪ್ರತಿಭಟನೆ

ತುಮಕೂರು : ಗುತ್ತಿಗೆ ಪದ್ದತಿ ರದ್ದು ಮಾಡಿ, ನೇರ ನೇಮಕಾತಿಗೆ ಅವಕಾಶ ಕಲ್ಪಿಸಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಖಾಯಿ ಇರುವ ವಾಟರ್‍ಮನ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ತುಮಕೂರು ಜಿಲ್ಲಾ ನೀರು ಸರಬರಾಜು ನೌಕರರ ಸಂಘ(ರಿ)ದ ಸದಸ್ಯರು ಇಂದು ಪಾಲಿಕೆಯ ಎದುರು ಪ್ರತಿಭಟನಾ ಧರಣಿ ನಡೆಸಿದರು. ಪ್ರತಿಭಟನಾ ನಿರತ ವಾಟರ್‍ಮನ್‍ಗಳನ್ನು ಉದ್ದೇಶಿಸಿ ಮಾತನಾಡಿದ ಕೆ.ಕುಮಾರ್, ಮಹಾನಗರಪಾಲಿಕೆಯಲ್ಲಿ ಕಳೆದ 20-25 ವರ್ಷಗಳಿಂದ ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ನೀರು ಗಂಟೆಗಳಿಗೆ ಇದುವರೆಗೂ ಖಾಯಂ ಆಗಿಲ್ಲ. ಅಲ್ಲದೆ ವೇತನವೂ ಸರಿಯಾದ ಸಮಯಕ್ಕೆ ದೊರೆಯುವುದಿಲ್ಲ. ಪ್ರತಿಭಾರಿಯೂ ಪ್ರತಿಭಟನೆ ಮಾಡಿಯೇ ವೇತನ ಪಡೆಯಬೇಕಾದ ಸ್ಥಿತಿ ಇದೆ.ಸ್ವತಃ ರಾಜ್ಯಪಾಲರೆ ಪಾಲಿಕೆಗಳಲ್ಲಿ ಗುತ್ತಿಗೆ ನೌಕರರ ಪದ್ದತಿಯನ್ನು ರದ್ದು ಮಾಡುವಂತೆ ಸೂಚನೆ ನೀಡಿದ್ದರೂ ಇದುವರೆಗೂ ಅದನ್ನು ರಾಜ್ಯ ಸರಕಾರಗಕಳು ಜಾರಿಗೆ ತಂದಿಲ್ಲ. ಈ ಹಿಂದೆ ಹಲವು ಬಾರಿ…

ಮುಂದೆ ಓದಿ...

ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

ತುಮಕೂರು: ರಾಜ್ಯ ಬಿಜೆಪಿ ಸರ್ಕಾರದ 40 ಪರ್ಸಂಟೇಜ್ ಕಮೀಷನ್ ದಂಧೆ ಖಂಡಿಸಿ ಹಾಗೂ ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಟೌನ್‍ಹಾಲ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ಸರ್ಕಾರ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರು, ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಎಫ್‍ಐಆರ್‍ನಲ್ಲಿ ಸೇರ್ಪಡೆ ಮಾಡಿ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಪಕ್ಷದ ಮುಖಂಡನಾಗಿದ್ದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವಂತಹ ದಯನೀಯ ಸ್ಥಿತಿ ಬಿಜೆಪಿ ಸರ್ಕಾರದಲ್ಲಿದೆ. ಇದು ಆ ಪಕ್ಷ ಹಾಗೂ ಸರ್ಕಾರಕ್ಕೆ ಗೌರವ ತರುವುದಿಲ್ಲ ಎಂದು ಕಿಡಿಕಾರಿದರು. ಭ್ರಷ್ಟಾಚಾರದ ಆರೋಪ…

ಮುಂದೆ ಓದಿ...

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಸಿಯೂಟ ನೌಕರರ ಪ್ರತಿಭಟನೆ

ತುಮಕೂರು: 60 ವರ್ಷ ವಯೋಮಾನ ನೆಪವೊಡ್ಡಿ 19 ವರ್ಷ ಸೇವೆಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಬರಿಗೈಲ್ಲಿ ಕಳಿಸುವ ಸರ್ಕಾರದ ಅಮಾನವೀಯ ನಡೆಗೆ ಖಂಡನೆ. ಕನಿಷ್ಟ 1ಲಕ್ಷ ಇಡಿಗಂಟು ನೀಡಲು ಒತ್ತಾಯ. ಮಧ್ಯಾನ್ಹದ ಬಿಸಿಯೂಟ ಯೋಜನೆಯು ಪ್ರಾರಂಭವಾದ ವರ್ಷದಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ, ಮಕ್ಕಳ ಗೈರುಹಾಜರಿ ತಡೆಗಟ್ಟಲು ಶಿಕ್ಷಣ ಇಲಾಖೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿಕೊಂಡು ಬಂದಿರುವ ಅಡುಗೆಯವರನ್ನು 60 ವರ್ಷ ವಯೋಮಾನ ನೆಪವೊಡ್ಡಿ 19 ವರ್ಷ ಸೇವೆ ಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡಿರುವ ಕ್ರಮವನ್ನು ಅಕ್ಷರದಾಸೋಹ ನೌಕರರ ಸಂಘ (ಸಿಐಟಿಯು ಸಂಯೋಜಿತ) ತೀವ್ರವಾಗಿ ಖಂಡಿಸಿ ದಿನಾಂಕ;11-04-2022 ರಂದು ಜಿಲ್ಲಾ ಪಂಚಾಯತಿ ಎದರು ಪ್ರತಿಭಟನೆ ನಡೆಸಿ ಉಪಕಾರ್ಯದರ್ಶಿ-1 ರವರಿಗೆ ಮನವಿ ಸಲ್ಲಿಸಲಾಯಿತು. ಸರ್ಕಾರ ನಿವೃತ್ತಿ ವೇತನ ನಿಗದಿ ಮಾಡುವವರೆಗೆ ಈ ತಕ್ಷಣದಲ್ಲಿ ಬಿಡುಗಡೆಮಾಡುವ ಬಿಸಿಯೂಟ ನೌಕರರಿಗೆ ಇಡಿಗಂಟು…

