ಕೋವಿಡ್-19 : ಮಸೀದಿ, ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿಷೇಧ!!

ತುಮಕೂರು:

      ಕೊರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಲಾಕ್‍ಡೌನ್ ಆಗಿದ್ದು, ಮಸೀದಿ ಮತ್ತು ದರ್ಗಾಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಶಬ್-ಎ-ಬರಾತ್ ರಂದು ಸಾಮೂಹಿಕ ಪ್ರಾರ್ಥನೆ, ಖಬ್ರಸ್ಥಾನ್‍ಗಳಲ್ಲಿ ಪ್ರವೇಶವನ್ನು ನಿಷೇಧಿಸಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಆದೇಶ ಹೊರಡಿಸಿದೆ. ಅದೇ ರೀತಿ ಗುಂಪು ಗುಂಪು ಸೇರದಂತೆ ಮುಸ್ಲಿಂ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕೆಂದು ತಿಳಿಸಲಾಗಿದೆ.

      ಕೋವಿಡ್-19 ಹರಡದಂತೆ ತಡೆಗಟ್ಟಲು ಜಿಲ್ಲಾಡಳಿತದ ಜೊತೆ ಕೈಜೋಡಿಸಿ ಸಹಕರಿಸಬೇಕೆಂದು ತುಮಕೂರು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ವಕ್ಫ್ ಅಧಿಕಾರಿಗಳು ಜಿಲ್ಲೆಯ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.
ಯಾವುದೇ ಕಾರಣಕ್ಕೂ ಈ ಆದೇಶವನ್ನು ಉಲ್ಲಂಘಿಸದೆ ಕಟ್ಟುನಿಟ್ಟಿನಿಂದ ಪಾಲಿಸಬೇಕೆಂದು ಅವರು ಮನವರಿಕೆ ಮಾಡಿದ್ದಾರೆ.

(Visited 11 times, 1 visits today)

Related posts