ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛ ಪರಿಸರ ಕಾರ್ಯಕ್ರಮ

 ತುಮಕೂರು:

       ಸ್ಮಾರ್ಟ್ ಸಿಟಿ ವತಿಯಿಂದ ಗಾಂಧಿಜಯಂತಿ ಪ್ರಯುಕ್ತ ಅಕ್ಟೋಬರ್ 2ರಂದು ಸ್ವಚ್ಛ ಪರಿಸರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

      ಗಾಂಧೀಜಿಯವರ ಕನಸಿನ ಸ್ವಚ್ಛಭಾರತ ಅಭಿಯಾನದಡಿ ನಾಮದ ಚಿಲಮೆಯಲ್ಲಿನ ಪ್ಲಾಸ್ಟಿಕ್ ಸ್ವಚ್ಛಗೊಳಿಸುವ ಮೂಲಕ ಈ ಸ್ವಚ್ಛಪರಿಸರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗಾಂಧಿಜಯಂತಿಯನ್ನು ಇನ್ನಷ್ಟು ಅರ್ಥಪೂರ್ಣವನ್ನಾಗಿಸುವ ಸಲುವಾಗಿ ಪರಿಸರ ಸ್ನೇಹಿ ಮತ್ತು ಆರೋಗ್ಯವನ್ನು ವೃದ್ಧಿಸುವ ಸೈಕಲ್ ತುಳಿಯುವ ಹವ್ಯಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ 150 ಹವ್ಯಾಸಿ ಸೈಕ್ಲಿಸ್ಟ್‍ಗಳನ್ನೊಳಗೊಂಡ ತಂಡವು ನಗರದ ಬಾಲಗಂಗಾಧರ ಸ್ವಾಮಿ ವೃತ್ತದಿಂದ ಪ್ರವಾಸಿ ತಾಣವಾದ ನಾಮದ ಚಿಲುಮೆಯವರೆಗೂ ಸೈಕ್ಲೋಥಾನ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

      ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಟಿ ರಂಗಸ್ವಾಮಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಸೈಕ್ಲೋಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

      ಇದೇ ಸಂದರ್ಭದಲ್ಲಿ ತುಮಕೂರು ನಗರದಲ್ಲಿ ಹಸಿರೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ 150 ಸಸಿಗಳನ್ನು ಆದರ್ಶನಗರದ ಉದ್ಯಾನವನದಲ್ಲಿ ಮತ್ತು ವರ್ತುಲ ರಸ್ತೆ ಬದಿಯಲ್ಲಿ ನೆಡಲಾಯಿತಲ್ಲದೆ, ಅಕ್ಟೋಬರ್ 1ರಂದು ನಗರದ ವಿದ್ಯಾರ್ಥಿಗಳಿಗೆ ಆನ್‍ಲೈನ್ ಚಿತ್ರಕಲೆ ಮತ್ತು ಬ್ಲಾಗ್ ಬರೆಯುವ ಸ್ಪರ್ಧೆಯನ್ನು ನಡೆಸಲಾಯಿತು. ಈ ಸ್ಪರ್ಧೆಯಲ್ಲಿ ವಿಜೇತರಾದ 6 ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು. ಸಾರ್ವಜನಿಕರಲ್ಲಿ ಗಾಂಧೀಜಿಯ ತತ್ವಗಳ ಬಗ್ಗೆ ಅರಿವು ಮೂಡಿಸಲು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಅಳವಡಿಸಲಾಗಿರುವ ಡಿಜಿಟಲ್ ಡಿಸ್‍ಪ್ಲೇ ಬೋರ್ಡ್‍ಗಳಲ್ಲಿ ಗಾಂಧೀಜಿಯ ತತ್ವಗಳನ್ನು ದಿನಪೂರ್ತಿ ಪ್ರದರ್ಶಿಸಲಾಗಿತ್ತು.

 

(Visited 5 times, 1 visits today)

Related posts