ದಲಿತ ಯುವಕರ ಸಾವಿಗೆ ಸ್ಪಂದನೆಯೇ ಇಲ್ಲದಂತಾಗಿದೆ: ಆರ್.ರಾಜೇಂದ್ರ

ತುಮಕೂರು: ರಾಜ್ಯದಲ್ಲಿರುವ ಎಲ್ಲಾ ವರ್ಗದ ಜನರನ್ನು ರಕ್ಷಿಸುವುದಾಗಿ ಪ್ರಮಾಣ ವಚನ ಸ್ವೀಕರಿಸುವ ಶಾಸಕರು, ಸಚಿವರುಗಳು, ಇಬ್ಬರು ದಲಿತ ಯುವಕರ ಕೊಲೆಯಾಗಿ 8 ದಿನಗಳು ಕಳೆಯುತ್ತಾ ಬಂದರೂ ಇದುವರೆಗೂ ಸೌಜನ್ಯಕ್ಕಾದರೂ ಒಬ್ಬರು ಭೇಟಿ ನೀಡದಿರುವುದು ದಲಿತರ ಬಗ್ಗೆ ಸರಕಾರಕ್ಕೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಸರಕಾರದ ವಿರುದ್ದ ಕಿಡಿ ಕಾರಿದ್ದಾರೆ. ಇಂದು ಏಪ್ರಿಲ್ 22 ರಂದು ಭರ್ಬರವಾಗಿ ತನ್ನ ಗ್ರಾಮದವರಿಂದಲೇ ಕೊಲೆಯಾದ ಪೆದ್ದನಹಳ್ಳಿಯ ಗಿರೀಶ್ ಮತ್ತು ಮಂಚಲದೊರೆಯ ಗಿರೀಶ್ ಮನೆಗೆ ಭೇಟಿ ನೀಡಿ,ಅವರು ಕುಟುಂಬಗಳಿಗೆ ಸಾಂತ್ವಾನ ಹೇಳಿ, ತಮ್ಮ ಕೈಲಾದ ಅರ್ಥಿಕ ನೆರವು ನೀಡಿ,ನಿಮ್ಮ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಲ್ವರ್ಗದ ಜನರು ಕೊಲೆಯಾದಾಗÀ, ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನೆ ನಡೆಸಿ, ಶವದ ಮೆರವಣಿಗೆ ನಡೆಸಿ,ಪರಿಹಾರ ವಿತರಿಸುವ ಸರಕಾರದ ಸಚಿವರುಗಳು, ತುಮಕೂರು ಜಿಲ್ಲೆಯಲ್ಲಿ ದಲಿತ ಯುವಕರ…

ಮುಂದೆ ಓದಿ...

