ತುಮಕೂರು


ಕ್ಯಾಂಟರ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಗುಬ್ಬಿ ತಾಲ್ಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟವರನ್ನು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ನಡುವಿನಹಳ್ಳಿ ಗ್ರಾಮದ ನಾರಾಯಣಪ್ಪ (50), ಪತ್ನಿ ನಾಗರತ್ನ (45), ಮಗ ಸಾಗರ್ (21) ಮತ್ತು ಸಂಬಂಧಿ ರಾಮಣ್ಣ ಎಂದು ಗುರುತಿಸಲಾಗಿದೆ.
ಈ ನಾಲ್ಕು ಮಂದಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ನಡುವಿನಹಳ್ಳಿ ಗ್ರಾಮದಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ಗುಬ್ಬಿ ತಾಲ್ಲೂಕಿನ ಕೊಂಡ್ಲಿಕ್ರಾಸ್ ಬಳಿ ತುಮಕೂರಿನಿಂದ ಕೆ.ಬಿ.ಕ್ರಾಸ್ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ಲಾರಿ ಕಾರಿಗೆ ಮುಖಾಮುಖಿಯಾಗಿ ಅಪ್ಪಳಿಸಿದ್ದರಿಂದ ಮೂವರು ಸ್ಥಳದಲ್ಲೇ ಅಸುನೀಗಿದ್ದು, ನಾಗರತ್ನ ಅವರು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಗಾಯಾಳು ನಾಗರತ್ನ ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನೆಯ ಸುದ್ದಿ ತಿಳಿದ ಕೂಡಲೇ ಗುಬ್ಬಿ ಪೆÇಲೀಸರು ಸ್ಥಳಕ್ಕೆ ಧಾವಿಸಿ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದು ಆಸ್ಪತ್ರೆಗೆ ಸಾಗಿಸುವಲ್ಲಿ ಶ್ರಮಿಸಿದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗುಬ್ಬಿ ಪೆÇಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

(Visited 1 times, 1 visits today)