BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ
  • ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು
  • ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ
  • ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್
  • ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಾದಕ ವಸ್ತುಗಳ ಮುಕ್ತ ಸಮಾಜ ನಮ್ಮೆಲ್ಲರ ಹೊಣೆ
ತುಮಕೂರು

ಮಾದಕ ವಸ್ತುಗಳ ಮುಕ್ತ ಸಮಾಜ ನಮ್ಮೆಲ್ಲರ ಹೊಣೆ

By News Desk BenkiyabaleUpdated:June 26, 2023 3:56 pm

ತುಮಕೂರು


ಮಧ್ಯ ವಸನ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಒಂದು ಕುಟುಂಬವಲ್ಲ, ಇಡೀ ದೇಶವೇ ಹಾಳಾಗಲಿದೆ. ಈ ಎಚ್ಚರಿಕೆಯನ್ನು ಎಲ್ಲಾ ಯುವಜನರು ಅರ್ಥ ಮಾಡಿಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನ್ಯಾ.ನೂರುನ್ನಿಸಾ ಅಭಿಪ್ರಾಯಪಟ್ಟಿದ್ದಾರೆ.
ನಗರದ ಅಚರ್ಡ್ ಮದ್ಯ ವರ್ಜನ ಮತ್ತು ಸಮಗ್ರ ಪುನರ್ವಸತಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನಸಿಕ ಆರೋಗ್ಯ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ವಿಶ್ವ ಅಂತರರಾಷ್ಟಿçÃಯ ಮಾದಕ ವಸ್ತುಗಳ ಸೇವನೆ ಹಾಗು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ-೨೦೨೩ಗೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಕೌಟುಂಬಿಕ ದೌರ್ಜನ್ಯ, ವಿಚೇಧನ ಕೇಸುಗಳಲ್ಲಿ ಮದ್ಯವ್ಯಸನ, ಮಾದಕ ವಸ್ತು ಸೇವನೆಯೂ ಒಂದು ಕಾರಣವಾಗಿರುತ್ತದೆ. ಎಷ್ಟೋ ಸಂದರ್ಭಗಳಲ್ಲಿ ಮಕ್ಕಳೇ ತಂದೆ, ತಾಯಿಗಳ ಮದ್ಯವಸನದಿಂದ ಬೇಸತ್ತು ತಮಗೆ ಬಿಡುಗಡೆ ಕೊಡುವಂತೆ, ಬದುಕಲು ವ್ಯವಸ್ಥೆ ಮಾಡಿಕೊಡುವಂತೆ ನ್ಯಾಯಾಲಯದ ಮೆಟ್ಟಿಲು ಹತ್ತಿದ ಉದಾಹರಣೆಗಳಿವೆ ಎಂದರು.
ಮಾದಕ ವಸ್ತುಗಳ ಸೇವನೆ, ದಾಸ್ತಾನು ಮಾಡುವುದು, ಉತ್ಪಾಧಿಸುವುದು, ಸಾಗಾಣಿಕೆ ಮಾಡುವುದು ಎಲ್ಲರೂ ಅಪರಾಧ.ಒತ್ತಡದಿಂದ ಹೊರಬರುವ ಸಲುವಾಗಿ ಆರಂಭಿಸುವ ಈ ಚಟ,ನಿಮ್ಮ ಆರೋಗ್ಯದ ಜೊತೆಗೆ, ಕುಟುಂಬದ ಸಾಮಾಜಿಕ ಆರೋಗ್ಯವನ್ನು ಕೆಡಿಸುತ್ತದೆ.