ಕಾಂಗ್ರೆಸ್ ಮುನ್ನಡೆಸಲು ಡಿ.ಕೆ.ಶಿವಕುಮಾರ್ ಸಮರ್ಥರು : ಆರ್.ರಾಜೇಂದ್ರ

ತುಮಕೂರು: 

      ಕೋವಿಡ್-19 ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸಲು ಕಷ್ಯ ಸಾಧ್ಯ. ಹಾಗಾಗಿ ಪದಗ್ರಹಣ ಸಮಾರಂಭವನ್ನು ಪ್ರತಿಯೊಬ್ಬ ಕಾರ್ಯಕರ್ತರು ವೀಕ್ಷಿಸಲು ಅನುವಾಗುವಂತೆ ಜಿಲ್ಲೆಯ ಎಲ್ಲ ಪಂಚಾಯ್ತಿ ಮಟ್ಟದಲ್ಲಿ ಮತ್ತು ವಾರ್ಡ್‍ಗಳ ವ್ಯಾಪ್ತಿಯಲ್ಲಿ ಎಲ್.ಇ.ಡಿ. ಅಳವಡಿಸಲಾಗುವುದು ಎಂದು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್. ರಾಜೇಂದ್ರ ಹೇಳಿದರು.

       ನಗರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಸಮರ್ಥ ಹಾಗೂ ದಕ್ಷ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಆಯ್ಕೆಯಾಗಿರುವುದು ಪಕ್ಷಕ್ಕೆ ದೊಡ್ಡ ಶಕ್ತಿಯನ್ನು ತಂದಿದೆ. ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕರೆ ತರುವಂತಹ ಕೆಲಸವನ್ನು ಮಾಡುವುದಾಗಿ ಹೇಳಿದರು.

      ಪ್ರತಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು ಎಂದರು.

      ಕೋವಿಡ್-19ರ ಹಿನ್ನೆಲೆಯಲ್ಲಿ ಅಧ್ಯಕ್ಷರ ಪದಗ್ರಹಣದಲ್ಲಿ ಭಾಗವಹಿಸಲು ಕಷ್ಟಸಾಧ್ಯ. ಆದ್ದದರಿಂದ ಜಿಲ್ಲೆಯ ಎಲ್ಲಾ ಪಂಚಾಯ್ತಿ ಮಟ್ಟದಲ್ಲಿ ಮತ್ತು ವಾರ್ಡಗಳಲ್ಲಿ ಎಲ್.ಇ.ಡಿ.ಗಳನ್ನು ಅಳವಡಿಸಿ ಪ್ರತಿಯೊಬ್ಬ ಕಾರ್ಯಕರ್ತರು ನೇರವಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ವೀಕ್ಷಿಸುವಂತೆ ವ್ಯವಸ್ಥೆ ಮಾಡಲಾಗುವುದು. ಎಲ್ಲ ಯುವಕರು ಪದಗ್ರಹಣ ಕಾರ್ಯಕ್ರಮವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

      ರಾಜ್ಯ ಯುವ ಕಾಂಗ್ರೆಸ್ ತುಮಕೂರು ಉಸ್ತುವಾರಿ ಭವ್ಯ ಮಾತನಾಡಿ, ತುಮಕೂರು ಜಿಲ್ಲೆಯು ಅನ್ನದಾಸೋಹಕ್ಕೆ ಪ್ರಸಿದ್ದಿಯಾಗಿದ್ದು, ಕೊರೊನಾ ಸಂದರ್ಭದಲ್ಲಿ ರಾಜೇಂದ್ರ ಅವರು ಸುಮಾರು ಲಕ್ಷಕ್ಕೂ ಅಧಿಕ ಜನರಿಗೆ ಅನ್ನದಾಸೋಹದ ವ್ಯವಸ್ಥೆ ಮಾಡಿದ್ದು ಶ್ಲಾಘನೀಯ ಎಂದರು.

      ರಾಜೇಂದ್ರರವರು ರಾಜ್ಯ ಉಪಾಧ್ಯಕ್ಷರಾಗಿ ಉತ್ತಮ ರೀತಿಯಲ್ಲಿ ಸಂಘಟನೆ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಲು ಮುಂದಾಗುವಂತೆ ಅವರು ಸಲಹೆ ನೀಡಿದರು.

      ರಾಜ್ಯ ಯುವ ಕಾಂಗ್ರೆಸ್ನವ ಉಸ್ತುವಾರಿ ರಾಘವೇಂದ್ರ ಪ್ರಸಾದ್ ಮಾತನಾಡಿ, ತುಮಕೂರು ಜಿಲ್ಲೆಯ ಎಲ್ಲ 11 ತಾಲ್ಲೂಕುಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಲಾಗುವುದು. ಪ್ರತಿ ಬೂತ್ಗೆತ 5 ಜನ ಕಾರ್ಯಕರ್ತರನ್ನು ನೇಮಕ ಮಾಡಿ ಪ್ರತಿ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭವನ್ನು ವೀಕ್ಷಿಸಲು ಅನುಕೂಲ ಕಲ್ಪಿಸಲಾಗುವುದು ಎಂದರು.

      ಸಭೆಯಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಶಶಿ ಹುಲಿಕುಂಟೆ ಮಠ್, ಸುಶೀಲ್, ರಜನಿ, ಸಿದ್ಧರಾಮಣ್ಣ, ಮೂರ್ತಿ, ಇಲಾಯಿ ಸಿಖಂದರ್, ಮೋಹನ್, ಅನಿಲ್‍ಕುಮಾರ್, ವಿನಯ್‍ಕುಮಾರ್, ಶ್ರೀಧರ್, ವೆಂಕಿ, ಪರಶುರಾಮ್, ಶರತ್, ಸಯ್ಯಾದ್, ಪುಟ್ಟರಾಜು ಇದ್ದರು.

(Visited 7 times, 1 visits today)

Related posts

Leave a Comment