ಕೊರೊನಾ ಭೀತಿ : ಪರೀಕ್ಷಾ ಕೇಂದ್ರದ ಹೊರಗೆ ನಿಂತಿರುವ ಪೋಷಕರು!!

ತುಮಕೂರು : 

     ಕೊರೊನಾ ಭೀತಿಯ ನಡುವೆಯೂ ರಾಜ್ಯದಲ್ಲಿ ವಿದ್ಯಾರ್ಥಿಗಳು ಎಸ್ಎಸ್ಎಲ್​ಸಿ ಪರೀಕ್ಷೆಆರಂಭವಾಗಿದ್ದು, ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ.

     ಅತ್ತ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಹೋಗಿದ್ದರೆ, ಇತ್ತ ಪೋಷಕರು ಗಾಬರಿಯಿಂದ ಹೊರಗಡೆಯೇ ನಿಂತು ಕಾಯುತ್ತಿರುವ ದೃಶ್ಯ ಜಿಲ್ಲೆಯಲ್ಲಿ ಕಂಡು ಬಂದಿತು.

      ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆಯಲಿದ್ದಾರೆ, ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ, ಪೋಷಕರು ಗಾಬರಿಯಾಗಬೇಡಿ ಎಂದು ಧ್ವನಿವರ್ಧಕದ ಮೂಲಕ ಪೊಲೀಸ್ ಸಿಬ್ಬಂದಿ ಹಾಗೂ ಸ್ವಯಂ ಸೇವಕರು ಹೇಳುತ್ತಿದ್ದರು.

 

(Visited 3 times, 1 visits today)

Related posts