ಕುಣಿಗಲ್


ಎಡೆಯೂರು ಕ್ಷೇತ್ರದಲ್ಲಿರುವ ಶ್ರೀ ಮದ್ರಂಭಾಪುರಿ ಖಾಸಾ ಶಾಖಾ ಮಠದ ಆವರಣದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿದ ನಂತರ ಜರುಗಿದ ಧರ್ಮ ಸಮಾರಂಭದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಆಶೀರ್ವಚನ ನೀಡಿದರು.
ಪ್ರಾಚೀನ ಇತಿಹಾಸ ಪರಂಪರೆ ಹೊಂದಿದ ಬಾಳೆಹೊನ್ನೂರು ಖಾಸಾ ಮಠದ ಪರಿಸರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕೆಂಬ ಬಹು ದಿನಗಳ ಅಪೇಕ್ಷೆ ಇಂದು ಸಾಕಾರಗೊಂಡಿದ್ದಕ್ಕೆ ಹರುಷ ವ್ಯಕ್ತಪಡಿಸಿದ ಜಗದ್ಗುರುಗಳು ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನ ನಿರ್ಮಿಸಲು ಸಂಕಲ್ಪಿಸಿದ್ದೇವೆ. ಈ ಭಾಗದ ಜನ ಪ್ರತಿನಿಧಿಗಳು ಮತ್ತು ಭಕ್ತರು ಹೆಚ್ಚಿನ ಸಹಕಾರ ಕೊಡಬೇಕೆಂದು ಬಯಸಿದರು. ವೀರಶೈವ ಧರ್ಮದ ಮೂಲ ಪುರುಷರ ಹೆಸರಿನಲ್ಲಿ ನಿರ್ಮಿಸುತ್ತಿರುವ ಸಮುದಾಯ ಭವನ ಸಾಮಾನ್ಯ ಜನರಿಗೆ ಬಹಳಷ್ಟು ಸಹಕಾರಿಯಾಗಿರುತ್ತದೆ. ಒಂದು ವರ್ಷದ ಅವಧಿಯೊಳಗಾಗಿ ಕಟ್ಟಡ ಪೂರ್ಣಗೊಳಿಸುವ ಇಂಗಿತ ವ್ಯಕ್ತಪಡಿಸಿದರು.
ಎಡೆಯೂರು ಕ್ಷೇತ್ರದ ಪಟ್ಟಾಧ್ಯಕ್ಷರಾದ ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಿ ಮಾತನಾಡಿ ಕಳೆದ 23 ವರುಷಗಳಿಂದ ಶ್ರೀ ಮಠದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ. ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿಕೊಡಬೇಕೆಂಬ ಸದುದ್ದೇಶದಿಂದ ಶ್ರೀ ರಂಭಾಪುರಿ ಜಗದ್ಗುರುಗಳು ಇಂದು ಸಮುದಾಯ ಭವನ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಸಹಕರಿಸಬೇಕೆಂದರು. ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು, ನುಗ್ಗೇಹಳ್ಳಿ ಡಾ.ಮಹೇಶ್ವರ ಶಿವಾಚಾರ್ಯ ಸ್ವಾಮಿಗಳು, ಅಂಬಲದೇವರಹಳ್ಳಿ ಉಜ್ಜನೀಶ್ವರ ಶಿವಾಚಾರ್ಯ ಸ್ವಾಮಿಗಳು, ಹರಿಹರ ವಿನಾಯಕ ನಗರದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು ಸಮ್ಮುಖ ವಹಿಸಿದ್ದರು.
ಮಾಜಿ ಶಾಸಕ ರಾಮಸ್ವಾಮಿಗೌಡ, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಸಿ.
ಮೃತ್ಯುಂಜಯಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವರಾಜ, ಗ್ರಾಮದ ಪರವಾಗಿ ಸಿದ್ಧಲಿಂಗಶೆಟ್ಟಿ ಪಾಲ್ಗೊಂಡಿದ್ದರು.

(Visited 6 times, 1 visits today)