ತುಮಕೂರು


ರಾಷ್ಟ್ರೀಯ ವಿದ್ಯಾರ್ಥಿವೇತನ ಪೆÇೀರ್ಟಲ್‍ನ ಮೆಟ್ರಿಕ್ ವಿದ್ಯಾರ್ಥಿವೇತನ ಯೋಜನೆಯಲ್ಲಿ ಬರುವ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ವಿದ್ಯಾರ್ಥಿವೇತನವನ್ನು ಕಡಿತಗೊಳಿಸುವುದು ವಿಷಾದ ಸಂಗತಿಯಾಗಿದ್ದು, ಕೂಡಲೇ ಈ ಮಕ್ಕಳಿಗೆ ವಿದ್ಯಾರ್ಥಿ ವೇತನ ಮುಂದುವರೆಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಮಹಅಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ ಪಾರ್ಟಿ ಜಿಲ್ಲಾಧ್ಯಕ್ಷ ಸೈಯದ್ ಬುಹಾರ್ನ್ ವುದ್ದೀನ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ..
ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು,1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳು ಆರ್.ಟಿ.ಇ ಅಡಿಯಲ್ಲಿ ಬರುವ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪಡೆಯುತ್ತಿದ್ದು,ಅವರಿಗೆ ಸ್ಕಾಲಶಿಪ್‍ನ ಅಗತ್ಯಗೆ ಬೀಳುವುದಿಲ್ಲ.ಹಾಗಾಗಿ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ಕೇಂದ್ರ ಸರಕಾರ ತಿಳಿಸಿದೆ.ಇದು ಆರ್.ಟಿ.ಇ ಕಾಯ್ದೆಯ ತಪ್ಪು ವ್ಯಾಖ್ಯಾನವಾಗಿದೆ.ಮೂಲಭೂತ ಹಕ್ಕಾದ ಆರ್.ಟಿ.ಇ ಕಾಯ್ದೆಯನ್ನು ಅನುμÁ್ಠನಗೊಳಿಸಲು ಸಹಕಾರಿಯಾಗುವ ಸ್ಟಾಲರ್‍ಶಿಪ್ ಅನ್ನು ಹೆಚ್ಚುವರಿ ಸಲವತ್ತು ಎಂಬಂತೆ ಬಿಂಬಿಸುವುದು ತಪ್ಪಾಗುತ್ತದೆ ಎಂದಿದ್ದಾರೆ.
ಮಕ್ಕಳ ಶಾಲಾ ದಾಖಲಾತಿಯನ್ನು ಖಚಿತಪಡಿಸುವುದು ಸರಕಾರದ ಜವಾಬ್ದಾರಿಯಾಗಿದೆ.ಕೇಂದ್ರದ ಈ ಸುತ್ತೋಲೆಯು ಸಂವಿಧಾನದ ಮೂಲಭೂತ ಹಕ್ಕಾದ ಶಿಕ್ಷಣದ ಹಕ್ಕನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ ಎಂದು ಬುರ್ಹಾನ್ ವುದ್ದೀನ್ ತಿಳಿಸಿದ್ದಾರೆ.
ರಾಜ್ಯ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಹಿನ್ನೆಲೆಯುಳ್ಳ ಮಕ್ಕಳು ಶಾಲೆಯಿಂದ ಹೊರಗುಳಿದ ಬಗ್ಗೆ ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ನೇಮಿಸಿದ್ದ ಸಮಿತಿಯು ಬಹಿರಂಗಪಡಿಸಿದ ವರದಿಯು ಅತ್ಯಂತ ಕಳವಳಕಾರಿ ಸಂಗತಿಯಾಗಿತ್ತು.ಆ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ಸಾಧ್ಯವಾಗುವ ಎಲ್ಲಾ ರೀತಿಯ ಸೌಲಭ್ಯ ಮತ್ತು
ಸೌಕರ್ಯಗಳನ್ನು ಒದಗಿಸಲು ಯೋಜನೆ ರೂಪಿಸಬೇಕಾದ ಹೊತ್ತಿನಲ್ಲಿ ಕೇಂದ್ರದ ಇಂತಹ ಶಿಕ್ಷಣ ವಿರೋಧಿ ನಡೆಯು ದೇಶದ ಸಾಕ್ಷರತಾ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎಂಬುದು ಆತ್ಯಂತ ಆಘಾತಕಾರಿ ಅಂಶವಾಗಿದೆ ಎಂದಿದ್ದಾರೆ.
ಗೌರವಾನ್ವಿತ ರಾಷ್ಟ್ರಪÀತಿಗಳು ಮದ್ಯ ಪ್ರವೇಶಿಸಿ, ಕೇಂದ್ರ ಸರಕಾರ ಈ ಹಿಂದಿನಂತೆ 1-08ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಸೂಚನೆ ನೀಡಬೇಕೆಂಬುದು ನಮ್ಮ ಒತ್ತಾಯಪೂರ್ವಕ ಮನವಿಯಾಗಿದೆ ಎಂದು ಎಂಐಎಂ ಜಿಲ್ಲಾಧ್ಯಕ್ಷ ಸೈಯದ್ ಬುರಾನ್‍ವುದ್ದೀನ್ ತಿಳಿಸಿದ್ದಾರೆ.
ಮನವಿ ಸಲ್ಲಿಸುವ ವೇಳೆ ಎಂಐಎಂ ಪಕ್ಷದ ಮುಖಂಡರಾದ ನವಾಜ್,ಅಮೀರ್,ಕೈಸರ್ ಮತ್ತಿತರಿದ್ದರು.

(Visited 1 times, 1 visits today)