BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ
  • ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು
  • ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು
  • ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ
  • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ
  • ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ
  • ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
  • ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೂಲಿ – ಕಟ್ಟಡ ಕಾರ್ಮಿಕರಿಗೆ ಉಚಿತ ಸ್ಮಾರ್ಟ್‍ಕಾರ್ಡ್ : ಕೆ.ಟಿ.ಶಾಂತಕುಮಾರ್
Trending

ಕೂಲಿ – ಕಟ್ಟಡ ಕಾರ್ಮಿಕರಿಗೆ ಉಚಿತ ಸ್ಮಾರ್ಟ್‍ಕಾರ್ಡ್ : ಕೆ.ಟಿ.ಶಾಂತಕುಮಾರ್

By News Desk BenkiyabaleUpdated:March 08, 2021 7:14 pm

ತಿಪಟೂರು : 

     ಕೂಲಿ ಮತ್ತು ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯಗಳಿಗೆ ಸರ್ಕಾರದ ಸೌಲಭ್ಯಗಳು ಸಿಗಬೇಕೆಂಬ ಉದ್ದೇಶದಿಂದ ಶಾಂತಕುಮಾರ್ ಅಭಿಮಾನಿ ಬಳಗದ ವತಿಯಿಂದ ಉಚಿತ ಸ್ಮಾರ್ಟ್ ಕಾರ್ಡ್‍ಗಳನ್ನು ಮಾಡಿಸಿಕೊಡಲಾಗುವುದು ಎಂದು ತಾಲೂಕು ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದರು.

      ನಗರದ ಖಾಸಗಿ ಹೋಟೆಲ್‍ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಕಾರ್ಮಿಕರಿದ್ದು ಅವರು ಸರ್ಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಎಷ್ಟೋ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ಬಗ್ಗೆ ಮಾಹಿತಿ ಇಲ್ಲದಂತಾಗಿದೆ. ಕಟ್ಟಡಕಾರ್ಮಿಕರು, ಹಮಾಲರು, ಚಿಂದಿ ಆಯುವವರು, ಗೃಹ ಕಾರ್ಮಿಕರು, ಟೈಲರ್, ಕೃಷಿ, ರಸ್ತೆ ಕಾರ್ಮಿಕರು, ಕಮ್ಮಾರರು, ಗಾರ್ಮೆಂಟ್ಸ್ ಸೇರಿದಂತೆ ಕೆಳ ವರ್ಗದ ಕೂಲಿ ಕಾರ್ಮಿಕರಿಗೆ ಸರ್ಕಾರದ ಯಾವುದೇ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದೆ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ವರೆಲ್ಲ ನಿತ್ಯ ಕಷ್ಟದ ಜೀವನ ನಡೆಸುತ್ತಿದ್ದು, ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ, ಕುಟುಂಬ ನಿರ್ವಹಣೆಗೆ ಕಷ್ಟಪಡುವಂತಾಗಿದೆ. ಸರ್ಕಾರವೂ ಸಹ ಇಂತಹ ಅಸಂಘಟಿತ ವಲಯಗಳನ್ನು ಗುರ್ತಿಸಿ ಅಂಬೇಡ್ಕರ್ ಕಾರ್ಮಿಕರ ಸಹಾಯ ಹಸ್ತ ಯೋಜನೆಯಡಿ ಸ್ಮಾರ್ಟ್‍ಕಾರ್ಡ್‍ಗಳನ್ನು ವಿತರಿಸಲಾಗುತ್ತಿದೆ. ಆದರೆ ಈ ಬಗ್ಗೆ ಮಾಹಿತಿಯ ಕೊರತೆ ಎದ್ದು ಕಾಣುತ್ತಿದೆ. ಸ್ಮಾರ್ಟ್ ಕಾರ್ಡ್ ಪಡೆದುಕೊಂಡರೆ ಪಿಂಚಣಿ ಸೌಲಭ್ಯ, ವಸತಿ, ಹೆರಿಗೆ ಸೌಲಭ್ಯ, ಮದುವೆಗೆ ಧನಸಹಾಯ, ಅಪಘಾತ ಪರಿಹಾರ, ಅಂತ್ಯಕ್ರಿಯೆ ವೆಚ್ಚ ಸೇರಿದಂತೆ ಹತ್ತಾರು ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು. ತಾಲೂಕಿನಲ್ಲಿರುವ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕ ಒಕ್ಕೂಟದ ಸಹಯೋಗದೊಂದಿಗೆ ನಾವು ಕೈಜೋಡಿಸಿ ನಗರ ಮತ್ತು ತಾಲೂಕಿನಲ್ಲಿರುವ ಅಸಂಘಟಿತ ವಲಯಗಳನ್ನು ಸರ್ವೆ ಮಾಡಿ ಅವರಿಗೆ ಸ್ಮಾರ್ಟ್‍ಕಾರ್ಡ್ ಮಾಡಿಕೊಡಲಾಗುವುದು. ಒಂದು ಸ್ಮಾರ್ಟ್‍ಕಾರ್ಡ್ ಮಾಡಿಕೊಡಲು 250-500ರೂ ಖರ್ಚಾಗಲಿದ್ದು ಕೂಲಿ ಕಾರ್ಮಿಕರು ಇಷ್ಟೊಂದು ಹಣವನ್ನು ಒದಗಿಸಲು ಕಷ್ಟವಾಗಲಿದೆ. ಇವರ ಕಷ್ಟವನ್ನು ಅರಿತು ಉಚಿತವಾಗಿ ಸ್ಮಾರ್ಟ್‍ಕಾರ್ಡ್ ಮಾಡಿಸಿಕೊಡುವ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದೇನೆ. ನಗರದಲ್ಲಿರುವ ಕಾರ್ಮಿಕ ಇಲಾಖೆ ಕಾರ್ಮಿಕರ ಯೋಗಕ್ಷೇಮ ವಿಚಾರಿಸುವಲ್ಲಿ ವಿಫಲವಾಗಿದ್ದು, ದಿನದ 24 ಗಂಟೆಯೂ ಬಾಗಿಲನ್ನು ಮುಚ್ಚಿರುತ್ತದೆ. ಎಷ್ಟೋ ಕಾರ್ಮಿಕರಿಗೆ ನಗರದಲ್ಲಿ ಕಾರ್ಮಿಕ ಇಲಾಖೆ ಇದೆ ಎಂಬುದೇ ಮರೆತು ಹೋಗಿದೆ. ತಾಲೂಕು ಆಡಳಿತ ಈ ಬಗ್ಗೆ ಗಮನಹರಿಸಿ ಕಾರ್ಮಿಕರಿಗೆ ಸರ್ಕಾರದಿಂದ ಬರುವ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ತಾಲೂಕಿನಲ್ಲಿರುವ ಕಾರ್ಮಿಕರನ್ನು ಒಗ್ಗೂಡಿಸಿ ಕಾರ್ಮಿಕ ಇಲಾಖೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಶಾಂತಕುಮಾರ್ ಎಚ್ಚರಿಕೆ ನೀಡಿದರು.

      ನಾನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‍ರವರ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ತಾಲೂಕಿನಲ್ಲಿ ಪಕ್ಷ ಸಂಘಟನೆ ಮಾಡುವಂತೆ ನನಗೆ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಬೇಡ. ಮಾಜಿ ಶಾಸಕರಾದ ಕೆ.ಷಡಕ್ಷರಿಯವರು 45 ವರ್ಷಗಳಿಂದಲೂ ತಾಲೂಕಿನ ಜನರ ಸೇವೆ ಮಾಡುತ್ತಾ ಬಂದಿದ್ದು, ಅವರ ಬಗ್ಗೆ ನಮಗೆ ಅಪಾರ ಗೌರವವಿದ್ದು ಮುಂದಿನ ದಿನಗಳಲ್ಲಿ ಅವರೊಂದಿಗೆ ಸೇರಿ ಪಕ್ಷ ಸಂಘಟನೆಯಲ್ಲಿ ತೊಡಗುತ್ತೇನೆ. ಎಂದು ಕೆ.ಟಿ. ಶಾಂತಕುಮಾರ್ ತಿಳಿಸಿದರು.

     ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಟ್ಟದ ನಿರ್ಮಾಣ ಕಾರ್ಮಿಕ ಒಕ್ಕೂಟದ ತಾ. ಅಧ್ಯಕ್ಷ ಸರ್ವೇಶಾಚಾರ್, ಕೆ.ಟಿಎಸ್ ಅಭಿಮಾನಿ ಬಳಗದ ಮೋಹನ್‍ಬಾಬು, ದಿನೇಶ್, ಮಂಜುನಾಥ್, ಧರಣೀಶ್ ಮತ್ತಿತರರಿದ್ದರು.

(Visited 53 times, 1 visits today)
Previous Articleತೆಂಗು ಮೇಳ/ ಕಾರ್ಯಾಗಾರ ಆಯೋಜಿಸುವ ಬಗ್ಗೆ ಡಿಸಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
Next Article ಕೊಡಿಗೇನಹಳ್ಳಿ : ರಸ್ತೆ ಬಿಡುವಂತೆ ಆಗ್ರಹಿಸಿ 3 ಗ್ರಾಮಗಳ ಪ್ರತಿಭಟನೆ
News Desk Benkiyabale

Related Posts

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm news

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm news

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm news
ತಾಜಾ ಸುದ್ಧಿಗಳು

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm
Our Youtube Channel
Our Picks

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

By News Desk BenkiyabaleJune 30, 2026 5:10 pm

ತುಮಕೂರು: ಪೌತಿ ಖಾತಾ ಆಂದೋಲನ-೨ರ ಅಂಗವಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೋಮವಾರ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ವ್ಯಾಪ್ತಿಯ…

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.