6 ತಿಂಗಳಲ್ಲಿ ತುಮಕೂರಿಗೆ ನಿರಂತರ ನೀರು ಪೂರೈಕೆ-ಶಾಸಕ

ತುಮಕೂರು:

      ನಗರಕ್ಕೆ ದಿನದ 24 ಗಂಟೆಗಳೂ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಕಾಮಗಾರಿ ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ನೀರು ಶುದ್ಧೀಕರಣ ಘಟಕದಿಂದ ನೇರವಾಗಿ ನೀರು ಪೂರೈಸಲಾಗುವುದು ಎಂದು ಶಾಸಕ ಬಿ.ಜಿ.ಜ್ಯೋತಿಗಣೇಶ್ ತಿಳಿಸಿದರು.

      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  196 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಈಗಾಗಲೇ 2 ವಾರ್ಡ್‍ಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಜಾರಿಗೊಳಿಸಲಾಗಿದೆ. ಇದರಿಂದ ಶೇ 90ರಷ್ಟು ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ’ ಎಂದರು.

      44 ಓವರ್‍ಹೆಡ್ ಟ್ಯಾಂಕ್‍ಗಳನ್ನು ತುಂಬಿಸಿ ಅಲ್ಲಿಂದ ವಾಲ್‍ಮೆನ್‍ಗಳ ಸಹಾಯವಿಲ್ಲದೆ ನೀರು ಹರಿಸಲಾಗುವುದು. ಈ ಯೋಜನೆಯಿಂದ ಮುಂದಿನ ದಿನಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಅಗತ್ಯ ಇಲ್ಲದಂತೆ ಆಗುತ್ತದೆ. ಪಾಲಿಕೆ ಎಂಜಿನಿಯರ್‍ಗಳು ಈ ಬಗ್ಗೆ ನಿಗಾವಹಿಸಬೇಕು ಎಂದರು.

      ಸ್ಮಾರ್ಟ್‍ಸಿಟಿಯಿಂದ ಜೂನಿಯರ್ ಕಾಲೇಜು ಮೈದಾನದಲ್ಲಿ ಕ್ರೀಡಾ ಸಂಕೀರ್ಣ, ಅಂಗನವಾಡಿ, ಅಮಾನಿಕೆರೆಯ ಗಾಜಿನ ಮನೆ ಪಕ್ಕದಲ್ಲಿ ತುಮಕೂರು ಸಿಟಿ ಸಂತೆ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಮುಖಂಡ ವೇದಮೂರ್ತಿ ಇದ್ದರು.

(Visited 11 times, 1 visits today)

Related posts

Leave a Comment