ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಒಂದೇ ದಾರಿ

ತುಮಕೂರು:

      ಜಿಲ್ಲೆಯಲ್ಲಿ ಕೋವಿಡ್-19 ಹರಡದಂತೆ ಕಾಪಾಡುವ ನಿಟ್ಟಿನಲ್ಲಿ ಅಂಗಡಿ ಮುಂಗಟ್ಟು ಮತ್ತಿತರ ಸಾಮಾಜಿಕ ಸ್ಥಳಗಳಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ಹೇಳಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಅಕ್ಕಪಕ್ಕದ ಜನರು ಕೆಮ್ಮುವಾಗ, ಸೀನುವಾಗ ಎಚ್ಚರವಹಿಸಬೇಕು ಎಂದರಲ್ಲದೇ ಈಗಾಗಲೇ ಮುಸ್ಲಿಂ ಭಾಂದವರ ಪವಿತ್ರ ರಂಜಾನ್ ಹಬ್ಬ ಪ್ರಯುಕ್ತ ಪ್ರಾರ್ಥನೆ ಮಾಡುವವರು ಈದ್ಗಾಗೆ ಹೋಗುವುದು ಬೇಡ. ಇದರಿಂದ ಹಲವಾರಿಗೆ ತೊಂದರೆಯಾಗುತ್ತದೆ. ಈಗ ಹಗ್ ಮಾಡುವುದು ಬೇಡ. ಆದ್ದರಿಂದ ಮುಸ್ಲಿಂ ಭಾಂದವರು ಮನೆಯಲ್ಲಿಯೇ ಕುಳಿತು ಪ್ರಾರ್ಥನೆ ಮಾಡಿ ಎಂದರು.

      ಕೊರೊನಾ ವೈರಸ್ ಎಂಬುದು ಒಂದು ಸಮುದಾಯದ ಜನರಿಗೆ ಮಾತ್ರ ಬರುವಂತಹದ್ದಲ್ಲ. ಸಾರ್ವಜನಿಕರು ಕೇವಲ ಒಂದು ಸಮುದಾಯವನ್ನು ಟಾರ್ಗೆಟ್ ಮಾಡಬಾರದು. ಖಾಯಿಲೆ ಪ್ರತಿಯೊಬ್ಬರಿಗೂ ಬರುತ್ತದೆ. ನಾವೆಲ್ಲರೂ ಭಾರತಾಂಬೆಯ ಮಕ್ಕಳು. ಇಲ್ಲಿ ಯಾರು ಕೂಡ ಹೊರಗಿನವರಲ್ಲ. ನಾವು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು. ಸಮುದಾಯದವರನ್ನು ಕೆಲವೊಂದು ಹಳ್ಳಿಗಳಿಗೆ ಬಿಟ್ಟುಕೊಳ್ಳದೆ ಅವರದೊಂದಿಗೆ ವ್ಯವಹಾರ ಮಾಡುವುದನ್ನೆ ಬಿಟ್ಟಿದ್ದಾರೆ. ಅವರ ಸ್ವಾಭಿಮಾನಕ್ಕೆ ಧಕ್ಕೆ ಯಾಗದಂತೆ ವರ್ತಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

      ಕೊರೊನಾ ಕಾಯಿಲೆಯಿಂದ ಸಾಯುವವರಿಗಿಂತರ ಅದರ ಭೀತಿಗೆ ಜನರು ಸಾಯುತ್ತಿದ್ದಾರೆ. ರೋಗ ಸೋಂಕಿತರಲ್ಲಿ ನಿರೋಧಕ ಶಕ್ತಿ ಕಡಿಮೆಯಾಗಿ ಜನರು ಸಾಯುತ್ತಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ವಯೋ ವೃದ್ಧರು, ಮಕ್ಕಳು, ಗರ್ಭಿಣಿ, ಬಾಣಂತಿಯರನ್ನು ಸುರಕ್ಷಿತವಾಗಿ ನೋಡಿ ಕೊಳ್ಳಬೇಕು ಎಂದರಲ್ಲದೇ ಈಗಾಗಲೇ ಸೋಂಕಿನಿಂದ ಚೇತರಿಸಿಕೊಂಡಿರುವವರಿಗೆ ಮತ್ತೆ ಪರೀಕ್ಷಿಸಿ ಎಂದು ಸೂಚಿಸಿದರು.

        ಶಾಸಕ ಜಿ.ಬಿ ಜ್ಯೋತಿಗಣೇಶ್ ಮಾತನಾಡಿ, ನಗರದಲ್ಲಿ ಪಿಹೆಚ್ ಕಾಲೋನಿ , ಕೆಹೆಚ್‍ಬಿ ಕಾಲೋನಿಯಲ್ಲಿರುವ ಕಂಟೈನ್ಮೆಂಟ್ ವಲಯದಲ್ಲಿ ಬಡ ಜನರಿಗೆ ಮಹಾನಗರ ಪಾಲಿಕೆ ವತಿಯಿಂದ ದಿನನಿತ್ಯ ಹಾಲು ಮತ್ತು ಆಹಾರ ಧಾನ್ಯಗಳನ್ನು ಒದಗಿಸಿಕೊಡಬೇಕೆಂದು ಮನವಿ ಮಾಡಿದರು.

(Visited 3 times, 1 visits today)

Related posts

Leave a Comment