ತುಮಕೂರು : ಕೋವಿಡ್ ಮಾರ್ಗಸೂಚಿ ಪರಿಶೀಲಿಸಿದ ಐಜಿಪಿ

ತುಮಕೂರು: 

       ನಗರ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೋನಾ ತಡೆಗಾಗಿ ಸರ್ಕಾರ ನೇಮಕ ಮಾಡಿರುವ ಕೋವಿಡ್ ನಿಯಂತ್ರಣ ಉಸ್ತುವಾರಿಯಾಗಿರುವ ಐಜಿಪಿ ಸೀಮಂತಕುಮಾರ್ ಸಿಂಗ್ ಅವರು ನಗರಕ್ಕೆ ಭೇಟಿ ನೀಡಿ ಕೊರೊನಾ ಮಾರ್ಗಸೂಚಿ ಪಾಲನೆ ಸಂಬಂಧ ಪರಿಶೀಲನೆ ನಡೆಸಿದರು.

      ನಗರದ ವಿವಿಧ ರಸ್ತೆಗಳು, ಬಡಾವಣೆಗಳಿಗೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ಅವರೊಂದಿಗೆ ಭೇಟಿ ನೀಡಿದ ಐಜಿಪಿ ಸೀಮಂತಕುಮಾರ್ ಸಿಂಗ್ ಕೊರೊನಾ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಕೋವಿಡ್ ನಿಯಮಗಳ ಬಗ್ಗೆ ನಿರ್ಲಕ್ಷ್ಯ ತೋರದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ಮಾಡಿದರು.
ನಗರದ ಬಿ.ಹೆಚ್. ರಸ್ತೆ, ಗಂಗೋತ್ರಿ ರಸ್ತೆ, ಎಸ್‍ಐಟಿ ಮುಖ್ಯ ರಸ್ತೆ, ಎಸ್.ಎಸ್.ಪುರಂ ರಸ್ತೆ, ಅಶೋಕ ರಸ್ತೆ, ರಿಂಗ್ ರಸ್ತೆ ಸೇರಿದಂತೆ ವಿವಿಧೆಡೆಗಳಲ್ಲಿ ಸಂಚರಿಸಿದ ಕೋವಿಡ್ ಉಸ್ತುವಾರಿ ಸೀಮಂತಕುಮಾರ್ ಸಿಂಗ್ ಅವರು ಜಿಲ್ಲಾ ಪೆÇಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಕೋವಿಡ್ ನಿಯಂತ್ರಣ ಕುರಿತು ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ವಾರಾಂತ್ಯ ಲಾಕ್‍ಡೌನ್ ಜಾರಿಗೊಳಿಸಿದೆ. ಈ ವಾರಾಂತ್ಯ ಲಾಕ್‍ಡೌನ್ ಸಂದರ್ಭದಲ್ಲಿ ವಿನಾ ಕಾರಣ ಸಾರ್ವಜನಿಕರು ರಸ್ತೆಗಿಳಿಯದೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಮುಖೇನ ಕೊರೊನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಕೈಜೋಡಿಸಬೇಕು. ಜಿಲ್ಲಾ ಪೆÇಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜನತೆ ಪಾಲಿಸುವಂತೆ ಮನವಿ ಮಾಡಿದರು.

     ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಅನುಷ್ಠಾನ ಕುರಿತು ಈಗಾಗಲೇ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇನೆ. ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿಯಾಗಿದೆ. ಬಹಳ ಒಳ್ಳೆಯ ರೀತಿಯಲ್ಲಿ ಜಿಲ್ಲೆಯ ಜನರು ಸಹಕರಿಸುತ್ತಿದ್ದಾರೆ ಎಂದರು.
ಸರ್ಕಾರ ನನಗೆ ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ ಉಸ್ತುವಾರಿ ನೀಡಿದೆ. ಹಾಗಾಗಿ ತುಮಕೂರು ಜಿಲ್ಲೆಯಲ್ಲಿನ ಕೊರೊನಾ ನಿಯಮಗಳ ಕುರಿತು ಪರಿಶೀಲನೆ ಮಾಡಲು ಭೇಟಿ ನೀಡಿದ್ದೇನೆ ಎಂದರು.

      ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ಮಾತನಾಡಿ, ಸರ್ಕಾರ ಘೋಷಣೆ ಮಾಡಿರುವ ವಾರಾಂತ್ಯ ಲಾಕ್‍ಡೌನ್, ಕರ್ಫ್ಯೂ ಸಂದರ್ಭದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಮನೆಗಳಿಂದ ಹೊರಬರದೆ ಮನೆಯೊಳಗೆ ಇದ್ದು ಈ ಮಹಾಮಾರಿ ನಿಯಂತ್ರಣಕ್ಕೆ ಸಹಕರಿಸಬೇಕು. ಒಂದು ವೇಳೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸದೆ ವಿನಾ ಕಾರಣ ಮನೆಯಿಂದ ಹೊರ ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಖಚಿತ. ಇದಕ್ಕೆ ಜಿಲ್ಲೆಯ ಜನ ಅವಕಾಶ ನೀಡುವುದಿಲ್ಲ ಎಂಬ ನಂಬಿಕೆ ತಮಗಿದೆ ಎಂದರು.

     ಮೇ 4ರ ವರೆಗೂ ಸರ್ಕಾರದ ಮಾರ್ಗ ಸೂಚಿಗಳನ್ನು ಪಾಲಿಸುವು ದರೊಂದಿಗೆ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಮತ್ತು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

(Visited 10 times, 1 visits today)

Related posts

Leave a Comment