BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ
  • ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ
  • ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ
  • ಹುಳಿಯಾರಿನಲ್ಲಿ ಮಧ್ಯವರ್ತಿ ಮುಕ್ತ ಅಭಿಯಾನ
  • ಇ-ಪೌತಿ ಖಾತಾ ಆಂದೋಲನ ಸಹಕಾರ ಅಗತ್ಯ: ಡಿಸಿ
  • ಯುವಜನಾಂಗಕ್ಕೆ ಸಮುದಾಯದ ಪರಂಪರೆಯ ಅರಿವು ಮೂಡಿಸಿ
  • ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ
  • ಬಡವರ ಗೋಳು ಕೇಳುವರ‍್ಯಾರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೃಷಿ ವಲಯಕ್ಕೆ ಲಾಕ್ ಡೌನ್ ನಡುವೆಯೂ ಸಡಿಲಿಕೆ – ಸಚಿವ ಗೋಪಾಯ್ಯ
Trending

ಕೃಷಿ ವಲಯಕ್ಕೆ ಲಾಕ್ ಡೌನ್ ನಡುವೆಯೂ ಸಡಿಲಿಕೆ – ಸಚಿವ ಗೋಪಾಯ್ಯ

By News Desk BenkiyabaleUpdated:May 09, 2020 6:47 pm

ತುಮಕೂರು:

      ಕೊರೋನಾದಿಂದ ದೇಶ ಸಂಕಷ್ಟದಲ್ಲಿದ್ದು, ರೈತರು ಬೆಳೆದರೆ ಮಾತ್ರ ದೇಶ ಉದ್ಧಾರ ಆಗಲು ಸಾಧ್ಯ ಎನ್ನುವುದನ್ನು ಅರಿತು ಕೃಷಿ ವಲಯಕ್ಕೆ ಲಾಕ್ ಡೌನ್ ನಡುವೆಯೂ ಸಡಿಲಿಕೆಯನ್ನು ನೀಡಲಾಗಿತ್ತು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಯ್ಯ ತಿಳಿಸಿದರು.

      ತಾಲ್ಲೂಕಿನ ಬುಗುಡನಹಳ್ಳಿ ಗ್ರಾಮದಲ್ಲಿ ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಪಡಿತರ ವಿತರಿಸಿ ಮಾತನಾಡಿದ ಅವರು, ಆಹಾರವನ್ನು ಸರಿಯಾಗಿ ಪೂರೈಕೆ ಮಾಡದ 150 ಅಂಗಡಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

      ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪಡಿತರವನ್ನು ಉಚಿತವಾಗಿ ನೀಡಲಾಗುತ್ತಿದೆ, ರಾಜ್ಯ ಸಂಕಷ್ಟದಲ್ಲಿರುವ ಪರಿಸ್ಥಿತಿಯಲ್ಲಿ ಹಣ ಪಡೆಯದಂತೆ ಮನವಿ ಮಾಡಿದರೂ, ಅಂಗಡಿ ಮಾಲೀಕರು ಕೇಳದೇ ಮೋಸ ಮಾಡುತ್ತಿದ್ದ ಅಂಗಡಿಗಳು ಹಾಗೂ ಕಾರ್ಯ ನಿರ್ವಹಿಸದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದರು.

      ರಾಜ್ಯದಲ್ಲಿ ಕೊರೋನಾ ಸಂಕಷ್ಟದಲ್ಲಿ ರಾಜ್ಯ ಸರ್ಕಾರ ನೀಡುವ ಪಡಿತರವನ್ನು 4.65 ಕೋಟಿ ಮಂದಿ ಪಡೆದಿದ್ದಾರೆ, ಕೇಂದ್ರ ಸರ್ಕಾರದಿಂದ ನೀಡುವ ಪಡಿತರವನ್ನು ಮೇ.01ರಿಂದ ವಿತರಿಸಲು ಕ್ರಮವಹಿಸಲಾಗಿದ್ದು, ಯಾವುದೇ ಕಾರಣಕ್ಕೂ ಕಳಪೆ ಪಡಿತರವನ್ನು ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ಪಡಿತರ ಚೀಟಿ ಹೊಂದಿರುವವರಿಗೆ ಉಚಿತವಾಗಿ ನೀಡುವಂತಾಗಬೇಕು ಎಂದರು.

