ತುಮಕೂರು


ಬಿಜೆಪಿಯ ತುಮಕೂರು ಜಿಲ್ಲಾ ಒಬಿಸಿ ಮೋರ್ಚಾದ ಸಮಾವೇಶ ಗುಬ್ಬಿಯ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಮಾರ್ಚ್ 07ರ ಮಂಗಳವಾರ ನಡೆಯಲಿದೆ. ಈ ಸಮಾವೇಶಕ್ಕೆ ತುಮಕೂರು ಸಂಘಟನಾತ್ಮಕ ಜಿಲ್ಲೆಯ ಸುಮಾರು 25000 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದ ಅಧ್ಯಕ್ಷ ಆಯರಹಳ್ಳಿ ಶಂಕರಪ್ಪ ತಿಳಿಸಿದರು.
ಇವರು ತುಮಕೂರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಯೋಜಿಸಿದ ಜಿಲ್ಲಾ ಒಬಿಸಿ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳ ಸಮಾವೇಶದ ಪೂರ್ವಬಾವಿ ಸಭೆಯಲ್ಲಿ ಮಾತನಾಡುತ್ತಾ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಡಬ್ಬಲ್ ಇಂಜಿನ್ ಸರ್ಕಾರಗಳು ಹಿಂದುಳಿದ ವರ್ಗದ ಜನಾಂಗದ ಶ್ರೇಯಾಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ನೀಡಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಆದ್ಯ ಗಮನ ನೀಡಿದೆ. ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮಗಳ ಮೂಲಕ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಭಾರೀ ಕೊಡುಗೆ ನೀಡಿರುವ ಡಬ್ಬಲ್ ಇಂಜಿನ್ ಸರ್ಕಾರಗಳಿಗೆ ಅಭಿನಂದಿಸಲು ಮತ್ತು ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳ ಮತದಾರರು ಮತದಾನ ಮಾಡಲು ಪ್ರೇರೇಪಿಸಲು ಬೃಹತ್ ಸಮಾವೇಶವನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರವರ ನೇತೃತ್ವದಲ್ಲಿ ಆಯೋಜಿಸಲಾಗಿದೆ ಎಂದರು.
ಈ ಬೃಹತ್ ಕಾರ್ಯಕ್ರಮ ಮಾರ್ಚ್ 07ರ ಬೆಳಿಗ್ಗೆ 10.00 ಗಂಟೆಗೆ ಗುಬ್ಬಿ ಶ್ರೀ ಚನ್ನಬಸವೇಶ್ವರ ದೇವಾಲಯದಿಂದ ಸರ್ಕಾರಿ ಪ್ರೌಢಶಾಲೆ ಮೈದಾನದವರೆಗೆ ಬೈಕ್‍ರ್ಯಾಲಿಯೂ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಹಾಗೂ ಹಿಂದುಳಿದ ವರ್ಗಗಳ ನೇತಾರ ಎಂ.ಡಿ.ಲಕ್ಷ್ಮೀನಾರಾಯಣ್‍ರವರು ಮಾತನಾಡಿ, ಹಿಂದುಳಿದ ವರ್ಗಗಳ ಸಮಾಜಕ್ಕೆ ಕೇಂದ್ರದ ನರೇಂದ್ರಮೋದಿ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಮಹತ್ತರ ಯೋಜನೆಗಳ ಮೂಲಕ ಮಹತ್ತರ ಯೋಜನೆಗಳನ್ನು ನೀಡಿ ಸ್ಪಂದಿಸಿದ್ದಾರೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕರವರು ಮಾತನಾಡುತ್ತಾ, ಬಿಜೆಪಿ ಡಬ್ಬಲ್ ಇಂಜಿನ್ ಸರ್ಕಾರಗಳು ಹಿಂದುಳಿದ ಸಮುದಾಯಗಳಿಗೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿವೆ. ಈ ಕುರಿತು ಈಗಾಗಲೇ ಕರಪತ್ರಗಳನ್ನು ಮನೆ-ಮನೆಗೆ ತಲುಪಿಸಿದ್ದೇವೆ. ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಹಿಂದುಳಿದ ಸಮಾಜ ಬಂಧುಗಳು ಭಾಗವಹಿಸಿ ಯಶಸ್ವಿಗೊಳಿಸಲು ವಿನಂತಿಸಿದರು.
ಸಮಾರಂಭದ ವೇದಿಕೆಯಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಹಾಗೂ ತುಮಕೂರು ಜಿಲ್ಲಾ ಪ್ರಭಾರಿ ಪ್ರೇಮನಾಗಯ್ಯ, ರಾಜ್ಯ ಕಾರ್ಯಕಾರಿಣಿ ಸದಸ್ಯ ಎಂ.ವೈ.ರುದ್ರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಟಿ.ಭೈರಪ್ಪ, ಕಾರ್ಯದರ್ಶಿ ಸಂದೀಪ್ ಗೌಡ, ಗುಬ್ಬಿ ಮಂಡಲ ಅಧ್ಯಕ್ಷ ಬಿ.ಎಸ್.ಪಂಚಾಕ್ಷರಿ, ಪ್ರಮುಖರಾದ ಬೆಟ್ಟಸ್ವಾಮಿ, ಸಾಗರನಹಳ್ಳಿ ನಂಜೇಗೌಡ, ಪ್ರಕಾಶ್, ದಿಲೀಪ್ ಕುಮಾರ್, ಚಂದ್ರಶೇಖರ್ ಬಾಬು (ಗ್ರಾಸ್) ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಕಾರ್ಯದರ್ಶಿ ಹಾಗೂ ತುಮಕೂರು ಮಹಾನಗರಪಾÀಲಿಕೆ ಪ್ರತಿಪಕ್ಷದ ನಾಯಕ ವಿಷ್ಣುವಧರ್Àನ್ ಸ್ವಾಗತಿಸಿದರೆ, ಜಿಲ್ಲಾ ಒಬಿಸಿ ಪ್ರಧಾನ ಕಾರ್ಯದರ್ಶಿ ಕೆ.ವೇದಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ಹಾಗೂ ಒಬಿಸಿ ಮೋರ್ಚಾ ಜಿಲ್ಲಾ ಉಸ್ತುವಾರಿ ಅ.ನ.ಲಿಂಗಪ್ಪ ವಂದಿಸಿದರು.

(Visited 1 times, 1 visits today)