ತುಮಕೂರು


ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಬೆಂಗಳೂರಿನ ಸಿಂಧಿ ಚಾರಿಟಬಲ್ ಟ್ರಸ್ಟ್ ವತಿಯಿಂದ 12 ಆಮ್ಲಜನಕಗಳ ಸಾಂದ್ರಕಗಳನ್ನು(ಆಕ್ಸಿಜನ್ ಕಾನ್ಸೆಂಟ್ರೇಟರ್) ನೀಡುವ ಮೂಲಕ ಸಮಾಜದ ಬಡವರ್ಗದ ರೋಗಿಗಳಿಗೆ ಉಚಿತವಾಗಿ ಬಳಸಿಕೊಳ್ಳುವಂತೆ ಮನವಿ ಮಾಡಿದೆ.
ಕಾರ್ಯಕ್ರಮದಲ್ಲಿ ಸಿಂಧಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ದೀಪಕ್ ಮಹಾರಾಜ್ ಮಾತನಾಡಿ ಸಾರ್ವಜನಿಕರಿಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಸಿಂಧಿ ಚಾರಿಟಬಲ್ ಟ್ರಸ್ಟ್ ಸಂಸ್ಥೆಯನ್ನು ಆರಂಭಿಸಿದ್ದು, ಇದುವರೆಗೂ 50 ಸಾಂದ್ರಿಕೆಗಳನ್ನು ಗ್ರಾಮೀಣ ಪ್ರದೇಶಗಳ ಆರೋಗ್ಯ ಕೇಂದ್ರಗಳಿಗೆ ನೀಡಿದ್ದೇವೆ. ಬಡತನದ ಜನರಿಗೆ ಸಹಾಯವಾಗುವಂತೆ ಮಾನವ ಸಂಪನ್ಮೂಲಗಳು ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದರು.
ಸಾಹೇ ವಿಶ್ವವಿದ್ಯಾಲಯದ ಕುಲಪತಿ ಪಿ ಬಾಲಕೃಷ್ಣ ಶೆಟ್ಟಿ ಮಾತನಾಡಿ ಸಾಕ್ಷರತೆ ಹೆಚ್ಚುತ್ತಿರುವುದರಿಂದ ವೈದ್ಯಕೀಯ ಕಾಲೇಜು, ಸಮಾಜಕ್ಕೆ ಅನೇಕ ಸೇವೆ ಕೊಡುಗೆ ನೀಡುತ್ತಾ ಬರುತ್ತಿದೆ. ಇದನ್ನೆಲ್ಲಾ ಪರಿಗಣಿಸಿ ಬೆಂಗಳೂರಿನ ಸಿದ್ದು ಚಾರಿಟಬಲ್ ಟ್ರಸ್ಟ್, ಸಿದ್ದಾರ್ಥ ಆಸ್ಪತ್ರೆಗೆ 12 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ ಎಂದರು.
ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ, ಸಾಹೇ ವಿಶ್ವವಿದ್ಯಾಲಯದ ರಿಜಿಸ್ಟರ್ ಡಾ. ಎಂ.ಜೆಡ್.ಕುರಿಯನ್, ಸಿಂಧಿ ಚಾರಿಟಬಲ್ ಟ್ರಸ್ಟ್‍ನ ಉಪಾಧ್ಯಕ್ಷೆ ಮಾಯಾ ರಾಜೀವ್, ಸಹ ಸಂಸ್ಥಾಪಕಿಯರದ ದಿಶಾ ಶರ್ಮ ಮತ್ತು ಸಿಮ್ರಾನ್
ಶರ್ಮ, ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಸುಶೀಲ್‍ಚಂದ್ರ ಮಹಾ ಪಾತ್ರ, ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ.ಎನ್., ಕಾಲೇಜಿನ ಅಧೀಕ್ಷಕರಾದ ಡಾ.ಎ.ವೆಂಕಟೇಶ್, ಆರೋಗ್ಯ ಸಾಧನಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

(Visited 2 times, 1 visits today)