ತುಮಕೂರು


ಬೆಂಗಳೂರಿನಲ್ಲಿ ಜನವರಿ 16 ರಂದು ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕ ಆಯೋಜಿಸಿರುವ “ನಾನು ನಾಯಕಿ” ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕಗಳ ಸಕ್ರಿಯ ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರಾಜಣ್ಣ ಮನವಿ ಮಾಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ನಾನು ನಾಯಕಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚಿನ ಅದ್ಯತೆ ನೀಡಿರುವುದನ್ನು ನಾವು ಕಾಣಬಹುದಾಗಿದೆ.ಉಕ್ಕಿನ ಮಹಿಳೆ ಎಂದು ಕರೆಯಿಸಿಕೊಂಡಿರುವ ತನ್ನ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹೆಸರು ಕೇಳಿದರೆ ಇಂದಿಗೂ ಮೈ ನವಿರೇಳುತ್ತದೆ.ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಮಹಿಳೆಯರನ್ನು ಸಂಘಟಿಸುವ ನಿಟ್ಟಿನಲ್ಲಿ ಅವರ ಅಭಿಪ್ರಾಯಗಳಿಗೆ ಮನ್ನಣೆ ನೀಡುವ ನಿಟ್ಟಿನಲ್ಲಿ ಜನವರಿ 16ರ ಸೋಮವಾರ ನಾನು ನಾಯಕಿ ಕಾರ್ಯಕ್ರಮ ಆಯೋಜಿಸಿದ್ದು,ಇದರಲ್ಲಿ ಎಐಸಿಸಿಯ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಗಾಂಧಿ ಅವರು ಪಾಲ್ಗೊಳ್ಳ ಲಿದ್ದು,ಸಕ್ರಿಯ ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ, ತಾಲೂಕು ಘಟಕಗಳ ಮಹಿಳಾ ಕಾರ್ಯಕರ್ತರು ಶ್ರಮಿಸಬೇಕೆಂದರು.
ರಾಜ್ಯ ಮತ್ತು ರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳಿಂತ ದೇಶದ ಎಲ್ಲಾ ರಂಗಗಳಲ್ಲಿಯೂ ದುಡಿದು ಸೈ ಎನಿಸಿಕೊಂಡ ಮಹಿಳೆಯರು ಅಡುಗೆ ಮನೆಯನ್ನು ನಿಭಾಯಿಸಲಾಗದೆ ಕಂಗಾಲಾಗಿದ್ದಾರೆ. ಅಡುಗೆ ಎಣ್ಣೆ, ಅಡುಗೆ ಅನಿಲ್ ಬೆಲೆ ಹೆಚ್ಚಳ,ದಿನಸಿ ಪದಾರ್ಥಗಳ ಬೆಲೆ ಹೆಚ್ಚಳ ಸೇರಿದಂತೆ ಅಗತ್ಯವಸ್ತುಗಳ ಬೆಲೆಗಳಿಂದ ಮಹಿಳೆಯರು ತತ್ತರಿಸಿ ಹೊಗಿದ್ದಾರೆ.ತನ್ನ ಮಕ್ಕಳು,ಗಂಡನಿಗೆ ರುಚಿಕರ ಮತ್ತು ಪೌಷ್ಠಿಕ ಆಹಾರ ಮಾಡಿ ಬಡಿಸಬೇಕೆಂದರೂ ದುಡಿದ ಹಣ ಸಾಕಾಗುತ್ತಿಲ್ಲ. ಜನ ಸಾಮಾನ್ಯರು ದಿನದಿಕ್ಕೆ ಸಾಲದ ಶೂಲಕ್ಕೆ ಸಿಲುಕಿ ನೆಮ್ಮದಿಯ ಜೀವನ ಕಳೆದುಕೊಳ್ಳುತ್ತಿದ್ದಾರೆ.ಆದರೆ ಮೋದಿ ಅಪ್ತರಾಗಿರುವ ಉದ್ಯಮಿಗಳ ಸಂಪತ್ತು ಮಾತ್ರ ಎಗ್ಗಿಲ್ಲದೆ ಹೇರುತ್ತಿದೆ.ಇವುಗಳಿಗೆ ಕಾರಣ ಎನು ಎಂಬುದನ್ನು ಮಹಿಳೆಯರು ಅರಿಯಬೇಕಾಗಿದೆ. ಈ ನಿಟ್ಟಿನಲ್ಲಿ ಮಹಿಳಾ ಕಾಂಗ್ರೆಸ್ ಆಯೋಜಿಸಿರುವ ಈ ನಾನು ನಾಯಕಿ ಕಾರ್ಯಕ್ರಮ ದಾರಿದೀಪವಾಗಲಿದೆ ಎಂದು ಶ್ರೀಮತಿ ಗೀತಾರಾಜಣ್ಣ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ,ದೀಪ ಬೆಳಗಿಸಿ ಸಭೆಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ,ನಾನು ನಾಯಕಿ ಎಂಬುದು ಪ್ರತಿಯೊಬ್ಬ ಮಹಿಳೆಯೂ ಗರ್ವ ಪಡುವಂತಹ ಕಾರ್ಯಕ್ರಮವಾಗಿದೆ.ಈಗಾಗಲೇ ಕಾಂಗ್ರೆಸ್ ಪಕ್ಷದ ಮಹಿಳಾ ಶಕ್ತಿ ಏನು ಎಂಬುದನ್ನು ಇಂದಿರಾಗಾಂಧಿಯವರ ಮೂಲಕ ಜಗತ್ತಿಗೆ ತೋರಿಸಿಕೊಟ್ಟಿದೆ.ಹಾಗಾಗಿಯೇ ಅವರ ಮೊಮ್ಮಗಳಾದ ಪ್ರಿಯಾಂಕಗಾಂಧಿ ಅವರನ್ನು ಈ ಕಾರ್ಯಕ್ರಮಕ್ಕೆ ಕರೆಯಿಸಿ, ಮತ್ತೊಮ್ಮೆ ಮಹಿಳಾ ಕಾರ್ಯಕರ್ತರಲ್ಲಿ ಶಕ್ತಿ ತುಂಬುವ ಕೆಲಸವನ್ನು ಕೆಪಿಸಿಸಿ ಮಾಡುತ್ತಿದೆ.
ತಾವೆಲ್ಲರೂ ಸಕ್ರಿಯವಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಆರ್.ರಾಮಕೃಷ್ಣ,ಕೆಪಿಸಿಸಿ ವೈದ್ಯರ ಘಟಕದ ಡಾ.ಫರ್ಹಾನ, ರೈತ ಘಟಕದ ಜಿ.ಆರ್.ಗೌಡ,ಎಸ್ಸಿ ಘಟಕದ ಬಿ.ಜಿ.ಲಿಂಗರಾಜು,ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಜಾತ,ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಸುವರ್ಣಮ್ಮ,ಸುವರ್ಣ ಮತ್ತಿತರರು,ಮರಿಚನ್ನಮ್ಮ ಮತ್ತಿತರರು ಉಪಸ್ಥಿತರಿದ್ದರು.

(Visited 2 times, 1 visits today)