ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರಿಂದ ರಂಜಾನ್ ಸಡಗರ

ತುಮಕೂರು: ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಉಲ್ ಫಿತರ್ ರಂಜಾನ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಳೆದ ಎರಡು ವರ್ಷಗಳಿಂದ ಕೊರೊನಾ ಮಹಾಮಾರಿಯ ಆರ್ಭಟದಿಂದಾಗಿ ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಯಾವುದೇ ಅದ್ದೂರಿ, ಆಡಂಬರ ಇಲ್ಲದೆ ತಮ್ಮ ಮನೆಗಳಲ್ಲೇ ಆಚರಿಸಿದ್ದರು. ಆದರೆ ಈ ಬಾರಿ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ತಗ್ಗಿ, ಕಠಿಣ ಕ್ರಮಗಳನ್ನು ತೆರವುಗೊಳಿಸಿರುವುದರಿಂದ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಿದರು. ಬೆಳಿಗ್ಗೆ 9.15ಕ್ಕೆ ನಗರದ ಮೆಳೇಕೋಟೆ ಸಮೀಪ ಇರುವ ಮಾಜಿ ಶಾಸಕ ಡಾ. ನಜೀರ್ ಅಹ್ಮದ್ ಈದ್ಗಾ (ಕೆಂಪು ಈದ್ಗಾ) ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಮಾವೇಶಗೊಂಡು ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿದರು. ನಂತರ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಜಮಾಯಿಸಿದ ಸಾವಿರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ,…

ಮುಂದೆ ಓದಿ...

ರಂಜಾನ್ ಉಪವಾಸ ಸೌಹಾರ್ದತೆಯ ಬದುಕಿನ ಸಂದೇಶ

ತುಮಕೂರು: ಎಲ್ಲಿ ಶಾಂತಿ ಮತ್ತು ಪ್ರೀತಿ ಇರುತ್ತದೆಯೋ ಅಲ್ಲಿ ಮಾನವ ವಿಕಾಸದ ಜಗತ್ತಿನ ಉಳಿವು ಇರುತ್ತದೆ ಎಲ್ಲಿ ಧ್ವೇಷ ಅಸೂಯೆ ಇರುತ್ತದೆಯೋ ಅಲ್ಲಿ ಜಗತ್ತಿನ ನಾಶ ಮತ್ತು ಮಾನವ ವಿಕಾಸದ ನಾಶವಾಗುತ್ತದೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಪ್ರೊ ಕೆ. ದೊರೈರಾಜ್ ಹೇಳಿದರು ತುಮಕೂರಿನ ಎನ್.ಆರ್ ಕಾಲೋನಿ ದಲಿತ ಮತ್ತು ಕೋತಿ ತೋಪು ಮದೀನ ಮಹೊಲ್ಲ ಮುಸ್ಲಿಂ ಸೌಹಾರ್ದ ಸಮಿತಿಯಿಂದ ರಂಜಾನ್ ಹಬ್ಬದ ಅಂಗವಾಗಿ ದಲಿತರಿಂದ ಮುಸ್ಲಿಂ ಬಾಂಧವರಿಗೆ ಸಮುದಾಯ ಶೈಕ್ಷಣಿಕ ಭವನದಲ್ಲಿ ಹಮ್ಮಿಕೊಂಡಿದ್ದ ಇಫ್ತಾರ್ ಕೂಟದಲ್ಲಿ ಮುಖ್ಯ ಭಾಷಣ ಮಾಡಿದ ಕೆ.ದೊರೈರಾಜ್ ಮನುಷ್ಯ ಪ್ರೀತಿ, ಶಾಂತಿ ಮತ್ತು ಸಂತೋಷದಿಂದ ಬದುಕುವಂತಾಗಬೇಕು, ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದ್ವೇಷ ಸರಿಯಲ್ಲ. ರಂಜಾನ್ ಉಪವಾಸ ಮನುಷ್ಯನಲ್ಲಿರುವ ಕ್ರೌರ್ಯವನ್ನು ದಹಿಸಿ ಹಸಿವಿನ ಅನುಭವವನ್ನು ಕಲಿಸುವುದರಿಂದ ಸಮಾಜದಲ್ಲಿ ಸೌಹಾರ್ಧಯುತವಾಗಿ ಬದುಕುವ ಸಂದೇಶ ನೀಡುತ್ತದೆ ಸಮಾಜದಲ್ಲಿರುವ ಅಶಕ್ತರನ್ನು ಗೌರವದಿಂದ ಕಾಣುವಂತೆ ಮಾಡುತ್ತದೆ ಎಂದರು.…

ಮುಂದೆ ಓದಿ...