ತಮಕೂರು


ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ತಮಕೂರಿಗೆ ಆಗಮಿಸಿದ್ದು. ವಿವಿ ಹೆಲಿಪ್ಯಾಡ್‍ನಿಂದ ಸಮಾವೇಶಕ್ಕೆ ತೆರಳುವ ದಾರಿಯುದ್ದಕ್ಕೂ ಮೋದಿ ರೋಡ್ ಶೋ ನಡೆಸಿದರು. ಅಪಾರ ಸಂಖ್ಯೆಯಲ್ಲಿ ಜನ ಸಾಗರವೇ ಸೇರಿದ್ದು, ಹೋವಿನ ಮಳೆ ಸುರಿಸಿದರು. ನಗರದ ತುಂಬೆಲ್ಲಾ ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದವು. ಇಕ್ಕೆಲಗಳಲ್ಲಿ ನಿಂತ ಜನರು ಮೋದಿಯತ್ತಾ ಕೈಬಿಸಿ ಜೈ ಮೋದಿ ಎಂದು ಘೋಷಣೆಗಳನ್ನು ಕೂಗಿದರು.
ಐಎಎಫ್‍ನ ಒI-17 ಹೆಲಿಕಾಪ್ಟರ್‍ನಲ್ಲಿ ಆಗಮಿಸಿದ ಪ್ರಧಾನಿಯನ್ನು ಬಿಜೆಪಿ ಮುಖಂಡರು ಸ್ವಾಗತಿಸಿದರು. ತುಮಕೂರಿನ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡರು. ವೇದಿಕೆ ಮೇಲೆ ಮೋದಿಯವರಿಗೆ ಸುರೇಶ್‍ಗೌಡರು ಹಾರ, ಮಾಧುಸ್ವಾಮಿಯವರು ಶಾಲು, ರವಿಶಂಕರ್ ಹೆಬ್ಬಾಕರವರು ಕೃಷ್ಣಾರ್ಜುನ ಫೋಟೊ ನೀಡುವುದರ ಮೂಲಕ ಇನ್ನು ಹಲವಾರು ಬಿಜೆಪಿ ಮುಖಂಡರು ಅದ್ಧೂರಿಯಾಗಿ ಸ್ವಾಗತ ಕೋರಿದರು.
ಕಲ್ಪತರು ನಾಡಿಗೆ ಕನ್ನಡದಲ್ಲೇ ನಮಸ್ಕರಿಸಿದ ಮೋದಿ, ಸಿದ್ಧಗಂಗಾ ಮಠ, ಆದಿಚುಂಚನಗಿರಿ ಮಠದ ಶ್ರೀಗಳನ್ನು ಸ್ಮರಿಸಿದರು. ಸಾಧುಸಂತರ ಹಾಗೂ ಜನರ ಆಶೀರ್ವಾದದಿಂದ ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದರು. ರೋಡ್ ಶೋ ಹಾಗೂ ಸಮಾವೇಶದಲ್ಲಿ ಸೇರಿದ ಜನಸಂಖ್ಯೆ ನೋಡಿದಾಗಲೇ ಬಿಜೆಪಿ ಸರ್ಕಾರ ಖಚಿತ ಎಂಬುದನ್ನು ತೋರಿಸತ್ತದೆ ಎಂದರು.
ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಕಾಂಗ್ರೆಸ್ ತುಷ್ಟೀಕರಣದ ಗುಲಾಮ ಆಗಿ ಪರಿವರ್ತನೆಗೊಂಡಿದೆ ಎಂದರು. ಕರ್ನಾಟಕವನ್ನು ಜೆಡಿಎಸ್, ಕಾಂಗ್ರೆಸ್ ಯಾವುದೇ ಅಭಿವೃದ್ಧಿ ಮಾಡಿಲ್ಲ. ಬಿಜೆಪಿಯಿಂದ ಮಾತ್ರ ಕರ್ನಾಟಕ ಜೊತೆ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ಪವಿತ್ರ ಭೂಮಿ ಸಿದ್ಧಗಂಗಾ ಶ್ರೀಗಳ ಸಾನಿಧ್ಯಕ್ಕೆ ಬಂದಿದ್ದೇನೆ ಎಂದು ಹೇಳಿದ ಮೋದಿ, ಬಿಜೆಪಿ ಅನ್ನ, ಅಕ್ಷರ, ಆದಾಯ 7 ಅಭಿವೃದ್ಧಿಯ ಸಂಕಲ್ಪ ಹೊಂದಿದೆ ಎಂದರು. ತುಮಕೂರಿನಲ್ಲಿ ಅನೇಕ ಯೋಜನೆಗಳ ಶಿಲಾನ್ಯಾಸ, ಉದ್ಘಾಟನೆ, ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಬಿಜೆಪಿ ಅಭಿವೃದ್ಧಿ ಕಾರ್ಯಗಳಿಗೆ ವೇಗದ ಗತಿ ನೀಡಿದೆ ಎಂದರು.
