ಜಯಂತಿಗಳನ್ನು ಸರಳವಾಗಿ ಆಚರಿಸುವಂತೆ ಎಡಿಸಿ ಸೂಚನೆ

ತುಮಕೂರು:

      ಜನವರಿ 14ರಂದು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಜನವರಿ 19ರಂದು ಮಹಾಯೋಗಿ ವೇಮನ ಜಯಂತಿ ಹಾಗೂ ಜನವರಿ 21ರಂದು ನಡೆಯುವ ಅಂಬಿಗರ ಚೌಡಯ್ಯ ಜಯಂತಿಗಳನ್ನು ಸರಳವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಅವರು ತಿಳಿಸಿದರು.

      ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಮಹಾಯೋಗಿ ವೇಮನ ಜಯಂತಿ, ಅಂಬಿಗರ ಚೌಡಯ್ಯ ಜಯಂತಿಗಳ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಕೆಲವು ಭಾಗಗಳಲ್ಲಿ ಸಂಭವಿಸಿದ ನೆರೆಪ್ರವಾಹದ ಕಾರಣ ಸರ್ಕಾರದ ನಿರ್ದೇಶನದಂತೆ ಸಂಭ್ರಮದ ಆಚರಣೆ ಮಾಡದೆ, ನಿಗಧಿತ ದಿನಾಂಕಗಳಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಹಾಪುರುಷರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಾತ್ವಿಕವಾಗಿ ಆಚರಣೆ ಮಾಡುವಂತೆ ಅವರು ಸೂಚಿಸಿದರು.

      ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ, ಪಾಲಿಕೆಯ ಆರೋಗ್ಯಾಧಿಕಾರಿ ಡಾ.ನಾಗೇಶ್, ಜಿಲ್ಲಾ ರೆಡ್ಡಿ ಜನ ಸಂಘದ ಅಧ್ಯಕ್ಷ ಕೆ.ಶ್ರೀನಿವಾಸರೆಡ್ಡಿ ಹಾಗೂ ಕಾರ್ಯದರ್ಶಿ ಬಿ.ಎನ್.ಪುಟ್ಟನರಸರೆಡ್ಡಿ ಸೇರಿದಂತೆ ಮತ್ತಿತರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಜರಿದ್ದರು.

(Visited 12 times, 1 visits today)

Related posts

Leave a Comment