BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
  • ಕುಡಿಯುವ ನೀರಿನ ಅಸಮರ್ಪಕ ಸರಬರಾಜು
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಕ್ಕಳಿಗೆ ವಾರಕ್ಕೆ ೩ ಮೊಟ್ಟೆಗಳನ್ನು ನೀಡಬೇಕು
ಇತರೆ ಸುದ್ಧಿಗಳು

ಮಕ್ಕಳಿಗೆ ವಾರಕ್ಕೆ ೩ ಮೊಟ್ಟೆಗಳನ್ನು ನೀಡಬೇಕು

By News Desk BenkiyabaleUpdated:June 24, 2023 5:03 pm

ತುಮಕೂರು


ರಾಜ್ಯ ಸರ್ಕಾರ ಈಗ ಸರ್ಕಾರಿ ಶಾಲೆಯ ೮ನೇ ತರಗತಿ ಮಕ್ಕಳಿಗೆ ನೀಡುತ್ತಿರುವ ವಾರಕ್ಕೆ ೧ ಮೊಟ್ಟೆ ಮಾತ್ರ ನೀಡುತ್ತಿದ್ದು, ಇದನ್ನು ಹೆಚ್ಚಿಸುವ ಮೂಲಕ ಕನಿಷ್ಠ ವಾರಕ್ಕೆ ಮಕ್ಕಳಿಗೆ ೩ ಮೊಟ್ಟೆಗಳನ್ನು ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಒತ್ತಾಯಿಸಿದರು.
ಪ್ರಸ್ತುತ ೮ನೇ ತರಗತಿ ಮಕ್ಕಳಿಗೆ ಮಾತ್ರ ಮೊಟ್ಟೆ ನೀಡಲಾಗುತ್ತಿದೆ. ೯ ಮತ್ತು ೧೦ನೇ ತರಗತಿ ಮಕ್ಕಳು ೮ನೇ ತರಗತಿ ಮಕ್ಕಳು ಮೊಟ್ಟೆ ತಿನ್ನುವುದನ್ನು ನೋಡಿಕೊಂಡು ಓಡಾಡುವಂತಾಗಿದೆ. ಹಾಗಾಗಿ ೯ ಮತ್ತು ೧೦ನೇ ತರಗತಿ ಮಕ್ಕಳಿಗೂ ಸಹ ಮೊಟ್ಟ ನೀಡುವ ಕಾರ್ಯಕ್ರಮವನ್ನು ವಿಸ್ತರಿಸಬೇಕು ಎಂದು ಅವರು ಆಗ್ರಹಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಹೈಸ್ಕೂಲ್ ವಿಭಾಗ, ಸರ್ವೋದಯ ಪ್ರೌಢಶಾಲೆ, ಎಂಪ್ರೆಸ್ ಶಾಲೆ ಸೇರಿದಂತೆ ಗ್ರಾಮೀಣ ಪ್ರದೇಶದ ವಿವಿಧ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಶಿಕ್ಷಕರ ಕುಂದುಕೊರತೆ ಆಲಿಸಿದ ನಂತರ ಮಾತನಾಡಿದ ಅವರು, ನಾನು ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳಿಗೆ ವಾರಕ್ಕೆ ೧ ಮೊಟ್ಟೆ ಮಾತ್ರ ನೀಡುತ್ತಿರುವುದು ಗಮನಕ್ಕೆ ಬಂದಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ವಾರಕ್ಕೆ ೨ ಮೊಟ್ಟೆಗಳನ್ನು ನೀಡುತ್ತಿದ್ದೆವು. ಈಗ ೯ ಮತ್ತು ೧೦ನೇ ತರಗತಿ ಮಕ್ಕಳಿಗೂ ಮೊಟ್ಟೆ ಕೊಡುವ ಕಾರ್ಯಕ್ರಮವನ್ನು ವಿಸ್ತರಿಸುವ ಮೂಲಕ ವಾರಕ್ಕೆ ೩ ಮೊಟ್ಟೆಗಳನ್ನು ನೀಡಬೇಕು ಎಂದು ಹೇಳಿದರು.
ಪ.ಪೂ. ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಿ ಸಂಯುಕ್ತ ಜೂನಿಯರ್ ಕಾಲೇಜುಗಳಲ್ಲಿ ಬಿಸಿಯೂಟದ ದೊಡ್ಡ ಸಮಸ್ಯೆಯಾಗುತ್ತಿದೆ. ಪ್ರೌಢಶಾಲಾ ವಿಭಾಗದ ಮಕ್ಕಳಿಗೆ ಮಾತ್ರ ಬಿಸಿಯೂಟ ನೀಡಲಾಗುತ್ತಿದ್ದು, ಪಿಯು ಮಕ್ಕಳಿಗೆ ನೀಡುತ್ತಿಲ್ಲ. ಹಾಗಾಗಿ ಪಿಯು ಮಕ್ಕಳಿಗೂ ಬಿಸಿಯೂಟ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ೭ನೇ ವೇತನ ಆಯೋಗ ರಚನೆ ಮಾಡಿದ್ದು, ಸರ್ಕಾರಿ ನೌಕರರಿಗೆ ಶೇ. ೧೭ ರಷ್ಟು ಮಧ್ಯಂತರ ಪರಿಹಾರ ಕೊಟ್ಟಿದ್ದೆವು. ಹೊಸ ಸರ್ಕಾರ ಬಜೆಟ್‌ನಲ್ಲಿ ೭ನೇ ವೇತನ ಆಯೋಗದ ವರದಿ ತರಿಸಿಕೊಂಡು ನೌಕರರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ನೌಕರರ ಹಳೇ ಪಿಂಚಣಿ ವ್ಯವಸ್ಥೆ (ಒಪಿಎಸ್)ಯನ್ನು ಮತ್ತೆ ಜಾರಿಗೆ ತಂದು ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್)ಯನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್‌ನವರು ಹೇಳಿದ್ದಾರೆ. ಆದಷ್ಟು ಬೇಗ ಈ ಸಮಿತಿಯ ವರದಿಯನ್ನು ತರಿಸಿಕೊಂಡು ಒಪಿಎಸ್‌ನ್ನು ಜಾರಿಗೊಳಿಸಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ, ಶೌಚಾಲಯದ ಕೊರತೆ ಬಗ್ಗೆ ಹೈಕೋರ್ಟ್ ಸಹ ಭಾರೀ ಚಾಟಿ ಬೀಸಿದೆ.
ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ, ಶೌಚಾಲಯಗಳ ಕೊರತೆ ದೊಡ್ಡಪ್ರಮಾಣದಲ್ಲಿ ಕಾಡುತ್ತಿದೆ. ಈ ಸಮಸ್ಯೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸುವತ್ತ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷದ ೫ ಗ್ಯಾರೆಂಟಿಗಳ ಮಧ್ಯೆದಲ್ಲಿ ಶಿಕ್ಷಣ ಇಲಾಖೆ ಎಲ್ಲಿ ಸೊರಗಿ ಹೋಗುತ್ತದೋ ಎಂಬ ಆತಂಕ ನನ್ನನ್ನು ಕಾಡುತ್ತಿದೆ. ರಾಜ್ಯದ ಜನತೆಗೆ ಎಷ್ಟೇ ಗ್ಯಾರೆಂಟಿಗಳನ್ನು ಕೊಡಿ, ಇನ್ನು ಏನು ಬೇಕಾದರೂ ಕೊಡಿ ನಮ್ಮ ಅಭ್ಯಂತರವಿಲ್ಲ. ಇವುಗಳ ಜತೆಗೆ ಶಿಕ್ಷಣ ಇಲಾಖೆಯನ್ನು ಸಬಲೀಕರಣ ಮಾಡುವತ್ತಲೂ ಕ್ರಮ ಕೈಗೊಳ್ಳಿ ಎಂದು ಅವರು ಆಗ್ರಹಿಸಿದರು.
ನಾನು ತುಮಕೂರು ತಾಲ್ಲೂಕಿನ ವಿವಿಧ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿದ್ದೇವೆ. ಶಾಲಾ-ಕಾಲೇಜುಗಳು ಪ್ರಾರಂಭವಾಗಿ ೧ ತಿಂಗಳಾಗಿದೆ. ಶಿಕ್ಷಕರು, ಉಪನ್ಯಾಸಕರುಗಳ ಕುಂದುಕೊರತೆ ಆಲಿಸುತ್ತಿದ್ದೇನೆ.
ಭೇಟಿ ಸಂದರ್ಭದಲ್ಲಿ ಸರ್ಕಾರಿ-ಶಾಲಾ ಕಾಲೇಜುಗಳ ವಿವಿಧ ಸಮಸ್ಯೆಗಳು ಅನಾವರಣಗೊಂಡಿವೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದು ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ರಾಜಕುಮಾರ್, ಶಿಕ್ಷಕರುಗಳಾದ ರವಿಕುಮಾರ್, ಜೈರಾಮ್ ನಾಗರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಫ್ಯಾಷನ್ ಶೋ ಗ್ರಾಂಡ್ ಫಿನಾಲೆ ಯಶಸ್ವಿ
Next Article ಜನರ ಸಮಸ್ಯೆಗಳಿಗೆ ಸ್ಪಂಧಿಸಿ ಕಾರ್ಯನಿರ್ವಹಿಸಿ
News Desk Benkiyabale

Related Posts

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
Our Youtube Channel
Our Picks

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

By News Desk BenkiyabaleFebruary 21, 2026 5:02 pm

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ…

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.