       ವಲಸೆ ಕಾರ್ಮಿಕರು ಎಲ್ಲಿಯೇ ಇದ್ದರು ಪೋರ್ಟಬಲಿಟಿ ಆಧಾರದ ಮೇಲೆ ಪಡಿತರವನ್ನು ವಿತರಿಸುವಂತಹ ಕೆಲಸವಾಗಬೇಕು, ಈ ನಿಟ್ಟಿನಲ್ಲಿ ಅಂಗಡಿ ಮಾಲೀಕರಿಗೆ ಜಾಗೃತಿ ಮೂಡಿಸಲಾಗಿದ್ದು, ಬಡವರ ಪಡಿತರ ಬಡವರಿಗೆ ಸಿಗುವಂತಾಗಬೇಕು ಎನ್ನುವುದು ನಮ್ಮ ಸರ್ಕಾರದ ಉದ್ದೇಶ ಎಂದು ತಿಳಿಸಿದರು.

      ಮುಖ್ಯಮಂತ್ರಿ ಅನಿಲ ಭ್ಯಾಗ್ಯ ಹಾಗೂ ಉಜ್ವಲ್ ಯೋಜನೆಯಡಿ ಸಂಪರ್ಕ ಪಡೆದಿರುವವರಿಗೆ ಮೂರು ತಿಂಗಳ ಸಹಾಯಧನವನ್ನು ನೀಡಲಾಗುತ್ತಿದೆ, ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದವರಿಗೂ ಪಡಿತರವನ್ನು ವಿತರಿಸಲು ಸಿಎಂ ಯಡಿಯೂರಪ್ಪ ಅವರು ಕ್ರಮವಹಿಸಿದ್ದು, ಆದ್ಯತೆ ಮೇಲೆ ಎಪಿಎಲ್ ಕಾರ್ಡ್ ದಾರರಿಗೂ ಪಡಿತರವನ್ನು ನೀಡಲಾಗುತ್ತಿದೆ ಎಂದರು.

      ತುಮಕೂರು ಜಿಲ್ಲೆಯಲ್ಲಿ ರಾಗಿಯನ್ನು ಬೆಳೆಯನ್ನು ಹೆಚ್ಚಾಗಿ ಬೆಳೆಯುವುದರಿಂದ 2ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ರೈತರಿಂದ ಖರೀದಿಸಲಾಗಿದ್ದು, 96 ಸಾವಿರ ರೈತರು ರಾಗಿ ಮಾರಲು ನೋಂದಣಿ ಮಾಡಿಕೊಂಡಿದ್ದು, ಹೆಚ್ಚುವರಿಯಾಗಿ ಒಂದು ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.

      ಮಾಜಿ ಶಾಸಕ ಸುರೇಶ್ ಗೌಡ ಮಾತನಾಡಿ ಕಳೆದ ತಿಂಗಳಿಂದ ದೇಶ ಸ್ತಬ್ಧವಾಗಿದೆ, ಕೊರೋನಾ ವಿರುದ್ಧ ಹೋರಾಡಲು ಯುದ್ಧ ಮಾಡುವಂತೆ ಪ್ರಧಾನಿ ಮೋದಿ ಅವರು ನೀಡಿದ ಕರೆಯಂತೆ ದೇಶದ ಜನ ಯುದ್ಧ ಮಾಡಿದ್ದಾರೆ, ಕೊನೆ ಹಂತದಲ್ಲಿ ಭಾರತ ಗೆಲ್ಲಲ್ಲು ಜೂನ್, ಜುಲೈವರೆಗೆ ಹೋರಾಡಬೇಕಿದೆ ಎಂದು ತಿಳಿಸಿದರು.

      ಲಾಕ್ ಡೌನ್ ನಿಂದ ಕಷ್ಟಕ್ಕೆ ಸಿಲುಕಿರುವ ಕೂಲಿ ಕಾರ್ಮಿಕರು, ಪಡಿತರ ಹೊಂದಿಲ್ಲದವರಿಗೆ ಪಡಿತರವನ್ನು ನೀಡುವಂತೆ ಪ್ರಧಾನಿ ಮೋದಿ, ಸಿಎಂ ಬಿಎಸ್ ವೈ ಅವರು ನೀಡಿದ್ದ ಕರೆಯಂತೆ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಪಡಿತರವನ್ನು ವಿತರಿಸಲಾಗುತ್ತಿದೆ ಎಂದರು.

