ತುಮಕೂರಿನಲ್ಲಿ ಪತ್ರಕರ್ತರಿಂದ ಪ್ರತಿಭಟನೆ!!

ತುಮಕೂರು:

       ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಕಿಡಿಗೇಡಿಗಳು ನಡೆಸಿದ ಹಲ್ಲೆಯನ್ನ ಖಂಡಿಸಿ ತುಮಕೂರಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್ ನೇತೃತ್ವದಲ್ಲಿ ಪತ್ರಕರ್ತರು ಪ್ರತಿಭಟನೆ ನಡೆಸಿದರು.

      ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ಮಾಡುವ ಮೂಲಕ ಹಲ್ಲೆಕೋರರನ್ನು ಬಂದಿಸುವಂತೆ ಒತ್ತಾಯಿಸಿ, ಹಾಗೂ ಇಂತಹ ಘಟನೆಗಳು ಮರುಕಳಿಸಿದಂತೆ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

      ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾತನಾಡಿ ಪತ್ರಕರ್ತರು ಯಾವುದೇ ಜಾತಿ ಧರ್ಮ ವನ್ನ ಲೆಕ್ಕಿಸದೇ ಪಕ್ಷಾತೀತವಾಗಿ ಪ್ರಾಮಾಣಿಕತೆಯಿಂದ ಘಟನೆಯ ಸತ್ಯಾಸತ್ಯತೆಯನ್ನ ವರದಿ ಮಾಡಲು ತೆರಳಿರುತ್ತಾರೆ ಅಂತಹ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ, ಹಾಗೂ ಇದೇ ರೀತಿ ಕಳೆದ ಒಂದು ವಾರದಲ್ಲಿ ಬೇರೆ ಬೇರೆ ಕಡೆಗಳಲ್ಲಿ  ಪತ್ರಕರ್ತರ ಮೇಲೆ ಹಲ್ಲೆಗಳಂತಹ ಘಟನೆಗಳು ನಡೆದಿವೆ. ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ  ಪತ್ರಕರ್ತರಿಗೆ ರಕ್ಷಣೆಯನ್ನ ಒದಗಿಸಬೇಕು ಎಂದು ಒತ್ತಾಯಿಸಿದರು.

 

(Visited 2 times, 1 visits today)

Related posts

Leave a Comment