ಹಿಂದುಳಿದ ವರ್ಗದ ಏಳ್ಗೆಗಾಗಿ ಶ್ರಮಿಸುವೆ: ಎಂಎಲ್ಸಿ ಆರ್.ರಾಜೇಂದ್ರ

ತುಮಕೂರು: ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ 1043ನೇ ಜಯಂತಿ ಅಂಗವಾಗಿ ದೇವರದಾಸಿಮಯ್ಯನವರ ಭಾವಚಿತ್ರ ಮೆರವಣಿಗೆಯು ನಗರದಲ್ಲಿ ಅದ್ದೂರಿಯಾಗಿ ನಡೆಯಿತು. ನಗರದ ಟೌನ್‍ಹಾಲ್ ವೃತ್ತದಲ್ಲಿ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಆರಂಭವಾದ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಆರ್. ರಾಜೇಂದ್ರ ಅವರು, 2015 ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅವಧಿಯಲ್ಲಿ ದೇವರ ದಾಸಿಮಯ್ಯನವರ ಜಯಂತಿಯನ್ನು ಪ್ರಾರಂಭಿಸಲಾಯಿತು. ಅಂದಿನಿಂದ ಈ ಜಯಂತಿಯನ್ನು ಆಚರಿಸುತ್ತಾ ಬರಲಾಗುತ್ತಿದೆ.ಹಿಂದುಳಿದ ವರ್ಗಗಳಲ್ಲಿ ಒಂದಾದ ನೇಕಾರರ ಸಮುದಾಯ ರಾಜಕೀಯ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಮುಂದೆ ಬರಬೇಕು. ಈ ಸಮುದಾಯದ ಏಳ್ಗೆಗೆ ತಾವು ಸದಾ ಶ್ರಮಿಸುವುದಾಗಿ ಹೇಳಿದರು. ರಾಜಕೀಯವಾಗಿ ಈ ಜನಾಂಗ ಅತ್ಯಂತ ಹಿಂದುಳಿದಿದೆ. ಇತ್ತೀಚೆಗೆ ನಡೆದ ಗ್ರಾ.ಪಂ. ಚುನಾವಣೆಯಲ್ಲಿ ಬೆರಳೆಣಿಕೆಯಷ್ಟು ಮಂದಿ ಮಾತ್ರ ಸ್ಪರ್ಧಿಸಿ ಗೆದ್ದಿದ್ದಾರೆ. ಆದ್ದರಿಂದ ನಾವೆಲ್ಲರೂ ಪಕ್ಷಾತೀತಾಗಿ ಈ ಹಿಂದುಳಿದ ಜನಾಂಗದ…

ಮುಂದೆ ಓದಿ...

ವಸತಿ ವಂಚಿತರ ಧರಣಿಗೆ ಆರ್.ರಾಜೇಂದ್ರ ಬೆಂಬಲ

ತುಮಕೂರು: ಭೂಮಿ ಮತ್ತು ವಸತಿ ವಂಚಿತ ಸಮುದಾಯ ಹಾಗೂ ಭ್ರಷ್ಟಾಚಾರ ನಿಮೂರ್ಲನ ವೇದಿಕೆಯ ವತಿಯಿಂದ ಭೂಮಿ ಮತ್ತು ವಸತಿ ಹಕ್ಕಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಆಹೋರಾತ್ರಿ ಧರಣಿ 17ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಭೇಟಿ ನೀಡಿ ಪ್ರತಿಭಟನಾನಿರತರ ಮನವಿ ಆಲಿಸಿದರು. ಕಳೆದ 17ನೇ ದಿನದಿಂದ ಜಿಲ್ಲೆಯ ವಿವಿಧೆಡೆ ವಸತಿ ಮತ್ತು ಭೂಮಿ ರಹಿತ ಹೋರಾಟಗಾರರು ಒಂದೆಡೆ ಸೇರಿ,ಬಗರ್ ಹುಕಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವ ಜನರಿಗೆ ಕೂಡಲೇ ಸಾಗುವಳಿ ಚೀಟಿ ಬಿಡುಗಡೆ ಮಾಡಬೇಕು ಹಾಗು ದಲಿತ ವಿರೋಧಿ ಧೋರಣೆ ಹೊಂದಿರುವ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಬೇಕೆಂದು ಆಗ್ರಹಿಸಿ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಸಂಚಾಲಕ ಹಂದ್ರಾಳು ನಾಗಭೂಷಣ್ ಅವರ ನೇತೃತ್ವದಲ್ಲಿ ಮಾರ್ಚ್ 21 ರಿಂದ ತಮ್ಮ ಕುಟುಂಬದ ಸದಸ್ಯರು,ಕುರಿ,ಮೇಕೆಗಳೊಂದಿಗೆ ಸ್ಥಳದಲ್ಲಿಯೇ ಅಡುಗೆ ತಯಾರಿಸಿ,ಊಟೋಪಚಾರ ಮಾಡುವ ಮೂಲಕ ಹೋರಾಟ ನಡೆಸುತ್ತಿದ್ದಾರೆ. ಬುಧವಾರ ಬೆಳಗ್ಗೆ…

ಮುಂದೆ ಓದಿ...