ತುಮಕೂರು : 18 ಮಂದಿಗೆ ಕೊರೋನಾ ಸೋಂಕು ದೃಢ!!

ತುಮಕೂರು:

      ಜಿಲ್ಲೆಯಲ್ಲಿ 18 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 630ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

     ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 7, ಚಿಕ್ಕನಾಯಕನಹಳ್ಳಿ-5, ಕುಣಿಗಲ್-3 ಮಂದಿ ಹಾಗೂ ತಿಪಟೂರು, ಗುಬ್ಬಿ, ತುರುವೇಕೆರೆ ತಾಲೂಕಿನಲ್ಲಿ ತಲಾ ಒಬ್ಬರು ಸೇರಿದಂತೆ ಒಟ್ಟು 18 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.

      ಜಿಲ್ಲಾಸ್ಪತ್ರೆಯಿಂದ 45 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 267 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 345 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 18 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

(Visited 10 times, 1 visits today)

Related posts

Leave a Comment