ತುಮಕೂರು:

        ಕೊರೊನಾ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಗೆ ಕೆಲಸ ನೀಡಲಾಗುತ್ತಿದೆ. ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಜಮೀನಿನಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಳ್ಳುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ತಿಳಿಸಿದರು.

      ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ಬದು ನಿರ್ಮಾಣ ಮಾಸಾಚರಣೆ ಅಂಗವಾಗಿ ವೈಯಕ್ತಿಕ ಬದು ನಿರ್ಮಾಣ ಕಾಮಗಾರಿಗಳ ಕಾರ್ಯಾದೇಶ ಪತ್ರ ಹಾಗೂ ಹೊಸ ಉದ್ಯೋಗ ಚೀಟಿಗಳನ್ನು ವಿತರಿಸಿ ಅವರು ಮಾತನಾಡಿದರು.

      ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಸರ್ಕಾರದ ಆದೇಶದಂತೆ ರೈತರು ತಮ್ಮ ಜಮೀನಿನಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಳ್ಳಬಹುದಾಗಿದೆ. ರೈತರು ಈ ಯೋಜನೆಯನ್ನು ಸದುಪಯೋಗಪಡೆದುಕೊಳ್ಳಬೇಕು. ಜನರು ಕೆಲಸ ಮಾಡಿದರೆ ಹೆಚ್ಚು ಮಾನವ ದಿನಗಳು ಸೃಜನೆಯಾಗುತ್ತವೆ. ಮುಂದಿನ ದಿನಗಳಲ್ಲಿ ಬಿದ್ದ ಮಳೆಯ ನೀರು ತಮ್ಮ ಜಮೀನಿನಲ್ಲಿಯೇ ಸಂಗ್ರಹಣೆ ಮಾಡಿಕೊಳ್ಳುವಂತೆ ಅವರು ತಿಳಿಸಿದರು.

      ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಯಿದಾ ಜುಂ ಜುಂ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

(Visited 4 times, 1 visits today)