ತುಮಕೂರು

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಗಾಜಿನ ಮನೆಯಲ್ಲಿ ಡಿಸೆಂಬರ್ 15 ಹಾಗೂ 16ರಂದು ನಡೆಯಲಿರುವ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಸಮ್ಮೇಳನದ ಕಾರ್ಯಾಧ್ಯಕ್ಷ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಾಹಿತ್ಯ ಮತ್ತು ಸಾಂಸ್ಕøತಿಕ ಜಾತ್ರೆಯಾದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸುವ ದೃಷ್ಟಿಯಿಂದ ಸಮ್ಮೇಳನದಲ್ಲಿ ಕನ್ನಡ ನಾಡು-ನುಡಿ ಕುರಿತು ಉತ್ತಮ ಕವಿಗೋಷ್ಠಿ, ಸಂವಾದ, ವಿಶೇಷ ಉಪನ್ಯಾಸ ಸೇರಿದಂತೆ ಜಿಲ್ಲೆಯ ಅಭಿವೃದ್ಧಿ ಆಯಾಮಗಳು, ಸಾಹಿತ್ಯ ಪರಂಪರೆ, ಸಾಂಸ್ಕøತಿಕ ಪರಂಪರೆ, ಜಾನಪದ ಕಲಾ ಪ್ರದರ್ಶನ, ಸಂಗೀತ ಕಾರ್ಯಕ್ರಮಗಳು, ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ಜರುಗುವ ಗಾಜಿನಮನೆ ಸೇರಿದಂತೆ ಸುತ್ತಮುತ್ತ ಸ್ವಚ್ಛಗೊಳಿಸಿ ಸಮ್ಮೇಳನಕ್ಕಾಗಮಿಸುವವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ವ್ಯವಸ್ಥೆ ಮಾಡಬೇಕೆಂದು ಪಾಲಿಕೆಗೆ ಸೂಚನೆ ನೀಡಿದರು. ವೇದಿಕೆ ಹಾಗೂ ಸಭಾಂಗಣವನ್ನು ಸಜ್ಜುಗೊಳಿಸುವ ಜವಾಬ್ದಾರಿಯನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮತ್ತು ಕರಪತ್ರ, ಪ್ರಶಸ್ತಿಪತ್ರ, ಆಹ್ವಾನಪತ್ರಿಕೆ, ನೆನಪಿನ ಕಾಣಿಕೆಗಳ ಜವಾಬ್ದಾರಿಯನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷರಿಗೆ ಹಾಗೂ ಕಲಾ ತಂಡಗಳಿಂದ ಕಲಾಪ್ರದರ್ಶನದ ವ್ಯವಸ್ಥೆಯ ಜವಾಬ್ದಾರಿಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ವಹಿಸಿದರು.
ಸಮ್ಮೇಳನದ ಪ್ರಯುಕ್ತ ಸ್ತ್ರೀಶಕ್ತಿ ಸಂಘ, ಸ್ವ-ಸಹಾಯ ಸಂಘಗಳಿಂದ ಕರಕುಶಲ ಪ್ರದರ್ಶನ ಮತ್ತು ಮಾರಾಟ ಹಾಗೂ ಆಹಾರ ಮೇಳ ಮಳಿಗೆ ತೆರೆಯಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರಿಗೆ ಸಮ್ಮೇಳನ ದಿನಗಳಂದು ದಾಸೋಹ ವ್ಯವಸ್ಥೆಯ ಜವಾಬ್ದಾರಿಯನ್ನು ಶಾಸಕ ಜಿ.ಬಿ. ಜ್ಯೋತಿಗಣೇಶ್ ವಹಿಸಿಕೊಂಡು ಮಾತನಾಡುತ್ತಾ ಸಮ್ಮೇಳನ ದಿನಗಳಂದು ನಗರವನ್ನು ಅಲಂಕರಿಸಬೇಕು. ಜಿಲ್ಲೆಯ ಸಾಹಿತ್ಯ ಮತ್ತು ಸಂಸ್ಕøತಿಯ ಮೌಲ್ಯಗಳ ಬಗ್ಗೆ ಮುಂದಿನ ಪೀಳಿಗೆಗೆ ಉತ್ತಮ ಸಂದೇಶ ನೀಡುವ ಸಮ್ಮೇಳನವಾಗಬೇಕೆಂದು ಆಶಿಸಿದರು.
ಈ ಸಂದರ್ಭದಲ್ಲಿ ಚಿತ್ರಕಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಂ. ರವೀಶ್ ಹಾಗೂ ಕಲಾವಿದ ಮನುಚಕ್ರವರ್ತಿ ಅವರು ವಿನ್ಯಾಸಗೊಳಿಸರುವ ಸಮ್ಮೇಳನದ ಲೋಗೋ(ಲಾಂಛನ) ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಟೂಡಾ ಅಧ್ಯಕ್ಷೆ ಹೆಚ್.ಜಿ. ಚಂದ್ರಶೇಖರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|| ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ವಿ. ಅಜಯ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್, ರಾಣಿ ಸತೀಶ್, ಮಲ್ಲಿಕಾರ್ಜುನ ಕೆಂಕೆರೆ, ಟೂಡಾ ಆಯುಕ್ತ ಗೋಪಾಲ್ ಜಾದವ್, ಪಾಲಿಕೆ ಉಪ ಆಯುಕ್ತ(ಆಡಳಿತ) ಗಿರೀಶ್, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

(Visited 1 times, 1 visits today)