BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ
  • ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಿ
  • ಸ್ತನ ಕ್ಯಾನ್ಸರ್: ಆತಂಕ ಬೇಡ ಎಚ್ಚರವಿರಲಿ
  • ಶರಣರ ವಚನಗಳು ಕೇವಲ ಪದಗಳಲ್ಲ ಅಂತರ0ಗದ ಅಮೃತ ಬಿಂದುಗಳು
  • ವಿಜ್ಞಾನದ ಜೊತೆಗೆ ಸಾಹಿತ್ಯಿಕ ಮನೋಭಾವ ಬೆಳೆಸಿಕೊಳ್ಳಿ
  • ದಾಸ್ ವರದಿ ತಿರಸ್ಕರಿಸುವಂತೆ ಒತ್ತಾಯ
  • ಸಾಹಿತ್ಯ ಕ್ಷೇತ್ರದಲ್ಲಿ ಅಸಹನೀಯ ವಾತಾವರಣ
  • ಬಿ.ಸಿ.ಕಾವಲ್ ನಕಲಿ ದಾಖಲೆ: ಕ್ರಮಕ್ಕೆ ಆಗ್ರಹ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತ, ಯುವಜನರ ವಿರೋಧಿ ಬಜೆಟ್:ಡಾ.ಇಂತಿಯಾಜ್ ಅಹಮದ್
ತುಮಕೂರು ಜಿಲ್ಲಾ ಸುದ್ಧಿಗಳು

ರೈತ, ಯುವಜನರ ವಿರೋಧಿ ಬಜೆಟ್:ಡಾ.ಇಂತಿಯಾಜ್ ಅಹಮದ್

By News Desk BenkiyabaleUpdated:February 01, 2019 4:09 pm

 ತುಮಕೂರು:

      ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದಲ್ಲಿ ಹಣಕಾಸು ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಮಂಡಿಸಿರುವ ಮಧ್ಯಂತರ ಬಜೆಟ್ ಯುವಕರ, ನಿರುದ್ಯೋಗಿಗಳ ಹಾಗೂ ರೈತರ ವಿರೋಧಿ ಬಜೆಟ್ ಆಗಿದೆ ಎಂದು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷ ಡಾ.ಇಂತಿಯಾಜ್ ಅಹಮದ್ ಆರೋಪಿಸಿದ್ದಾರೆ.

      ಕೇಂದ್ರದ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಇಂದು ಮಂಡನೆಯಾಗಿರುವ ಕೇಂದ್ರ ಬಜೆಟ್ ಮುಂಬರುವ ಲೋಕಸಭಾ ಚುನಾವಣೆ ದೃಷ್ಠಿಯಲ್ಲಿಟ್ಟುಕೊಂಡು ಮಾಡಲಾಗಿದೆ. ಈ ಬಜೆಟ್‍ನಲ್ಲಿ ನಿರುದ್ಯೋಗ ಯುವಕರಿಗೆ ಉದ್ಯೋಗ ಕಲ್ಪಿಸುವ ಯಾವುದೇ ಯೋಜನೆ ಜಾರಿಗೆ ತಂದಿಲ್ಲ, ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರಗೊಳ್ಳುವ ಲಕ್ಷಣಗಳು ಹೆಚ್ಚಾಗಲಿವೆ ಎಂದಿದ್ದಾರೆ.

       ದೇಶದ ಬೆನ್ನೆಲುಬಾಗಿರುವ ರೈತರ ಸಾಲಮನ್ನಾ ಹುಸಿಗೊಳಿಸಿರುವ ಈ ಬಜೆಟ್‍ನಲ್ಲಿ 5 ಎಕರೆಗಿಂತ ಕಡಿಮೆ ಭೂಮಿ ಇರುವ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂ. ಅವರ ಖಾತೆಗೆ ಜಮೆ ಮಾಡುವ ಮೂಲಕ ರೈತರ ಮೂಗಿಗೆ ತುಪ್ಪ ಸವರಲು ಹೊರಟಿದೆ ಎಂದು ಆಪಾದಿಸಿದ್ದಾರೆ.

      ಕೇವಲ 5 ಎಕರೆ ಒಳಗಿರುವ ರೈತರಿಗೆ ಮಾತ್ರ ವಾರ್ಷಿಕ 6 ಸಾವಿರ ರೂ. ಘೋಷಣೆ ಮಾಡಿದ್ದು, ಉಳಿದಂತೆ 5 ಎಕರೆಗಿಂತ ಹೆಚ್ಚಿರುವ ರೈತರಿಗೆ ಕಷ್ಟಗಳಿಲ್ಲವೆ ಎಂದು ಪ್ರಶ್ನಿಸಿರುವ ಅವರು ಇಂದು ಭೂಮಿ ಹೆಚ್ಚಿರುವ ರೈತರೇ ಸಾಲಬಾಧೆಯಿಂದ ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ ಈ ಬಗ್ಗೆ ಕೇಂದ್ರ ಯಾವ ಕ್ರಮವನ್ನೂ ತೆಗೆದುಕೊಳ್ಳದೇ ಬರೀ ಸಣ್ಣ ರೈತರಿಗೆ ಮಾತ್ರ ಮೂಗಿಗೆ ತುಪ್ಪ ಸವರಿದೆ ಎಂದು ಹೇಳಿದ್ದಾರೆ.

