ತುಮಕೂರು


ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮುತ್ತಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ರಾಜ್ಯದ 118ನೇ ಇಎಸ್‍ಐ ಚಿಕಿತ್ಸಾಲಯ ತೆರೆಯುವ ಮೂಲಕ ಕೈಗಾರಿಕೆಗಳ ಜೀವಾಳವಾಗಿರುವ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಇಲಾಖೆ ಮುಂದಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಮಿಕರ ವೈದ್ಯಕೀಯ ಇಲಾಖೆಯ ನಿರ್ದೇಶಕ ಡಾ.ಎನ್.ಜಿ.ರವಿಕುಮಾರ್ ತಿಳಿಸಿದ್ದಾರೆ.
ನಗರದ ವಸಂತನರಸಾಪುರ ಮೊದಲ ಹಂತದ ಕೈಗಾರಿಕಾ ಪ್ರದೇಶ ಸೈಟ್ ಸಂಖ್ಯೆ 230-231ರಲ್ಲಿ ಇಎಸ್‍ಐ ಚಿಕಿತ್ಸಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,ಸದರಿ ಆಸ್ಪತ್ರೆಯಲ್ಲಿ ಮೊದಲ ಹಂತದ ಚಿಕಿತ್ಸೆಗಳು ದೊರೆಯಲಿದ್ದು,ಅತ್ಯಂತ ಗಂಭೀರ ಪ್ರಕರಣಗಳು ಕಂಡು ಬಂದರೆ ಈಗಾಗಲೇ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಸಿದ್ದಾರ್ಥ,ಸಿದ್ದಗಂಗಾ ಮತ್ತು ಶ್ರೀದೇವಿ ಮೆಡಿಕಲ್ ಕಾಲೇಜುಗಳಿಗೆ ಹೆಚ್ಚಿನ ಚಕಿತ್ಸೆಗೆ ರೇಪರ್ ಮಾಡಲಾಗುವುದು ಎಂದರು.
ಈ ಹಿಂದೆ ಮಾತೃ, ಪಿತೃ, ಗುರುಗಳನ್ನು ದೈವ ಸಮಾನ ಎಂದು ಹೇಳಲಾಗುತ್ತಿತ್ತು. ಇಂದು ಅವರುಗಳ ಜೊತೆಗೆ ಅನ್ನ ನೀಡುವ ರೈತ,ವೈದ್ಯರು,ಗಡಿ ಕಾಯುವ ಯೋಧ ಹಾಗೆಯೇ, ತನ್ನ ಬೆವರಿನ ಮೂಲಕ ಕೈಗಾರಿಕೆಗಳಿಗೆ ಶಕ್ತಿ ತುಂಬ ಕಾರ್ಮಿಕರನ್ನು ಈ ಸಾಲಿನಲ್ಲಿ ಕಾಣಬೇಕಾಗಿದೆ.ಎಷ್ಟೇ ತಾಂತ್ರಿಕತೆ ಬೆಳೆದರೂ ಕಾರ್ಮಿಕನಿಲ್ಲದ ಕೈಗಾರಿಕೆಯನ್ನು ಊಹಿಸಲು ಸಾಧ್ಯವಿಲ್ಲ.ಹಾಗಾಗಿ ಕಾರ್ಮಿಕ ದೇವೋಭವ ಎನ್ನುವ ಕಾಲ ಇದಾಗಿದೆ.ವಸಂತನರಸಾಪುರ ಕರಾವೇ ಚಕಿತ್ಸಾಲಯದಲ್ಲಿ 21 ಸಾವಿರ ಕಾರ್ಮಿಕರಿಗೆ ಚಕಿತ್ಸೆ ದೊರೆಯಲಿದೆ ಎಂದು ರವಿಕುಮಾರ್ ತಿಳಿಸಿದರು.
ದೇಶದ ಜನರಿಗಾಗಿ ಕಷ್ಟ ದುಡಿಯುವ ಕಾರ್ಮಿಕನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಸರಕಾರ 1948ರಲ್ಲಿ ಕಾರ್ಮಿಕರ ವಿಮಾ ಕಾಯ್ದೆ ಜಾರಿಗೆ ತಂದಿತ್ತು.ಹಲವಾರು ಸೌಲಭ್ಯಗಳ ಜೊತೆಗೆ ವೈದ್ಯಕೀಯ ಸೌಲಭ್ಯ ಒದಗಿಸಿದೆ.1958ರಲ್ಲಿ ಪ್ರಥಮವಾಗಿ ರಾಜ್ಯದಲ್ಲಿ 12 ಇಎಸ್‍ಐ ಚಿಕಿತ್ಸಾಲಯಗಳನ್ನು ಆರಂಭಿಸಲಾಯಿತು.