ಮದ್ಯಪಾನ ಮತ್ತು ಮಾದಕ ಪದಾರ್ಥ ಸೇವನೆಯಿಂದ ನಿಮ್ಮ ಅರ್ಥಿಕ, ಸಾಮಾಜಿಕ ಸ್ಥಿತಿಗತಿಯೂ ಹಾಳಾಗಲಿದೆ. ಮನೆಯವರು ಮತ್ತು ಸಾಮಾಜದ ದೃಷ್ಟಿಯಲ್ಲಿ ನಿವೋಬ್ಬ ವಿವೇಕರಹಿತ ವ್ಯಕ್ತಿಯಾಗಲಿದ್ದಾರೆ. ಹಾಗಾಗಿ ಮದ್ಯ ಮತ್ತು ಮಾದಕ ವಸ್ತುಗಳ ಚಟದಿಂದ ದೂರಾಗಿ, ಒಳ್ಳೆಯ ಬದುಕು ನಡೆಸುವಂತೆ ನ್ಯಾ.ನೂರುನ್ನಿಸಾ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಡಾ.ಕೆ.ಶ್ರೀನಿವಾಸ್ ಮಾತನಾಡಿ,ದೇಶದಲ್ಲಿ ಸುಮಾರು ೧೬.೫೦ ಕೋಟಿ ಅಧಿಕ ಜನರು ಮಾದಕ ವಸ್ತುಗಳ ಸೇವೆಯಿಂದ ಉಂಟಾಗುವ ಮಾರಕ ರೋಗಗಳಿಗೆ ತುತ್ತಾಗಿದ್ದು, ಇವರಲ್ಲಿ ಸುಮಾರು ೬ ಕೊಟಿಗೂ ಹೆಚ್ಚು ಜನರ ಅತ್ಯಂತ ಕ್ಷಿಷ್ಟಕರ ಪರಿಸ್ಥಿತಿಯಲ್ಲಿದ್ದಾರೆ.ಮದ್ಯವಸನಿಗಳ ದುಡಿಮೆಯ ಶೇ೩೦ ಪಾಲು ಕುಡಿತಕ್ಕೆ ಹೋದರೆ, ಉಳಿದ ಹಣ ಚಿಕಿತ್ಸೆಗೆ ಖರ್ಚಾಗುತ್ತದೆ. ಹಾಗಾಗಿ ಜನರು ಅತ್ಯಂತ ಎಚ್ಚರಿಕೆ ವಹಿಸಬೇಕಾಗಿದೆ ಎಂದರು.
ಭಾರತದಲ್ಲಿರುವ ಹಲವು ಕಾಫ್ ಶಿರಫ್‌ಗಳು ಮಾದಕ ವಸ್ತುಗಳಿಂದ ಮಾಡಲ್ಪಟ್ಟಿವೆ.ಮಾದಕ ವಸ್ತು ವಸನಿಗಳಿಗೆ ಇವು ಅತಿ ಸುಲಭದಲ್ಲಿ ದೊರೆಯುವುದರಿಂದ ಚಟಕ್ಕೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಿದೆ. ಹಾಗಾಗಿ ಔಷಧ ನಿಯಂತ್ರಣ ಮಂಡಳಿಗಳು ಇಂತಹ ಔಷಧಿ ಸೇವಿಸುವವರ ಮೇಲೆ ನಿಗಾವಹಸಿಬೇಕಾಗಿದೆ.ಪದೇ ಪದೇ ಇಂತಹ ಕೆಮ್ಮಿನ ಔಷಧಿ ದೊರೆಯದಂತೆ ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಶ್ರೀನಿವಾಸ್ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಚರ್ಡ್ ಮದ್ಯವಸನಿ ಮುಕ್ತ ಕೇಂದ್ರದ ನಿರ್ವಾಹಕ ನಿರ್ದೇಶಕ ಡಾ.ಸದಾಶಿವಯ್ಯ ಮಾತನಾಡಿ,ಕಳೆದ ೨೩ ರಿಂದ ನಮ್ಮ ಸಂಸ್ಥೆಯಿAದ ಮಾದಕ ವಸ್ತುಗಳ ಸೇವೆ ಮತ್ತು ಸಾಗಾಣಿಕೆ ವಿರೋಧಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.ಅಲ್ಲದೆ ಮದ್ಯವಸನಕ್ಕೆ ತುತ್ತಾದ ಜನರಿಗೆ ಚಿಕಿತ್ಸೆ ನೀಡುತ್ತಾ ಬಂದಿದ್ದು,ಇದುವರೆಗೂ ಸಾವಿರಾರು ಜನರು ನಮ್ಮ ಕೇಂದ್ರದಿAದ ಚಿಕಿತ್ಸೆ ಪಡೆದು, ಮದ್ಯಪಾನ,ಮಾದಕ ವಸ್ತು ವಸನದಿಂದ ಮುಕ್ತರಾಗಿ ಒಳ್ಳೆಯ ಜೀವನ ನಡೆಸುತ್ತಿದ್ದಾರೆ ಎಂದರು.