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ದೇಶದ ಕೋಟ್ಯಂತರ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಲಾಗುತ್ತಿದೆ. ಕೇಂದ್ರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಹಣ ಹಾಕಿದ್ದೇವೆ. ಯಾವುದೇ ಹಣ ಸೋರಿಕೆಯಾಗದೇ ಫಲಾನುಭವಿಗಳಿಗೆ ತಲುಪಿಸಿದ್ದೇವೆ. ತುಮಕೂರು ಜಿಲ್ಲೆಯ 3 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ಹಣ ಜಮೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ದೇಶದಲ್ಲಿ ಬಡವರಿಗೆ ಮನೆಗಳನ್ನು ನಿರ್ಮಾಣ ಮಾಡಿಕೊಟ್ಟಿದ್ದೇವೆ, ಮಹಿಳೆಯರ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರ ಹಲವು ಯೋಜನೆ ತಂದಿದೆ ಎಂದು ಪ್ರಧಾನಿ ಮೋದಿ ತುಮಕೂರಿನಲ್ಲಿ ಹೇಳಿದರು. 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ವೇಗ ಹೆಚ್ಚಿದೆ ಎಂದು ಹೇಳಿದ ಮೋದಿ, 3 ಕೋಟಿಗೂ ಹೆಚ್ಚು ಮನೆಗಳು ಮಹಿಳೆಯರ ಹೆಸರಿನಲ್ಲಿವೆ. ದೇಶದ 18,000 ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದೇವೆ, ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆ ಮೂಲಕ ರಸ್ತೆ ಅಭಿವೃದ್ಧಿ ಮಾಡತ್ತಿದ್ದೇವೆ, ತುಮಕೂರು ಜಿಲ್ಲೆಯ 1.5 ಲಕ್ಷ ಕುಟುಂಬಗಳಿಗೆ ನಲ್ಲಿ ನೀರು ಕಲ್ಪಿಸಿದ್ದೇವೆ ಎಂದರು.
ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಅನೇಕ ಯೋಜನೆ ಜಾರಿಗೆ ತಂದಿದೆ ಎಂದು ಹೇಳಿದ ಮೋದಿ, ಭದ್ರಾ ಮೇಲ್ದಂಡೆ ಯೋಜನೆಯನ್ನು ಕಾಂಗ್ರೆಸ್, ಜೆಡಿಎಸ್ ಗಂಭೀರವಾಗಿ ಪರಿಗಣಿಸಿಲ್ಲ.
ಆದರೆ ನಾವು 5 ಸಾವಿರ ಕೋಟಿಗೂ ಹೆಚ್ಚು ಅನುದಾನ ಮೀಸಲಿಟ್ಟಿದ್ದೇವೆ ಎಂದರು. ಕೇಂದ್ರದ ಬಿಜೆಪಿ ಸರ್ಕಾರವು ಕರ್ನಾಟಕದ ಕೆ.ಕಸ್ತೂರಿ ರಂಗನ್ ನೇತೃತ್ವದಲ್ಲಿ ಆಧುನಿಕ ಶಿಕ್ಷಣ ನೀತಿ ಜಾರಿಗೊಳಿಸಿದೆ. ಆ ಮೂಲಕ ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವ ಅವಕಾಶ ಮಾಡಿಕೊಡಲಾಗಿದೆ. ದೇಶದ ರೈತರ ಮಕ್ಕಳು ಕೂಡ ವೈದ್ಯ, ಇಂಜಿನಿಯರ್ ಆಗಬೇಕು. ಆದರೆ ಕಾಂಗ್ರೆಸ್ ನಾಯಕರು ತಾವು ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತೆಗೆದುಹಾಕುವುದಾಗಿ ಹೇಳುತ್ತಿದ್ದಾರೆ ಎಂದು ಟೀಕಿಸಿದರು.
ಬಡವರ ಮಕ್ಕಳು ಉದ್ದಾರವಾಗಬೇಕು ಎಂಬುವುದು ನಮ್ಮ ಉದ್ದೇಶವಾಗಿದೆ. ಆದರೆ ಕಾಂಗ್ರೆಸ್?ನವರು ಬಡವರ ಮಕ್ಕಳ ಉದ್ಧಾರವನ್ನು ಸಹಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಕರ್ನಾಟಕದ ಯುವಕರ ಭವಿಷ್ಯಕ್ಕೆ ತಡೆಯುತ್ತಿವೆ. ಕರ್ನಾಟಕದ ಯುವಕರ ಭವಿಷ್ಯದ ಬಗ್ಗೆ ಅವರಿಗೆ ದೂರದೃಷ್ಟಿ ಇಲ್ಲ. ಕಾಂಗ್ರೆಸ್ 85% ಕಮಿಷನ್ ಪಡೆದು ದೇಶವನ್ನು ಹಾಳು ಮಾಡಿದೆ ಎಂದರು.
ಕಾಂಗ್ರೆಸ್ ಅವಧಿಯಲ್ಲಿ ಹೆಚ್‍ಎಎಲ್ ಸಂಪೂರ್ಣ ನಷ್ಟದಲ್ಲಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಆಧುನಿಕ ಶಸ್ತ್ರಾಸ್ತ್ರ ತಯಾರಿ ಮಾಡಲಾಗತ್ತಿದೆ. ಆ ಮೂಲಕ ದೇಶದ ನಮ್ಮ ಸೇನೆಯನ್ನು ಸಂಪೂರ್ಣವಾಗಿ ಬಲಪಡಿಸಿದ್ದೇವೆ ಎಂದು ಮೋದಿ ಹೇಳಿದರು. ಮೂಲಸೌಕರ್ಯ ಅಭಿವೃದ್ಧಿಗೊಳಿಸದಿದರೆ ರೈತರ ಅಭಿವೃದ್ಧಿಯಾಗಲ್ಲ. ಈ ದೃಷ್ಟಿಯಿಂದ ಮೂಲಸೌಕರ್ಯ ಕ್ಷೇತ್ರವನ್ನು ಅಭಿವೃದ್ಧಿಗೊಳಿ ಸಿದ್ದೇವೆ ಎಂದರು.

(Visited 2 times, 1 visits today)