ವಿಶ್ವ ಜಲ ದಿನ: ಕೆರೆಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ

ತುಮಕೂರು: ಜಿಲ್ಲೆಯಲ್ಲಿರುವ ಕೆರೆಗಳನ್ನು ಮಲಿನಗೊಳಿಸದೆ ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಜಲ ದಿನಾಚರಣೆ’ ಪ್ರಯುಕ್ತ ಮಂಗಳವಾರ ನಗರದ ಮರಳೂರು ಕೆರೆ ದಂಡೆಯಲ್ಲಿ ಏರ್ಪಡಿಸಿದ್ದ ಕೆರೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವಸಂಸ್ಥೆಯ ಆಶಯದಂತೆ ನೀರಿನ ಮಹತ್ವ ಮತ್ತು ಜಲ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಈ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಅಂತರ್ಜಲ ಬತ್ತಿ ಹೋಗುತ್ತಿದ್ದು, ಕೆರೆಗಳಲ್ಲಿ ನೀರು ಭರ್ತಿಯಾಗುತ್ತಿಲ್ಲ. ಗಿಡ-ಮರಗಳನ್ನು ಕಡಿಯುತ್ತಿರುವುದರಿಂದ ಉತ್ತಮ ಮಳೆ ಬಾರದಾಗಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕಾರ್ಯಕ್ರಮಗಳ…

ಮುಂದೆ ಓದಿ...