ತುಮಕೂರು :

ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ತಿಮ್ಮನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರರಿಗೆ ಇಂದು ಆರೋಗ್ಯ ಅಮೃತ ಅಭಿಯಾನ ಯೋಜನೆಯಡಿ ಗ್ರಾಮ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಲಾಗಿತ್ತು.

ತಾಲ್ಲೂಕು ಐಇಸಿ ಸಂಯೋಜಕರಾದ ರಮ್ಯ ಮಾತನಾಡಿ, ನರೇಗಾ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡುವುದಲ್ಲದೇ, ಅವರ ಆರೋಗ್ಯವನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ಹಾಗಾಗಿ ತಾಲ್ಲೂಕಿನ ಎಲ್ಲಾ ಗ್ರಾ.ಪಂ ವ್ಯಾಪ್ತಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡು ತಪಾಸಣೆಯನ್ನು ಮಾಡಲಾಗುತ್ತಿದೆ. ಪ್ರತಿಯೊಬ್ಬ ಕೂಲಿಕಾರರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಆರೋಗ್ಯದ ಬಗ್ಗೆ ಅರಿವು ಮೂಡಿಸಿದರು.

ಜೊತೆಗೆ ನರೇಗಾ ಯೋಜನೆಯಡಿ ಈ ವರ್ಷ ಕೂಲಿ ಹಣವನ್ನು ಹೆಚ್ಚಿಸಲಾಗಿದೆ. ತಾಂತ್ರಿಕ ಸಹಾಯಕರು ನಿಮಗೆ ನೀಡಿದ ಆಳತೆಗನುಸಾರವಾಗಿ ನೀವು ಕೆಲಸ ಮಾಡಿದಾಗ ನಿಮಗೆ ಪೂರ್ತಿ ಕೂಲಿ ಹಣ ದೊರೆಯಲಿದೆ. ಕಡ್ಡಾಯವಾಗಿ ಎಲ್ಲರೂ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಲು ತಿಳಿಸಿದರು.

ನಂತರ ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೂಲಿಕಾರರ ಆರೋಗ್ಯ ತಪಾಸಣೆಯನ್ನು ಮಾಡಿದರು. ಈ ವೇಳೆ ಬಿಪಿ, ಶುಗರ್‌ ಸೇರಿದಂತೆ ಕೆಮ್ಮು, ನೆಗಡಿ, ಜ್ವರ ಸೇರಿದಂತೆ ಹಲವು ಕಾಯಿಲೆಗಳ ತಪಾಸಣೆ ನಡೆಸಿ, ಮಾತ್ರೆಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಏಊPಖಿ ತಾಲ್ಲೂಕು ಸಂಯೋಜಕರು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸೇರಿದಂತೆ ಕೂಲಿಕಾರರು ಹಾಜರಿದ್ದರು.

(Visited 34 times, 1 visits today)