ಕಲ್ಲುಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಘಟಕಗಳಲ್ಲಿ ಉಪಖನಿಜಗಳ ಉತ್ಪಾದನೆ ಮತ್ತು ಸಾಗಾಣಿಕೆಗೆ ಅನುಮತಿ

ತುಮಕೂರು :

      ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ತುಮಕೂರು ಜಿಲ್ಲೆಯಲ್ಲಿ ಕಲ್ಲುಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಘಟಕಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

      ಜಿಲ್ಲೆಯಲ್ಲಿನ ಕಂಟೈನ್ಮೆಂಟ್ ವಲಯದಿಂದ ಹೊರಗಡೆ ಇರುವ ಪ್ರದೇಶಗಳಲ್ಲಿನ ಪರವಾನಗಿ ಹೊಂದಿರುವ ಕಲ್ಲುಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಘಟಕಗಳಲ್ಲಿ ಉಪಖನಿಜಗಳ ಉತ್ಪಾದನೆ ಮತ್ತು ಸಾಗಾಣಿಕೆ ಕಾರ್ಯವನ್ನು ಸರ್ಕಾರದ ಆದೇಶದಂತೆ ಕೋವಿಡ್-19 ನಿಯಂತ್ರಣ ಮುಂಜಾಗ್ರತ ಕ್ರಮಗಳನ್ನು ಪಾಲಿಸುವ ಷರತ್ತಿಗೊಳಪಟ್ಟು ಪುನಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಆದೇಶಿಸಿದ್ದಾರೆ.

(Visited 13 times, 1 visits today)

Related posts

Leave a Comment