       ಲಾಕ್ ಡೌನ್ ನಿಂದ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಪ್ರಾಮಾಣಿಕವಾಗಿ ತಲುಪಿಸುವಂತಹ ಕೆಲಸ ಮಾಡಬೇಕಿದೆ, ಬಡವರ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದಾಗ ಮಾತ್ರ ಸೇವೆಯಾಗುತ್ತದೆ, ಸರಳತೆಯಿಂದ ಸೇವೆ ಮಾಡಿದಾಗ ಮಾತ್ರ ಉತ್ತಮ ಸೇವೆ ಸಿಗುತ್ತದೆ ಎಂದರು.

      ಯಾವುದೇ ಸಂದರ್ಭದಲ್ಲಿ ಆದರೂ ರೈತರಿಗೆ ಪಡಿತರ ಸಿಗಬೇಕು ಎನ್ನುವ ಉದ್ದೇಶದಿಂದ ಸ್ಥಾಪಿಸಿದ್ದ ಆಹಾರ ಭಂಡಾರವನ್ನು ರದ್ದುಗೊಳಿಸಿರುವುದರಿಂದ ಜನರಿಗೆ ಸಾಕಷ್ಟು ಕಷ್ಟವಾಗಿದ್ದು, ಆಹಾರ ಭಂಡಾರವನ್ನು ಮತ್ತೆ ಪ್ರಾರಂಭಿಸಬೇಕು ಎಂದು ಆಹಾರ ಸಚಿವ ಗೋಪಾಲಯ್ಯ ಅವರಿಗೆ ಮನವಿ ಮಾಡಿದರು.

(Visited 39 times, 1 visits today)
Previous Articleತುಮಕೂರು : ಕೋವಿಡ್-19 ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ!!
Next Article ಭ್ರಷ್ಟಾಚಾರ ಆರೋಪ ಹೊತ್ತಿದ್ದ ಡಿಎಚ್‍ಓ ಚಂದ್ರಿಕಾ ದಿಢೀರ್ ಎತ್ತಂಗಡಿ
News Desk Benkiyabale

Related Posts

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm news

ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ

June 16, 2026 5:25 pm news

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ

June 16, 2026 5:22 pm news
ತಾಜಾ ಸುದ್ಧಿಗಳು

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm

ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ

June 16, 2026 5:25 pm

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ

June 16, 2026 5:22 pm

ಹುಳಿಯಾರಿನಲ್ಲಿ ಮಧ್ಯವರ್ತಿ ಮುಕ್ತ ಅಭಿಯಾನ

June 16, 2026 5:20 pm

ಇ-ಪೌತಿ ಖಾತಾ ಆಂದೋಲನ ಸಹಕಾರ ಅಗತ್ಯ: ಡಿಸಿ

June 16, 2026 5:05 pm

ಯುವಜನಾಂಗಕ್ಕೆ ಸಮುದಾಯದ ಪರಂಪರೆಯ ಅರಿವು ಮೂಡಿಸಿ

June 15, 2026 5:26 pm
Our Youtube Channel
Our Picks

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm

ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ

June 16, 2026 5:25 pm

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ

June 16, 2026 5:22 pm

ಹುಳಿಯಾರಿನಲ್ಲಿ ಮಧ್ಯವರ್ತಿ ಮುಕ್ತ ಅಭಿಯಾನ

June 16, 2026 5:20 pm

ಇ-ಪೌತಿ ಖಾತಾ ಆಂದೋಲನ ಸಹಕಾರ ಅಗತ್ಯ: ಡಿಸಿ

June 16, 2026 5:05 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

By News Desk BenkiyabaleJune 16, 2026 5:29 pm

ತುಮಕೂರು: ಶಾಲೆ ಬಿಟ್ಟ ನಂತರ ಸ್ನೇಹಿತರನ್ನು ಭೇಟಿ ಮಾಡುವುದೇ ಕಷ್ಟ ಅಂತಹುದರಲ್ಲಿ ಪ್ರೌಢಶಾಲೆಯಲ್ಲಿ ಕಲಿತ ಎಲ್ಲಾ ಸ್ನೇಹಿತರನ್ನು ಕಲೆ ಹಾಕಿ…

ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ

June 16, 2026 5:25 pm

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ

June 16, 2026 5:22 pm

ಹುಳಿಯಾರಿನಲ್ಲಿ ಮಧ್ಯವರ್ತಿ ಮುಕ್ತ ಅಭಿಯಾನ

June 16, 2026 5:20 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.