ತುಮಕೂರು : 81 ಮಂದಿಗೆ ಕೋವಿಡ್-19 ಸೋಂಕು ದೃಢ!!

 ತುಮಕೂರು:

      ಜಿಲ್ಲೆಯಲ್ಲಿಂದು 81 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1617ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ಇಂದು ತುಮಕೂರು-38, ಕುಣಿಗಲ್-11, ತಿಪಟೂರು-10, ಮಧುಗಿರಿ-8, ಪಾವಗಡ-5, ಗುಬ್ಬಿ-4, ತುರುವೇಕೆರೆ-2, ಹಾಗೂ ಶಿರಾ, ಕೊರಟಗೆರೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ತಲಾ-1, ಸೇರಿದಂತೆ ಒಟ್ಟು 81 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.

      ಇಂದು ಜಿಲ್ಲಾಸ್ಪತ್ರೆಯಿಂದ 11 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 736 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 844 ಸಕ್ರಿಯ ಪ್ರಕರಣಗಳಿದ್ದು, ಇಂದು ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಈವರೆಗೆ 52 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(Visited 5 times, 1 visits today)

Related posts

Leave a Comment