ಮುಂದೆ ಓದಿ...

ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ತುಮಕೂರು: ಹಿಜಾಬ್, ಹಲಾಲ್ ಕಟ್, ವ್ಯಾಪಾರ ಬಂದ್ ನಂತಹ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು, ಸದ್ದುಗದ್ದಲವಿಲ್ಲದೆ ತೈಲ ಬೆಲೆ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿ, ಜನ ಸಾಮಾನ್ಯರ ಜೇಬಿಗೆ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರ ಕತ್ತರಿ ಹಾಕುತ್ತಿದೆ ಎಂದು ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಮಠ್ ಆರೋಪಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಯುವ ಕಾಂಗ್ರೆಸ್ ವತಿಯಿಂದ ಅಗತ್ಯವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡುತಿದ್ದ ಅವರು, ಜನಸಾಮಾನ್ಯರನ್ನು ಕಿತ್ತು ತಿನ್ನುತ್ತಿರುವ ಬೆಲೆ ಹೆಚ್ಚಳದ ಬಗ್ಗೆ ಮಾತನಾಡದ ಬಿಜೆಪಿ ನಾಯಕರು, ಸಂಘಪರಿವಾರ ಮತ್ತು ಅದರ ಮಿತ್ರಮಂಡಳಿಗಳು ಹೂಡುತ್ತಿರುವ ಷಡ್ಯಂತ್ರಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಾ,ದೇಶವನ್ನು ಅದೋಗತಿಗೆ ತಳ್ಳುತ್ತಿದೆ ಎಂದರು. ಭಾರತ ಒಂದು ಜಾತ್ಯಾತೀತ ರಾಷ್ಟ್ರ.ಇಲ್ಲಿ ಎಲ್ಲ ಧರ್ಮಿಯರು ನೆಮ್ಮದಿಯಿಂದ ವ್ಯಾಪಾರ, ವಹಿವಾಟು ನಡೆಸಿಕೊಂಡು ಹೋಗಲು ಮುಕ್ತ ಅವಕಾಶವಿದೆ.ಆದರೆ ಇತ್ತೀಚಿನ…

ಮುಂದೆ ಓದಿ...

ವಸತಿ ವಂಚಿತರ ಧರಣಿಗೆ ಆರ್.ರಾಜೇಂದ್ರ ಬೆಂಬಲ

ತುಮಕೂರು: ಭೂಮಿ ಮತ್ತು ವಸತಿ ವಂಚಿತ ಸಮುದಾಯ ಹಾಗೂ ಭ್ರಷ್ಟಾಚಾರ ನಿಮೂರ್ಲನ ವೇದಿಕೆಯ ವತಿಯಿಂದ ಭೂಮಿ ಮತ್ತು ವಸತಿ ಹಕ್ಕಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಆಹೋರಾತ್ರಿ ಧರಣಿ 17ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಭೇಟಿ ನೀಡಿ ಪ್ರತಿಭಟನಾನಿರತರ ಮನವಿ ಆಲಿಸಿದರು. ಕಳೆದ 17ನೇ ದಿನದಿಂದ ಜಿಲ್ಲೆಯ ವಿವಿಧೆಡೆ ವಸತಿ ಮತ್ತು ಭೂಮಿ ರಹಿತ ಹೋರಾಟಗಾರರು ಒಂದೆಡೆ ಸೇರಿ,ಬಗರ್ ಹುಕಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವ ಜನರಿಗೆ ಕೂಡಲೇ ಸಾಗುವಳಿ ಚೀಟಿ ಬಿಡುಗಡೆ ಮಾಡಬೇಕು ಹಾಗು ದಲಿತ ವಿರೋಧಿ ಧೋರಣೆ ಹೊಂದಿರುವ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಬೇಕೆಂದು ಆಗ್ರಹಿಸಿ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಸಂಚಾಲಕ ಹಂದ್ರಾಳು ನಾಗಭೂಷಣ್ ಅವರ ನೇತೃತ್ವದಲ್ಲಿ ಮಾರ್ಚ್ 21 ರಿಂದ ತಮ್ಮ ಕುಟುಂಬದ ಸದಸ್ಯರು,ಕುರಿ,ಮೇಕೆಗಳೊಂದಿಗೆ ಸ್ಥಳದಲ್ಲಿಯೇ ಅಡುಗೆ ತಯಾರಿಸಿ,ಊಟೋಪಚಾರ ಮಾಡುವ ಮೂಲಕ ಹೋರಾಟ ನಡೆಸುತ್ತಿದ್ದಾರೆ. ಬುಧವಾರ ಬೆಳಗ್ಗೆ…

ಮುಂದೆ ಓದಿ...