ಕೊರಟಗೆರೆ


ಪಟ್ಟಣದ ಎಸ್ ಎಸ್ ಆರ್ ವೃತ್ತದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಿಕ ಆಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮದ ಅಡಿಯಲ್ಲಿ ಡಿವೈಎಸ್ಪಿ ವೆಂಕಟೇಶ್ ನಾಯ್ಡು ಸಿಪಿಐ ಸುರೇಶ್ ಪಿ ಎಸ್ ಐ ಚೇತನ್ ಕುಮಾರ್ ,ಕೋಳಾಲ ಪೆÇಲೀಸ್ ಠಾಣೆಯ ಸಬ್‍ಇನ್ಸ್ಪೆಕ್ಟರ್ ಮಹಾಲಕ್ಷ್ಮಿ ಸೇರಿದಂತೆ ತಮ್ಮ ಇಲಾಖೆಯ 60 ಕ್ಕೂ ಹೆಚ್ಚು ಪೆÇಲೀಸ್ ಸಿಬ್ಬಂದಿಗಳ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು …
ಡಿವೈಎಸ್ ಪಿ ವೆಂಕಟೇಶ್ ನಾಯ್ಡು ಮಾತನಾಡಿ .:ಪ್ರತಿಯೊಬ್ಬ ವ್ಯಕ್ತಿಯೂ ಅವರ ಕುಟುಂಬದ ಆಧಾರ ಸ್ತಂಭವಾಗಿರುತ್ತಾರೆ ಪ್ರತಿ ಜೀವಕ್ಕೂ ಬೆಲೆಯಿದೆ ಆದ್ದರಿಂದ ವಾಹನ ಸವಾರರು ತಮ್ಮ ಮನೆಯಿಂದ ಹೊರಡುವಾಗಲೇ ಹೆಲ್ಮೆಟ್ ಧರಿಸಿಕೊಂಡು ಸಂಚಾರ ಮಾಡುವುದು ಕಡ್ಡಾಯವಾಗಿದೆ ..
ದ್ವಿಚಕ್ರ ವಾಹನ ಸವಾರರಿಗೆ ದಂಡ ವಿಧಿಸುವುದು ನಮ್ಮ ಕೆಲಸವಲ್ಲ ಸಾವಿರಾರು ಸಂಖ್ಯೆಯಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಜೀವ ಕಳೆದುಕೊಂಡಿದ್ದಾರೆ ಅವರ ಕುಟುಂಬಗಳು ಇಂದು ಪಡಬಾರದ ಕಷ್ಟ ಪಡುತ್ತಿದ್ದಾರೆ ಆದ್ದರಿಂದ ಜೀವದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿರುತ್ತದೆ
ಆದ್ದರಿಂದ ದಯವಿಟ್ಟು ಎಲ್ಲಾ ಸಾರ್ವಜನಿಕರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ಎಂದು ತಿಳಿಸಿದರು..
ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್ ಮಾತನಾಡಿ :- ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ ನಾವು ಕಂಡಂತಹ ಅನೇಕ
ಅಪಘಾತಗಳಲ್ಲಿ ಹೆಲ್ಮೆಟ್ ಧರಿಸಿದೇ ವಾಹನ ಸವಾರರು ಪ್ರಾಣ ಕಳೆದುಕೊಂಡಿದ್ದಾರೆ ಆದ್ದರಿಂದ ಪ್ರತಿಯೊಬ್ಬರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು
ಹೆಲ್ಮೆಟ್ ಕಡ್ಡಾಯ ಜಾಥಾ ಕಾರ್ಯಕ್ರಮದಲ್ಲಿ ಕೊರಟಗೆರೆ ತಾಲ್ಲೂಕಿನ ಎಲ್ಲ ಪೆÇಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದ್ವಿಚಕ್ರ ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.

(Visited 1 times, 1 visits today)