ತುಮಕೂರು: ಇಂದಿನಿಂದ ಜಿಲ್ಲಾಸ್ಪತ್ರೆಯಲ್ಲಿ ನಾನ್ ಕೋವಿಡ್ ಸೇವೆ ಆರಂಭ!!

ತುಮಕೂರು:

      ತುಮಕೂರು ಜಿಲ್ಲಾಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯಾಗಿ ಪರಿವರ್ತಿಸಲಾಗಿದ್ದು, ನಾನ್ ಕೋವಿಡ್ ಸೇವೆಯನ್ನು ಇಲ್ಲಿಯವರೆಗೂ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಚಿಕಿತ್ಸೆಗಾಗಿ ರೆಫರ್ ಮಾಡಲಾಗುತ್ತಿತ್ತು.

      ಮೇ 20ರಿಂದ ಜಿಲ್ಲಾಸ್ಪತ್ರೆಯಲ್ಲಿಯೇ ನಾನ್ ಕೋವಿಡ್ ಸೇವೆಗಳನ್ನು ಮತ್ತು ಸಾರ್ವಜನಿಕ ರೋಗಿಗಳ ಹಿತದೃಷ್ಟಿಯಿಂದ ಪುನಾರಾರಂಭಿಸಲಾಗಿದೆ.

      ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ಟಿ.ಎ. ವೀರಭದ್ರಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(Visited 9 times, 1 visits today)

Related posts

Leave a Comment