ವೈದ್ಯಕೀಯ ಕಾಲೇಜುಗಳಲ್ಲಿ ಸೆಮಿಸ್ಟರ್‌ಗೆ ಅನುಗುಣವಾಗಿ ವಿದ್ಯಾಭ್ಯಾಸಕ್ಕೆ ಅವಕಾಶ ನೀಡುವಂತೆ ಮನವಿ

ತುಮಕೂರು: ಉಕ್ರೇನ್‌ ದೇಶದಿಂದ ರಾಜ್ಯಕ್ಕೆ ಮರಳಿ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಸೆಮಿಸ್ಟರ್‌ಗೆ ಅನುಗುಣವಾಗಿ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಉಕ್ರೇನ್‌ನಿಂದ ವಾಪಸ್‌ ಆಗಿರುವ ಜಿಲ್ಲೆಯ 26 ವಿದ್ಯಾರ್ಥಿಗಳು ಮತ್ತು ಅವರವರ ಪೋಷಕರು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಉಕ್ರೇನ್‌ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದು, ಸದ್ಯ ವಿದ್ಯಾ ಭ್ಯಾಸದಿಂದ ವಂಚಿತರಾಗಿದ್ದಾರೆ. ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಹಾಗೂ ಮಾನವೀಯ ಆಧಾರದ ಮೇಲೆ ರಾಜ್ಯ ಮತ್ತು ದೇಶದ ಯಾವುದಾದರೂ ವೈದ್ಯಕೀಯ ಕಾಲೇಜಿನಲ್ಲಿ ಸೆಮಿಸ್ಟರ್‌ಗೆ ಅನುಗುಣವಾಗಿ ದಾಖಲಾತಿ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು, ಭವಿಷ್ಯದ ಹಿತದೃಷ್ಟಿಯಿಂದ ನಮಗೆಲ್ಲ ಮುಂದಿನ ವಿದ್ಯಾಭ್ಯಾಸವನ್ನು ರಾಜ್ಯದಲ್ಲಿ ಮುಂದುವರೆಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್‌ .ಪಾಟೀಲ್‌,…

ಮುಂದೆ ಓದಿ...