ಮಧ್ಯ ವರ್ಜನ ಶಿಬಿರದ ಶಿಬಿರಾರ್ಥಿ ಮಹೇಶ್ ಮಾತನಾಡಿ,ಸ್ನೇಹಿತರ ಸಹವಾಸದಿಂದ ಆರಂಭವಾದ ಈ ಚಟ ಇಡೀ ಜೀವನವನ್ನೇ ನುಂಗಿ ಹಾಕಿತ್ತು. ಕಳೆದ ೧೧ ವರ್ಷಗಳ ಹಿಂದೆ ಚಿಕಿತ್ಸೆ ಪಡೆದು ಒಳ್ಳೆಯ ಬದುಕು ಕಟ್ಟಿಕೊಂಡಿದ್ದ ನನಗೆ, ವ್ಯವಹಾರದಲ್ಲಿ ಆದ ನಷ್ಟದಿಂದ ಮತ್ತೊಮ್ಮೆ ಕುಡಿತದ ಚಟ ಹತ್ತಿಸಿಕೊಂಡು ಮತ್ತೆ ಚಿಕಿತ್ಸೆಗೆ ಬಂದು, ಚಕಿತ್ಸೆಗೆ ಒಳ್ಳಗಾಗಿದ್ದೇನೆ. ಮುಂದೆ ಕುಡಿಯಬಾರದು ಎಂಬ ತೀರ್ಮಾನಕ್ಕೆ ಬಂದಿರುವುದಾಗಿ ತಿಳಿಸಿದರು.
ಜಿಲ್ಲಾಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ಚೇತನ್ ವಿಶೇಷ ಉಪನ್ಯಾಸ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್. ಡಿ.ಎನ್.ವಹಿಸಿದ್ದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ ಎಂ.ಎಸ್.,ಜಿಲ್ಲಾ ವಿಕಲಚೇತನ ಅಧಿಕಾರಿ ಡಾ.ಎಂ.ರಮೇಶ್, ಜಿಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಮಾಸಿಕ ಆರೋಗ್ಯ ವಿಭಾಗದ ಡಾ.ರವೀಶ್ ಎನ್.ಆರ್., ಆಚರ್ಡ್ ಸಂಸ್ಥೆಯ ಕಾರ್ಯದರ್ಶಿ ಮಾಲ ಸದಾಶಿವಯ್ಯ ಮತ್ತಿತರರು ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleಶಾಲಾ ಸಂಸತ್ ರಚನೆಯಿಂದ ಮಕ್ಕಳಲ್ಲಿ ಚುನಾವಣಾ ಅರಿವು
Next Article ಹೆಣ್ಣು ಮಕ್ಕಳು ಸಮಾಜದ ಬೆಳಕಾಗಿ ಬೆಳೆಯಲಿ
News Desk Benkiyabale

Related Posts

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm news
ತಾಜಾ ಸುದ್ಧಿಗಳು
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm
news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm
news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
news

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
Our Youtube Channel
Our Picks

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

By News Desk BenkiyabaleOctober 17, 2026 6:00 pm

ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಭಾಷೆಯ ಮೇಲಿನ ಹಿಡಿತ ಮತ್ತು ಪರಿಣಾಮಕಾರಿ ಬರವಣಿಗೆಯ ಕೌಶಲ ಅತ್ಯಂತ ಅಗತ್ಯ. ನಿರಂತರ ಅಧ್ಯಯನ,…

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.