      ಕರ್ನಾಟಕಕ್ಕೆ ಯಾವುದೇ ಜನಪ್ರಿಯ ಯೋಜನೆಗಳನ್ನು ನೀಡದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿರುವ ಡಾ.ಇಂತಿಯಾಜ್ ಅಹಮದ್ ಬಜೆಟ್‍ನಲ್ಲಿ ನದಿ ಜೋಡಣೆ ಅಥವಾ ಕೆರೆಗಳ ಜೋಡಣೆ ಮಾಡದೇ ಇರುವುದು ದುರಂತ, ನದಿ, ಕೆರೆಗಳ ಜೋಡಣೆಯಿಂದ ತಮ್ಮ ಬದುಕನ್ನು ಹಸನು ಮಾಡಿಕೊಳ್ಳಬಹುದೆಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ ಎಂದು ಹೇಳಿದ್ದಾರೆ.

      ಈ ಮಧ್ಯಂತರ ಬಜೆಟ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರ ಒಲವು ಗಳಿಸಲು ಪ್ರಯತ್ನಿಸಿದ್ದು, ಎಲ್ಲಾ ರೀತಿಯಿಂದಲೂ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

      2019-20ರ ಕೇಂದ್ರದ ಮಧ್ಯಂತರ ಬಜೆಟ್ ಸಂಪೂರ್ಣವಾಗಿ ‘ರೈತ ವಿರೋಧಿ’ ಮತ್ತು ‘ಯುವಜನ ವಿರೋಧಿ’ ಆಗಿದೆ. ತೀರಾ ಸಂಕಷ್ಟದಲ್ಲಿರುವ ಈ ಎರಡೂ ವರ್ಗಗಳಿಗೆ ಸಮಾಧಾನ ನೀಡಬಲ್ಲ ಬಲವಾದ ಯಾವ ಯೋಜನೆಗಳೂ ಬಜೆಟ್ ನಲ್ಲಿ ಇಲ್ಲ. ಎರಡೂ ವರ್ಗಕ್ಕೂ ಪ್ರಧಾನಿ ನರೇಂದ್ರ ಮೋದಿ ದ್ರೋಹ ಎಸಗಿದ್ದಾರೆ

(Visited 24 times, 1 visits today)
Previous Articleಕೌಟುಂಬಿಕ ಕಲಹಗಳಿಗೆ ಬೇಗ ನ್ಯಾಯ ಸಿಗಬೇಕು
Next Article  ತುಮಕೂರಿಗೆ ನೂತನ ಸಿಇಓ ಆಗಿ ಶುಭಾ ಕಲ್ಯಾಣ್
News Desk Benkiyabale

Related Posts

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ

March 24, 2026 5:00 pm ತುಮಕೂರು ಜಿಲ್ಲಾ ಸುದ್ಧಿಗಳು

ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಿ

March 24, 2026 4:58 pm ತುಮಕೂರು ಜಿಲ್ಲಾ ಸುದ್ಧಿಗಳು

ಸ್ತನ ಕ್ಯಾನ್ಸರ್: ಆತಂಕ ಬೇಡ ಎಚ್ಚರವಿರಲಿ

March 24, 2026 4:56 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ

March 24, 2026 5:00 pm
ತುಮಕೂರು ಜಿಲ್ಲಾ ಸುದ್ಧಿಗಳು

ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಿ

March 24, 2026 4:58 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ತನ ಕ್ಯಾನ್ಸರ್: ಆತಂಕ ಬೇಡ ಎಚ್ಚರವಿರಲಿ

March 24, 2026 4:56 pm
ತುಮಕೂರು ಜಿಲ್ಲಾ ಸುದ್ಧಿಗಳು

ಶರಣರ ವಚನಗಳು ಕೇವಲ ಪದಗಳಲ್ಲ ಅಂತರ0ಗದ ಅಮೃತ ಬಿಂದುಗಳು

March 24, 2026 4:54 pm
ತುಮಕೂರು ಜಿಲ್ಲಾ ಸುದ್ಧಿಗಳು

ವಿಜ್ಞಾನದ ಜೊತೆಗೆ ಸಾಹಿತ್ಯಿಕ ಮನೋಭಾವ ಬೆಳೆಸಿಕೊಳ್ಳಿ

March 24, 2026 4:53 pm
ತುಮಕೂರು ಜಿಲ್ಲಾ ಸುದ್ಧಿಗಳು

ದಾಸ್ ವರದಿ ತಿರಸ್ಕರಿಸುವಂತೆ ಒತ್ತಾಯ

March 24, 2026 4:52 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ

By News Desk BenkiyabaleMarch 24, 2026 5:00 pm

ತುಮಕೂರು: ಇಂದಿನಿ0ದ ರಾಷ್ಟ್ರಾದ್ಯಂತ ಕ್ಷಯ ಮುಕ್ತ ಭಾರತ ಅಭಿಯಾನದಡಿ ೧೦೦ ದಿನಗಳ ಕಾಲ ಸಕ್ರಿಯವಾಗಿ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯಕ್ರಮ…

ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ವಹಿಸಿ

March 24, 2026 4:58 pm

ಸ್ತನ ಕ್ಯಾನ್ಸರ್: ಆತಂಕ ಬೇಡ ಎಚ್ಚರವಿರಲಿ

March 24, 2026 4:56 pm

ಶರಣರ ವಚನಗಳು ಕೇವಲ ಪದಗಳಲ್ಲ ಅಂತರ0ಗದ ಅಮೃತ ಬಿಂದುಗಳು

March 24, 2026 4:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.