ತುಮಕೂರು


ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಡಾ. ಶ್ರೀಶ್ರೀಶ್ರೀ ಶಿವಕುಮಾರಸ್ವಾಮಿಜಿಯವರ 116ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವ ಕಾರ್ಯಕ್ರಮವನ್ನು ಸಿದ್ದಗಂಗಾ ಮಠ ಆವರಣದಲ್ಲಿ ಏಪ್ರಿಲ್ 1ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಮಠದ ಆಡಳಿತಾಧಿಕಾರಿ ಎಸ್. ವಿಶ್ವನಾಥಯ್ಯ ಅವರು ತಿಳಿಸಿದ್ದಾರೆ.
ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ.ಮ.ನಿ.ಪ್ರ.ಸ್ವ. ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗಸ್ವಾಮಿ, ಶ್ರೀ ಸುತ್ತೂರು ಮಠದ ವೀರಸಿಂಹಾಸನ ಮಠದ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಕೆರೆಗೋಡಿ ರಂಗಾಪುರ ಮಠ ಅಧ್ಯಕ್ಷರಾದ ಶ್ರೀ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮಿಗಳು ಹಾಗೂ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ನೆರವೇರಿಸುವವರು.
ಸಂಜೆ 5 ಗಂಟೆಗೆ ಶ್ರೀ ಶಿವಕುಮಾರಸ್ವಾಮೀಜಿ ಗಾನೋತ್ಸವವನ್ನು ನಾದಬ್ರಹ್ಮ ಹಂಸಲೇಖ ನೇತೃತ್ವದಲ್ಲಿ ನೃತ್ಯ ಮತ್ತು ಸಂಗೀತ ಸಂಜೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

(Visited 1 times, 1 visits today)