ಇಂದು ಕರ್ನಾಟಕದಲ್ಲಿ 113 ಇಎಸ್‍ಐ ಚಕಿತ್ಸಾಲಯ, 10 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ಹೊಸದಾಗಿ 19 ಹೊಸ ಚಿಕಿತ್ಸಾಲಯ ಪ್ರಾರಂಭಿಸಲು ನಿರ್ಧರಿಸಿದ್ದರು.ರಾಣಿಬೆನ್ನೂರು,ಶಿರಸಿ,ಮುದೋಳ, ಕೋಲಾರದಲ್ಲಿ ಈಗಾಗಲೇ ಹೊಸ ಚಿಕಿತ್ಸಾಲಯ ಆರಂಭಗೊಂಡಿದೆ.ಇದೇ ಕೈಗಾರಿಕಾ ಪ್ರದೇಶದ ಐದು ಎಕರೆ ಜಾಗದಲ್ಲಿ ಸುಮಾರು 100 ಬೆಡ್‍ಗಳ ಕಾರ್ಮಿಕ ವಿಮಾ ಆಸ್ಪತ್ರೆ ಮುಂದಿನ ಒಂದೆರಡು ವರ್ಷಗಳಲ್ಲಿ ಆರಂಭವಾಗಲಿದೆ ಎಂದು ಇಎಸ್‍ಐ ನಿರ್ದೇಶಕರು ಸ್ಪಷ್ಟಪಡಿಸಿದರು.
ಹಾಗಾಗಿ ಕಾರ್ಮಿಕರು ಈ ವಿಮಾ ಚಿಕಿತ್ಸಾಲಯದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ವಸಂತನರಸಾಪುರ ಕೈಗಾರಿಕೆಗಳ ಸಂಘದ ಅಧ್ಯಕ್ಷ ಜಿ.ವಿ.ರಾಮಮೂರ್ತಿ ಮಾತನಾಡಿ,ಕಾರ್ಮಿಕರೇ ಕೈಗಾರಿಕೆಗಳ ಬೆನ್ನೆಲುಬು. ಕೈಗಾರಿಕೆಗಳು,ಕಾರ್ಮಿಕರು ಮತ್ತು ಮಾಲೀಕರು ಈ ಮೂವರು ಒಂದನ್ನು ಬಿಟ್ಟು ಮತ್ತೊಂದನ್ನು ಊಹಿಸಲು ಸಾಧ್ಯವಿಲ್ಲ. ಸುಮಾರು 13 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ವಿಸ್ತರಿಸಿಕೊಂಡಿರುವ ಈ ಕೈಗಾರಿಕಾ ಪ್ರದೇಶದಲ್ಲಿ ಪ್ರಸ್ತುತ 15ಸಾವಿರಕ್ಕೂ ಅಧಿಕ ಕಾರ್ಮಿಕರು ಕೆಲಸ ಮಾಡುತ್ತಿದ್ದು,ಇವರಿಗೆ ವೈದ್ಯಕೀಯ ಸೌಲಬ್ಯ ಒದಿಗಿಸುವ ನಿಟ್ಟಿನಲ್ಲಿ ಈ ಹಿಂದೆಯೇ ಮನವಿ ಸಲ್ಲಿಸಲಾಗಿತ್ತು. ಇದರ ಭಾಗವಾಗಿ ಸರಕಾರ ಇಂದು ಇಎಸ್‍ಐ ಚಿಕಿತ್ಸಾಲಯ ತೆರೆದಿದೆ.ಇದರ ಸದುಪಯೋಗವನ್ನು ಎಲ್ಲ ಕಾರ್ಮಿಕರು ಪಡೆದುಕೊಳ್ಳಬೇಕು,ಹಾಗೆಯೇ ಇಲ್ಲಿನ ವೈದ್ಯಕೀಯ ಸಿಬ್ಬಂದಿ ಸಕಾಲದಲ್ಲಿ ಅಗತ್ಯ ಇರುವ ಚಿಕಿತ್ಸೆ ನೀಡಿ,ಕಾರ್ಮಿಕರಿಗೆ ನೆರವಾಗುವಂತೆ ಮನವಿ ಮಾಡಿದರು.
ವಸಂತನರಸಾಪುರ ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಹರೀಶ್ ಮಾತನಾಡಿ ದರು.
ಕಾರ್ಯಕ್ರಮದಲ್ಲಿ ಕೆಐಎಡಿಬಿ ಎಇಇ ಟಿ.ಎಸ್.ಲಕ್ಷ್ಮೀಶ್,ವಸಂತನರಸಾಪುರ ಕೈಗಾರಿಕಾ ಸಂಘಗಳ ಅಧ್ಯಕ್ಷ ಜಿ.ವಿ.ರಾಮಮೂರ್ತಿ, ಕಾರ್ಯದರ್ಶಿ ಡಾ.ಸಿ.ವಿ.ಹರೀಶ್, ಜಂಟಿ ಕಾರ್ಯದರ್ಶಿ ಸತ್ಯನಾರಾಯಣ್,ಖಜಾಂಚಿ ಬಾಬುಲಾಲ್ ಜೈನ್,ಮಾನವ ಸಂಪನ್ಮೂಲ ಅಧಿಕಾರಿ ಮಹೇಶ್,ಹೆಚ್, ತುಮಕೂರು ಇಎಸ್‍ಐ ವೈದ್ಯರಾದ ಡಾ.ಆನಂದ್ ಮತ್ತಿತರರು ಉಪಸ್ಥಿತರಿದ್ದರು.

 

(Visited 1 times, 1 visits today)