ತುಮಕೂರು : 

     ಜಿಲ್ಲೆಯಲ್ಲಿ 117 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3866 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 63, ಪಾವಗಡ-14, ಕುಣಿಗಲ್-10, ಮಧುಗಿರಿ-02, ತುರುವೇಕೆರೆ-06, ಶಿರಾ-4, ತಿಪಟೂರು-09, ಗುಬ್ಬಿ-05, ಚಿಕ್ಕನಾಯಕನಹಳ್ಳಿ-04 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 117 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

      ಜಿಲ್ಲಾಸ್ಪತ್ರೆಯಿಂದ 102 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 2767 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 980 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 11+ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

(Visited 12 times, 1 visits today)