ತುಮಕೂರು :128 ಮಂದಿಗೆ ಕೋವಿಡ್-19 ಸೋಂಕು ದೃಢ!!

ತುಮಕೂರು:

      ಜಿಲ್ಲೆಯಲ್ಲಿ 128 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2209 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 27, ಪಾವಗಡ-2 ಕುಣಿಗಲ್-28 ಮಧುಗಿರಿ-9, ಕೊರಗಟಗೆರೆ-25, ತುರುವೇಕೆರೆ-2, ಶಿರಾ-21, ತಿಪಟೂರು-1, ಗುಬ್ಬಿ-6, ಚಿಕ್ಕನಾಯಕನಹಳ್ಳಿ-7 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 128 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.

       ಜಿಲ್ಲಾಸ್ಪತ್ರೆಯಿಂದ 90 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1200 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 944 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 65 ಸಾವನ್ನಪ್ಪಿದ್ದು, ಬುಧವಾರ-02 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

(Visited 3 times, 1 visits today)

Related posts

Leave a Comment